ಚಿತ್ರದುರ್ಗ|ಪಹಲ್ಗಾಮ್‍ ಉಗ್ರರ ದಾಳಿ ಹಿನ್ನಲೆ ಬಿಜೆಪಿಯ ಜನಾಕ್ರೋಶ ಯಾತ್ರೆಯನ್ನು ಮುಂದೂಡಲಾಗಿದೆ : ಎ.ಮುರಳಿ.

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817

ಚಿತ್ರದುರ್ಗ ಏ. 23 : ಜಮ್ಮು ಕಾಶ್ಮೀರದ ಪಹಲ್ಗಾಮ್‍ನಲ್ಲಿ ಉಗ್ರರು ನಡೆಸಿರುವ ದಾಳಿಗೆ 26 ಮಂದಿ ಬಲಿಯಾದ ಹಿನ್ನಲೆಯಲ್ಲಿ ಏ. 25ರಂದು ಚಿತ್ರದುರ್ಗಕ್ಕೆ ಆಗಮಿಸಬೇಕಿದ್ದ ಬಿಜೆಪಿಯ ಜನಾಕ್ರೋಶ ಯಾತ್ರೆಯನ್ನು ಮುಂದೂಡಲಾಗಿದೆ ಎಂದು ಬಿಜೆಪಿ. ಜಿಲ್ಲಾಧ್ಯಕ್ಷ ಎ.ಮುರಳಿ ತಿಳಿಸಿದ್ದಾರೆ.

ಚಿತ್ರದುರ್ಗ ನಗರದ ಭಾರತೀಯ ಜನತಾ ಪಾರ್ಟಿ ಕಾರ್ಯಲಯದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ರಾಜ್ಯ ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ ನೀತಿ ವಿರೋಧಿಸಿ ರಾಜ್ಯಾದ್ಯಂತ ಸಂಚರಿಸುತ್ತಿರುವ ಜನಾಕ್ರೋಶ ಯಾತ್ರೆ ಏ.25ರ ಬೆಳಿಗ್ಗೆ 11 ಕ್ಕೆ ಚಿತ್ರದುರ್ಗ ಪ್ರವೇಶಿಸಬೇಕಿತ್ತು. ಆದರೆ ಜಮ್ಮು ಕಾಶ್ಮೀರದ ಪಹಲ್ಗಾಮ್‍ನಲ್ಲಿ ಉಗ್ರರು ನಡೆಸಿರುವ ದಾಳಿಗೆ 26 ಮಂದಿ ಬಲಿಯಾಗಿದ್ದು ಇದರಲ್ಲಿ ಕರ್ನಾಟಕದ ಇಬ್ಬರ ಮೃತದೇಹಗಳು ರಾಜ್ಯಕ್ಕೆ ಬರುತ್ತಿರುವುದರಿಂದ ಶೋಕ ವ್ಯಕ್ತಪಡಿಸುವುದಕ್ಕಾಗಿ ಜನಾಕ್ರೋಶ ಯಾತ್ರೆಯನ್ನು ಮುಂದೂಡಿರುವುದಾಗಿ ತಿಳಿಸಿದರು.

ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಮಾತನಾಡಿ ಭಾರತದ ಪ್ರವಾಸಿ ತಾಣ ಜಮ್ಮು-ಕಾಶ್ಮೀರದ ಪಹಲ್ಗಾಮ್‍ನಲ್ಲಿ ಭಯೋತ್ಪಾದಕರ ದಾಳಿಗೆ 26 ಮಂದಿ ಬಲಿಯಾಗಿರುವುದು ಅತ್ಯಂತ ಖಂಡನೀಯ. ಈ ವಿಚಾರದಲ್ಲಿ ಯಾವ ಪಕ್ಷಗಳು ರಾಜಕಾರಣ ಮಾಡಬಾರದು. ದೇಶದ ಐಕ್ಯತೆ ದೃಷ್ಟಿಯಿಂದ ಎಲ್ಲರೂ ಒಗ್ಗಟ್ಟು ಪ್ರದರ್ಶಿಸಬೇಕು. ಪುಲ್ವಾಮಾ ದಾಳಿ ನಡೆದಾಗ ಅದಕ್ಕೆ ಪ್ರತಿಯಾಗಿ ಸರ್ಜಿಕಲ್ ಸ್ಟ್ರೈಕ್ ನಡೆದಿಲ್ಲಾ ಎಂದು ವಿರೋಧ ಪಕ್ಷದವರು ಗೇಲಿ ಮಾಡಿದ್ದುಂಟು. ಒಟ್ಟಾರೆ ಪಹಲ್ಗಾಮ್ ದಾಳಿಗೆ ರಾಜಕೀಯ ಬಣ್ಣ ಹಚ್ಚುವುದು ಬೇಡ ಎಂದರು.

ವಿಧಾನಪರಿಷತ್ ಸದಸ್ಯ ಕೆ.ಎಸ್.ನವೀನ್ ಮಾತನಾಡಿ ಪಾಕಿಸ್ಥಾನ ಬೆಂಬಲಿತ ಉಗ್ರಗಾಮಿಗಳು ಜಮ್ಮು-ಕಾಶ್ಮೀರದ
ಪಹಲ್ಗಾಮ್‍ನಲ್ಲಿ ದಾಳಿ ನಡೆಸಿ ದೇಶದ ಶಾಂತಿಯನ್ನು ಕದಡುತ್ತಿದ್ದಾರೆ. ನಮ್ಮ ದೇಶದ ಪ್ರಧಾನಿ ಮೋದಿ ಹಾಗೂ ಗೃಹಮಂತ್ರಿ
ಅಮಿತ್‍ಷಾ ಇವರುಗಳು ಉಗ್ರಗಾಮಿಗಳಿಗೆ ತಕ್ಕ ಪಾಠ ಕಲಿಸುತ್ತಾರೆ. ಪ್ರವಾಸಿಗರು ಯಾರೂ ಭಯ ಪಡುವುದು ಬೇಡ
ಉಗ್ರಗಾಮಿಗಳು ನಡೆಸಿರುವ ದಾಳಿಯಲ್ಲಿ 26 ಮಂದಿ ಅಮಾಯಕರು ಬಲಿಯಾಗಿರುವುದನ್ನು ನಾವುಗಳು ಖಂಡಿಸುತ್ತೇವೆ.
ದುಷ್ಟಕೂಟಕ್ಕೆ ನಮ್ಮ ದೇಶದ ಪ್ರಧಾನಿ ಮೋದಿರವರು ತಕ್ಕ ಪಾಠ ಕಲಿಸದೆ ಬಿಡುವುದಿಲ್ಲ ಎಂದು ತಿಳಿಸಿದರು.

ಬಿಜೆಪಿಯ ಪ್ರಧಾನ ಕಾರ್ಯದರ್ಶಿಗಳಾದ ಜಿ.ಟಿ.ಸುರೇಶ್‍ಸಿದ್ದಾಪುರ, ಸಂಪತ್ ಕುಮಾರ್, ನಗರ ಮಂಡಲ ಅಧ್ಯಕ್ಷ ಲೋಕೇಶ್,
ಗ್ರಾಮಾಂತರ ಮಂಡಲ ಅಧ್ಯಕ್ಷ ನಾಗರಾಜ್, ರೈತ ಮೋರ್ಚಾ ಜಿಲ್ಲಾಧ್ಯಕ್ಷ ವೆಂಕಟೇಶ್ ಯಾದವ್, ಮಾಧ್ಯಮ ವಕ್ತಾರ ದಗ್ಗೆ
ಶಿವಪ್ರಕಾಶ್, ನಾಗರಾಜ್‍ಬೇದ್ರೆ, ಛಲವಾದಿ ತಿಪ್ಪೇಸ್ವಾಮಿ ಹಾಜರಿದ್ದರು.

ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 

WhatsApp Group:https://chat.whatsapp.com/KnDIfiBURQ9G5sLEJLqshk

Facebook page: https://www.facebook.com/samagrasudii

Sharechat: https://sharehat.com/profile/edu514826335?d=n

Twitter: https://twitter.com/SuddiSamagra

Threads: https://www.threads.net/@samagrasuddi.co.in

Instagram: https://www.instagram.com/samagrasuddi.co.in/

Telegram: https://t.me/+E1ubNzdguQ5jN2Y1

Leave a Reply

Your email address will not be published. Required fields are marked *