
ಬೆಂಗಳೂರು : ರಾಜ್ಯದ 35 ಶೈಕ್ಷಣಿಕ ಜಿಲ್ಲೆಗಳ ಸರ್ಕಾರಿ ಪ್ರೌಢ ಶಾಲೆಗಳಲ್ಲಿ ವ್ಯಾಸಂಗ ಮಾಡಿ ಎಸ್ ಎಸ್ ಎಲ್ ಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ಪ್ರತಿ ಜಿಲ್ಲೆಯ ಮೂರು ಪ್ರತಿಭಾವಂತ ವಿದ್ಯಾರ್ಥಿಗಳು ಮತ್ತು 204 ವಲಯ ಮಟ್ಟದಲ್ಲಿ ಅತಿ ಹೆಚ್ಚು ಅಂಕ ಪಡೆದ ಪ್ರತಿ ಕ್ಷೇತ್ರ ಶಿಕ್ಷಣಾಧಿಕಾರಿ ವಲಯದ ಮೂರು ವಿದ್ಯಾರ್ಥಿಗಳು ಒಳಗೊಂಡಂತೆ ಒಟ್ಟು 756 ಫಲಾನುಭವಿಗಳಿಗೆ ಉಚಿತ ಲ್ಯಾಪ್‌ಟಾಪ್ ವಿತರಿಸಲು ಸರಕಾರ ನಿರ್ಧರಿಸಿದೆ.
ಉಚಿತ ಲ್ಯಾಪ್‌ಟಾಪ್ ವಿತರಿಸಲು 3.25 ಕೋಟಿ ರೂ. ಗಳನ್ನು ಸರಕಾರ ಒದಗಿಸಿದೆ. ಜಿಲ್ಲಾ ಮಟ್ಟದಲ್ಲಿ ಲ್ಯಾಪ್ ಟಾಪ್ ಪಡೆದ ವಿದ್ಯಾರ್ಥಿಯನ್ನು ವಲಯ ಮಟ್ಟಕ್ಕೆ ಮತ್ತೆ ಪರಿಗಣಿಸುವಂತಿಲ್ಲ ಎಂದು ಸರಕಾರ ಮಂಡಳಿಗೆ ಸೂಚಿಸಿದೆ.