Horoscope Today 30 April: ಈ ರಾಶಿಯವರಿಗೆ ಮಕ್ಕಳಿಂದ ಸಂತೋಷಕರವಾದ ವಾರ್ತೆಯು ಸಿಗಲಿದೆ.

Horoscope Today 30 April: ಈ ರಾಶಿಯವರು ಅಲ್ಪವನ್ನಾದರೂ ಅನ್ಯರಿಗೆ ನೀಡಿವರು

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು: ವಸಂತ, ಸೌರ ಮಾಸ: ಮೇಷ ಮಾಸ, ಮಹಾನಕ್ಷತ್ರ: ಭರಣೀ, ಮಾಸ: ವೈಶಾಖ, ಪಕ್ಷ: ಶುಕ್ಲ, ವಾರ: ಬುಧ, ತಿಥಿ: ತೃತೀಯಾ ನಿತ್ಯನಕ್ಷತ್ರ: ರೋಹಿಣೀ, ಯೋಗ: ಶೋಭನ ಕರಣ: ಕೌಲವ, ಸೂರ್ಯೋದಯ – 06 : 11 am, ಸೂರ್ಯಾಸ್ತ – 06 : 48 pm, ಇಂದಿನ ಶುಭಾಶುಭಕಾಲ: ರಾಹು ಕಾಲ 12:30 – 14:04, ಯಮಘಂಡ ಕಾಲ 07:46 – 09:21, ಗುಳಿಕ ಕಾಲ 10:55 – 12:30

ಮೇಷ ರಾಶಿ: ನಿಮ್ಮನ್ನೇ ಕೇಳಿ ಬಂದವರಿಗೆ ಇಲ್ಲವೆನುವುದು ಬೇಡ. ಮುಂದಿನ ಬದುಕಿಗೆ ಯೋಜನೆ ಮಾಡುವಿರಿ. ಕೆಲವು ಸಂಗತಿಗಳನ್ನು ನೀವು ಗೊತ್ತಿಲ್ಲದಂತೆ ಇರುವುದು ಒಳ್ಳೆಯದು. ಇಂದು ನಿಮ್ಮ ಪರೀಕ್ಷೆಯ ಕಾಲ. ಅದಕ್ಕೆ ಯೋಗ್ಯವಾದ ಉತ್ತರವನ್ನು ಕೊಡುವ ಭರದಲ್ಲಿ ಅವಘಡಗಳು ಆಗಬಹುದು. ನೀವು ಯಾವುದನ್ನು ಆರಿಸಿಕೊಳ್ಳುವಿರಿ ಎನ್ನುವುದು ಮುಖ್ಯವಾಗಲಿದೆ. ಅಜಾಗರೂಕತೆಯಿಂದ ಹಣವು ಹೋಗುವುದು. ಸಂಗಾತಿಯ ಜೊತೆ ಕಾಲವನ್ನು ಕಳೆದರೂ ಸಂತೋಷವಾಗಿ ಇಡಲಾಗದು. ತಂದೆಯ ಕಡೆಯಿಂದ ನಿಮಗೆ ಯಾವ ಸಹಾಯವೂ ಸಿಗದೇಹೋಗಬಹುದು. ಕರಕುಶಲದಿಂದ ಅಲ್ಪ ಆದಾಯವನ್ನು ಪಡೆಯುವಿರಿ. ಹಳೆಯ ಸ್ನೇಹಿತರ ಭೇಟಿ. ನಿರಂತರ ಕೆಲಸದಿಂದ ನಿಮಗೆ ಸ್ವಲ್ಪ ವಿಶ್ರಾಂತಿಯ ಅವಶ್ಯಕತೆ ಇದೆ. ಯಾವ ಬಂಧನಕ್ಕೂ ಒಳಪಡದೇ ಮನಸ್ಸು ಮುಕ್ತವಾಗಿರಲು ಬಯಸುವುದು. ಹಣಕಾಸಿನ ವಿಚಾರಕ್ಕೆ ಸಹೋದರರ ನಡುವೆ ಕಲಹ. ಸಾಮರಸ್ಯದ ಅಭಾವವು ದ್ವೇಷಕ್ಕೆ ಕಾರಣವಾಗಬಹುದು. ಆಪ್ತವಾದ ವಿಚಾರಗಳ ಜೊತೆ ಹೆಚ್ಚು ಚರ್ಚೆ ಮಾಡುವಿರಿ.

ವೃಷಭ ರಾಶಿ: ಸಂಕಷ್ಟದ ಕುರಿತು ದೀರ್ಘವಾದ ಆಲೋಚನೆ ಬೇಡ. ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳುವಿರಿ. ಎಲ್ಲವೂ ಇದ್ದರೂ ಕೊರತೆ ಕಾಣಿಸುವುದು. ಸತ್ಯವನ್ನೇ ನಂಬಿ ಬದುಕುವವರು ಎಂದು ಇದುವರೆಗೆ ತಿಳಿದದ್ದು ಸುಳ್ಳು ಮಾಡುವಿರಿ. ಮಾತಿಗೆ ಬೆಲೆಯು ಕಡಿಮೆಯಾದೀತು. ಯಾವುದೋ ಸಣ್ಣ ಜವಾಬ್ದಾರಿಯನ್ನು ಕೊಟ್ಟು ನಿಮ್ಮನ್ನು ಸುಮ್ಮನಿರಿಸುವರು. ನಿಮ್ಮನ್ನು ನೀವು ಆದ್ಯಂತವಾಗಿ ನೋಡಿಕೊಳ್ಳಿ. ಇಂದು ಮನಸ್ಸನ್ನು ಏಕಾಗ್ರ ಮಾಡುವುದು ಕಷ್ಟವಾದೀತು. ಬಂಧುಗಳ ಭೇಟಿಯಿಂದ ಸಂತೋಷವಾಗಲಿದೆ. ಪ್ರಯಾಣದ ಸುಖವೂ ಇರಲಿದೆ. ನಿಮ್ಮ ವಿಶ್ರಾಂತಿಯ ಸಮಯವು ಬದಲಾಗಿ ಆರೋಗ್ಯದ ಮೇಲೆ ಕೆಟ್ಟ ಪರಿಣಾಮವನ್ನು ಬೀರುವುದು. ಬಹಳ ದಿನಗಳಿಂದ ಕೆಟ್ಟಿದ್ದ ಆರೋಗ್ಯವು ಸರಿಯಾದರೂ ಆರೋಗ್ಯ ಪೂರ್ಣ ಮನಸ್ಸು ಸರಿಯಾಗಲು ಸಮಯು ಬೇಕು. ತಾಯಿಗೆ ಪ್ರಿಯವಾದುದನ್ನು ಮಾಡುವಿರಿ. ನಿಮ್ಮ ಹೊಣೆಗಾರಿಕೆ ಕಡಿಮೆ ಆದಂತೆ ಅನ್ನಿಸುವುದು. ಆಪ್ತರನ್ನು ನೀವು ಕಳೆದುಕೊಳ್ಳುವ ಸಾಧ್ಯತೆ ಇದೆ. ಹೊಂದಾಣಿಕೆಯು ನಿಮಗೆ ಅನಿವಾರ್ಯವಾದೀತು.

ಮಿಥುನ ರಾಶಿ: ಮಕ್ಕಳಿಗೆ ಬೇಕಾದ ಅನುಕೂಲವಾದ ವ್ಯವಸ್ಥೆ ಮಾಡುವಿರಿ. ನೀವಿಂದು ಬದಲಾವಣೆಯನ್ನು ಇಷ್ಟಪಡುತ್ತೀರಿ. ಮಕ್ಕಳ ವಿಚಾರದಲ್ಲಿ ನಿಮಗೆ ಬೇಸರವಾಗಲಿದೆ. ಹೆಸರಾಂತ ವ್ಯಕ್ತಿಗಳ ಸಹವಾಸವು ನಿಮಗೆ ಸಿಗಲಿದೆ. ಮನೆಯ ಕೆಲಸವು ಬಹಳ ಆಯಾಸವನ್ನು ಕೊಡಬಹುದು. ಒತ್ತಡವನ್ನು ನಿಭಾಯಿಸುವ ಕಲೆ ನಿಮಗೆ ಸಿದ್ಧಿಸಿದ್ದು ಅದನ್ನು ಚೆನ್ನಾಗಿ ನಿರ್ವಹಿಸಬಲ್ಲಿರಿ. ದೊಡ್ಡ ಅಪಾಯದಿಂದ ನೀವು ಹೊರಬರಲಿದ್ದೀರಿ. ಎಂದೋ‌ ಮಾಡಿದ ಇಂದು ನಿಮ್ಮ ಆಪತ್ತಿಗೆ ಬರಲಿದೆ. ಸಂಗಾತಿಗೆ ತಿಳಿಸಬೇಕಾದ ಸತ್ಯವನ್ನು ಮುಚ್ಚಿಡಲು ಹೋಗಬೇಡಿ. ಮುಂದೆ ಅದೇ ದೊಡ್ಡ ಕಂಟಕವಾದೀತು. ಮನಸ್ಸು ಬಹಳ ಖಿನ್ನತೆಗೆ ಹೋಗಬಹುದು. ಮಾತಿಗೆ ಕಟ್ಟು ಬೀಳುವ ಅಗತ್ಯವಿಲ್ಲ. ಯಾವ ವಿಚಾರವನ್ನೂ ತೀರ್ಮಾನಿಸಲಾಯಿತು ಆಗದು. ವ್ಯಾಪಾರದಲ್ಲಿ ನಿಮ್ಮ ಜಾಣ್ಮೆಯನ್ನು ತೋರಿಸುವಿರಿ. ಅಹಂಕಾರದ ಮಾತುಗಳು ಇತರರಿಗೆ ಹಿಂಸೆಯಾದೀತು. ಏಕಾಗ್ರತೆಯನ್ನು ಬೆಳೆಸಿಕೊಳ್ಳಲು ಅಭ್ಯಾಸ ಮಾಡುವಿರಿ. ವಾಹನದ ವಿಚಾರಕ್ಕೆ ಹೊಂದಾಣಿಕೆ ಕಷ್ಟವಾಗಬಹುದು.

ಕರ್ಕಾಟಕ ರಾಶಿ: ಉನ್ನತ ಪದವೀಧರರಾಗಿ ಕುಟುಂಬಕ್ಕೆ ಹೆಮ್ಮೆ ತರುವಿರಿ. ನಿಮಗೆ ಅವಶ್ಯಕ ವಸ್ತುಗಳ ಬಗ್ಗೆ ಅತಿಯಾದ ಹಂಬಲವಿರುವುದು. ಮೇಲಿನಿಂದ ಬಿದ್ದು ಪೆಟ್ಟು‌‌ಮಾಡಿಕೊಳ್ಳುವಿರಿ. ನೀವಿಂದು ಪ್ರೀತಿಸಲು ಆರಂಭಿಸುವಿರಿ. ಅವಸರದಲ್ಲಿ ಅನಾಹುತವಾದೀತು. ಸಮಾರಂಭದಲ್ಲಿ ದೂರದ ಬಂಧುಗಳ ಸಮಾಗಮ. ನಿಮ್ಮ ಜವಾಬ್ದಾರಿಗಳು ಹೆಚ್ಚಾಗಿ ಅದನ್ನು ಕಳೆದುಕೊಳ್ಳುವ ಆಲೋಚ‌ನೆ‌ಮಾಡುವಿರಿ. ಧಾರ್ಮಿಕ‌ ಕ್ಷೇತ್ರಗಳಿಗೆ ಭೇಟಿ ನೀಡಲಿದ್ದೀರಿ. ನಿಮ್ಮ ವ್ಯಕ್ತಿತ್ವವನ್ನು ಕಂಡು ಕೆಲವರು ಸಲಹೆಗಳನ್ನು ಕೊಡಲು ಬರಬಹುದು. ಯಾವುದೇ ಪ್ರತ್ಯುತ್ತರಗಳನ್ನು ಕೊಡಲು ಹೋಗಬೇಡಿ. ಸಮಾಧಾನದಿಂದ ಆಲೋಚಿಸಿ. ನಿಮಗೆ ಅವಶ್ಯಕವಾದವೂ ಇರುತ್ತವೆ. ನಿಮ್ಮ ಸಹಾಯ ಪಡೆದವರಿಂದ ಪ್ರತ್ಯುಪಕಾರವಾಗಲಿದೆ. ಉಯಾರದೋ ವೈಯಕ್ತಿಕ ವಿಚಾರಗಳು ನಿಮ್ಮ ದಾಂಪತ್ಯದಲ್ಲಿ ಒಡಕು ತರಬಹುದು. ಅತಿಥಿಗಳ ಆಗಮನದಿಂದ ನಿಮಗೆ ಸಂತೋಷವಾಗಲಿದೆ. ನಿಮ್ಮ ಸ್ವಭಾವದಲ್ಲಿ ಆದ ಬದಲಾವಣೆಯುಂದ ಅಚ್ಚರಿಯಾದೀತು. ನಿಮ್ಮದಲ್ಲದ್ದನ್ನು ನಿಮ್ಮದೆಂದು ವಾದಿಸಲು ಹೋಗಬೇಡಿ.

ಸಿಂಹ ರಾಶಿ: ಹೊಸ ಯಂತ್ರಗಳನ್ನು ಖರೀದಿಸುವಿರಿ. ಪರಿಚಿತರ ಮನೆಗೆ ಅತಿಥಿಯಾಗಿ ಹೋಗುವಿರಿ. ವಿವಾಹವು ಯೋಜನೆಗೊಳ್ಳದೇ ಬೇಸರವಾಗಿ ಮನೆಯಲ್ಲಿ ಕಲಹಗಳು ಆಗಬಹುದು. ನಿಮ್ಮ ಮಾತಿನಿಂದ ಮನೆಯವರಲ್ಲಿ ಆತಂಕದ ವಾತಾವರಣವೂ ಸೃಷ್ಟಿಯಾಗಲಿದೆ‌. ಧಾರ್ಮಿಕ ಮುಖಂಡರ ಜೊತೆ ಕಲಹ ಮಾಡಿಕೊಳ್ಳುವಿರಿ. ಮನೆಯಿಂದ ದೂರವಿರುವ ಆಲೋಚನೆಯನ್ನು ಮಾಡುವಿರಿ. ಭೂಮಿಯ ವ್ಯವಹಾರದಲ್ಲಿ ಅಲ್ಪಲಾಭವು ಆಗಲಿದೆ. ಮನೆಯನ್ನು ಇಂದು ಬದಲಾಯಿಸುವಿರಿ. ಆಹಾರ ಸೇವಿಸುವಾಗ ಆರೋಗ್ಯದ ಬಗ್ಗೆಯೂ ಗಮನವಿರಲಿ. ಹತ್ತಿರದವರ ವಿಯೋಗವಾಗಲಿದೆ. ಕೆಲಸಗಳು ನಿಧಾನಗತಿಯಲ್ಲಿ ಸಾಗಲಿವೆ. ಗೊತ್ತಿಲ್ಲದೇ ಕೆಟ್ಟ ಮಾರ್ಗವನ್ನು ನೀವು ಅನುಸರಿಸಬಹುದು. ನಿಮ್ಮ ಪ್ರಾಮಾಣಿಕತೆಗೆ ಸಿಗುವ ಗೌರವ ಇಲ್ಲವೆನಿಸುವುದು. ಹೂಡಿಕೆಗೆ ನಿಮ್ಮದಾದ ತಂತ್ರವನ್ನು ಬಳಸುವಿರಿ. ಉದ್ಯೋಗದ ಹುಡುಕಾಟಕ್ಕೆ ಓಡಾಡುವುದು ನಿಮಗೆ ಕಷ್ಟವಾದೀತು.

ಕನ್ಯಾ ರಾಶಿ: ಕೃಷಿಯ ಮೇಲೆ ಹೆಚ್ಚು ಗಮನ, ಆದಾಯಕ್ಕಾಗಿ ಪ್ರಯತ್ನ. ನಿಮ್ಮ ಮೇಲೆ ಕಳ್ಳತನದ ಅಪವಾದವು ಬರಬಹುದು. ನಿಮ್ಮ ಮೇಲಧಿಕಾರಿಗಳನ್ನು ನಿಮ್ಮ ಕಡೆಗೆ ಇರುವಂತೆ ನೋಡಿಕೊಳ್ಳುವಿರಿ. ಅವರ ಕಾರ್ಯಗಳನ್ನು ಅಚ್ಚುಕಟ್ಟಾಗಿ ಮಾಡಿಕೊಡಿ. ಪಾಲುದಾರಿಕಯಲ್ಲಿ ಕೆಲವನ್ನು ಮುಚ್ಚಿಡುವಿರಿ. ನಿಮ್ಮ ಗೌರವಕ್ಕೆ ಸಂಗಾತಿಯಿಂದ ತೊಂದರೆಯಾಗುವುದು. ಆಂತರಿಕ ಕಲಹವು ಬಹಿರಂಗವಾಗಲಿದೆ. ವ್ಯಕ್ತಿಗಳನ್ನು ದೂರುವ ಸ್ವಭಾವವನ್ನು ಬಿಟ್ಟುಬಿಡಿ. ಆಂತರಿಕ ಕಲಹವು ಇಂದು ಜಗಜ್ಜಾಹಿರವು ಆಗಬಹುದು. ಅತಿಥಿಗಳ ಆಗಮನದಿಂದ ಮನೆಯಲ್ಲಿ ಸಂತೋಷ. ವಸ್ತ್ರಗಳ ಖರೀದಿಯಲ್ಲಿ ನೀವು ಮಗ್ನರಾಗಿರುತ್ತೀರಿ. ನಿಮ್ಮ ಬೆಳವಣಿಗೆಯನ್ನು ಕಂಡು ಮನೆಯಲ್ಲಿ ಸಂತಸಗೊಳ್ಳಬಹುದು. ಕೆಲವು ತೀರ್ಮಾನದ ವಿಚಾರದಲ್ಲಿ ಮನಸ್ಸು ಗೊಂದಲವಾಗಿ ಇರುವುದು. ಯಾರನ್ನೋ ನಂಬಿ ನೀವು ಇರುವ ಸಣ್ಣ ಕೆಲಸವನ್ನೂ ಬಿಡುವಿರಿ. ಯಾರನ್ನೂ ದೂರದಿಂದಲೇ ನಿರ್ಣಯಿಸುವುದು ಬೇಡ. ಹಿತಶತ್ರುಗಳ ಪಿತೂರಿಯು ನಿಮ್ಮ ಶ್ರೇಯಸ್ಸಿಗೆ ತೊಂದರೆಯನ್ನು ಮಾಡೀತು. ಯಾರನ್ನೋ ಅಟ್ಟಕ್ಕೇರಿಸಿ ನಿಮ್ಮ ಕೆಲಸವನ್ನು ಮಾಡಿಸಿಕೊಳ್ಳುವಿರಿ.

ತುಲಾ ರಾಶಿ: ನಿಮ್ಮ ಗುಣಮಟ್ಟಕ್ಕಿಂತ ಕಡಿಮೆಯ ವಸ್ತುವನ್ನು ಆಯ್ದುಕೊಳ್ಳುವಿರಿ. ಗೃಹನಿರ್ಮಾಣಕ್ಕೆ ಪರಿಚಿತರಿಂದ ವಿಘ್ನ ಬರಲಿದೆ. ನೀವು ಪಾಲುದಾರಿಕೆಯನ್ನು ಬದಲಾಯಿಸುವಿರಿ. ನಿಮ್ಮೊಳಗೆ ಹತ್ತಾರು ದ್ವಂದ್ವಗಳು ಇರಲಿವೆ. ಆಯ್ಕೆ ಮಾಡಿಕೊಳ್ಳುವುದು ಕಷ್ಟವಾದೀತು. ಸಾಲ ಕೊಡುವಾಗ ಸ್ವಪ್ರತಿಷ್ಠೆಯನ್ನು ತೋರಿಸುವಿರಿ.‌ ಹಿರಿಯರ, ಅನುಭವಿಗಳ ಮಾರ್ಗದರ್ಶನವನ್ನು ಹೆಚ್ಚು ಪಡೆದಷ್ಟು ಉತ್ತಮವೇ. ಶ್ರಮದ ಕೆಲಸವು ಆಯಾಸವನ್ನು ತರಲಿದೆ‌. ಅತಿಯಾದ ಆಲಸ್ಯದಿಂದ ನಿದ್ರಿಸುವ ಮನಸ್ಸಿನಲ್ಲಿ ಇರುವಿರಿ. ಸಂಶೋಧನೆಗೆ ಬೇಕಾದ ಸಿದ್ಧತೆಯನ್ನು ಮಾಡಿಕೊಳ್ಳುವಿರಿ. ಸರ್ಕಾರಿ ಉದ್ಯೋಗಿಗಳಿಗೆ ಒತ್ತಡದ ದಿನವಾಗಲಿದೆ. ಯಾರೂ ನನಗೆ ಸಹಾಯಕ್ಕೆ ಬರಲಾರರು ಎಂಬ ಅನಾಥ ಪ್ರಜ್ಞೆಯನ್ನು ನೀವು ಹೊಂದುವಿರಿ. ಆಸೆಯಿಂದ ದುಃಖಿಸ ಏಕಾಗುವುದು. ಇಂದು ಕ್ಲಿಷ್ಟಕರವಾದ ಸನ್ನಿವೇಶದಲ್ಲಿ ಇರುವಿರಿ. ತಪ್ಪಿಸಿಕೊಳ್ಳಲು ಪ್ರಯತ್ನಿಸಿದರೂ ಕಷ್ಟವಾದೀತು. ದ್ವಿಚಕ್ರದ ವಾಹನವನ್ನು ಚಲಾಯಿಸುವಾಗ ಜಾಗರೂಕತೆ ಇರಲಿ. ನಿಮ್ಮ ದುಃಸ್ವಭಾವವು ಇತರರಿಗೂ ಗೊತ್ತಾದೀತು.

ವೃಶ್ಚಿಕ ರಾಶಿ: ವಾಗ್ವಾದದಿಂದ ಉದ್ವೇಗ ಬರಬಹುದು. ನಿಮ್ಮ ಪರಿಶ್ರಮದ ಬಗ್ಗೆ ವಿಶ್ವಾಸವಿರಲಿದೆ. ಸ್ವಾವಲಂಬಿಯಾಗಲು ಹವಣಿಸುವಿರಿ. ಮನೆಯಿಂದ ದೂರವಿರುವವರಿಗೆ ಮನೆಯ ನೆನಪಾಗಲಿದೆ. ನ್ಯಾಯಾಲಯದ ಬಗ್ಗೆ ಗೌರವ ಕಡಿಮೆಯಾಗಬಹುದು. ತನ್ನವರನ್ನು ಕಳೆದುಕೊಳ್ಳುವ ಹೆದರಿಕೆ ಉಂಟಾಗಲಿದೆ. ಎಲ್ಲ ವಿಚಾರದಲ್ಲಿಯೂ ಒಂದಿಲ್ಲೊಂದು ಕಿರಿಕಿರಿ ಕಾಣಿಸೀತು. ಸಮಾಧಾನದಿಂದ ಆಲೋಚಿಸಲು ನಿಮಗೆ ಬಾರದು. ಯಾರನ್ನಾದರೂ ಹೇಳಬಾರದ್ದನ್ನು ಬಾಯ್ತಪ್ಪಿನಿಂದ ಹೇಳಿ ಬೇಸರ ಮಾಡಿಸುವಿರಿ. ಅನಾರೋಗ್ಯವು ನಿಮ್ಮ ನಿಷ್ಕಾಳಜಿಯಿಂದ ಹೆಚ್ಚಾಗಲಿದೆ. ನಿಮ್ಮ ಕೆಲಸಕ್ಕೆ ವೃತ್ತಿಯಲ್ಲಿ ಉತ್ತಮ ಪ್ರಶಂಸೆಯು ಸಿಗುವುದು. ಹಿತಶತ್ರುಗಳ ಬಗ್ಗೆ ಜಾಗರೂಕತೆ ಇರಲಿ. ಇಂದು ನಿಮಗೆ ಉತ್ಸಾಹದ ದಿನವೂ ಆಗಲಿದೆ. ರಾಜಕೀಯ ಲಾಭವನ್ನು ನೀವು ಪಡೆಯುವಿರಿ. ಸ್ನೇಹಿತರಿಗಾಗಿ ಮಾಡಿದ ಸಾಲವು ಕೊನೆಗೆ ನಿಮಗೇ ಸುತ್ತಿಕೊಳ್ಳುವುದು. ವಹಿಸಿಕೊಂಡ ಕಾರ್ಯವನ್ನು ಪೂರ್ಣ ಮಾಡಲು ಸಹೋದ್ಯೋಗಿಗಳ ಸಹಾಯವನ್ನು ಪಡೆಯುವಿರಿ.

ಧನು ರಾಶಿ: ನೀವು ಶಂಕೆ‌ ಪಡುವ ವ್ಯಕ್ತಿ ಯಾರು ಎನ್ನುವುದು ಗೊತ್ತಿರಲಿ. ಇಂದು ನೀವು ಆಲಂಕಾರಿಕ ವಸ್ತುಗಳನ್ನು ಖರೀದಿಸುವ ಆಸಕ್ತಿಯನ್ನು ಇಟ್ಟುಕೊಳ್ಳುವಿರಿ. ಮಕ್ಕಳಿಂದ ನಿಮಗೆ ಸಂತೋಷಕರವಾದ ವಾರ್ತೆಯು ಸಿಗಲಿದೆ. ಜನರನ್ನು ನಿರ್ವಹಿಸುವ ಕಾರ್ಯಕ್ಕೆ ನಿಮಗೆ ಪ್ರಶಂಸೆ ಸಿಗಲಿದೆ. ಆಸ್ತಿಯ ಖರೀದಿಗೆ ಸಂಬಂಧಿಸಿದಂತೆ ದಾಖಲೆಗಳನ್ನು ಸರಿಯಾಗಿ ಪಡೆಯಿರಿ. ಮುಖಂಡರು ಆತ್ಮವಿಶ್ವಾಸವನ್ನು ಬೆಳೆಸಿಕೊಳ್ಳಬೇಕು. ಉದ್ಯಮಿಗಳ ಜೊತೆ ಇಂದು ಕಾಲ ಕಳೆಯುವಿರಿ. ಯಾವುದಾದರೂ ಸುಂದರ ಪ್ರದೇಶಕ್ಕೆ ಹೋಗಬೇಕಾಗಿಬರಬಹುದು. ನಿರಂತರ ಶ್ರಮದ ಫಲವನ್ನು ನೀವಿಂದು ಪಡೆಯುವಿರಿ. ಆಲಸ್ಯವನ್ನು ಬಿಟ್ಟು ಮುನ್ನಡೆಯುವ ತೀರ್ಮಾನವನ್ನು ಮಾಡಲಿದ್ದೀರಿ. ಸಂಗಾತಿಯ ಆರೋಗ್ಯದ ಸಮಸ್ಯೆಯನ್ನು ನೀವು ಬಗೆಹರಿಸುವುದು ಕಷ್ಟವಾದೀತು. ಕುಟುಂಬದ ಜೊತೆ ದೂರ ಪ್ರವಾಸ ಮಾಡುವಿರಿ. ಸಿಟ್ಟಿನ ಸ್ವಭಾವದಿಂದ ಮನೆಯಲ್ಲಿ ಅಸಮಾಧಾನ ಇರುವುದು. ಯಾರ ಮಾತನ್ನೂ ಗಂಭೀರವಾಗಿ ಪರಿಗಣಿಸಲಾರಿರಿ.

ಮಕರ ರಾಶಿ: ಸಂಗಾತಿಯ ಮನಸ್ಸನ್ನು ತಿಳಿಸಿಕೊಳ್ಳಲು ಸಾಧ್ಯವಾಗದು. ಇಂದು ನೀವು ಮಾನಸಿಕವಾಗಿ ಹಿಂಸೆಯನ್ನು ಅನುಭವಿಸಬೇಕಾಗಬಹುದು. ದೂರದ ಪ್ರಯಾಣವನ್ನು ಆದಷ್ಟು ಕಡಿಮೆ ಮಾಡಿಕೊಳ್ಳಿ. ಭೂಮಿಯ ಕ್ರಯ ಮತ್ತು ವಿಕ್ರಯದಲ್ಲಿ ನಷ್ಟವನ್ನು ಅನುಭವಿಸಬೇಕಾಗಬಹುದು. ಸರ್ಕಾರಿ ಉದ್ಯೋಗದಲ್ಲಿ ವಿಶೇಷ ಭತ್ಯೆಯು ಸಿಗಬಹುದಾಗಿದೆ. ಮನೆಯ ಸದಸ್ಯರ ಜೊತೆ ಹೆಚ್ಚು ಸಮಯ ಕಾಲಹರಣ ಮಾಡುವಿರಿ. ನಿಮ್ಮ ಕಾರ್ಯದಲ್ಲಿ ಬರುವ ತೊಂದರೆಯನ್ನು ದೂರಮಾಡಲು ಶಕ್ತರಾಗಿದ್ದೀರಿ. ಹಿತಶತ್ರುಗಳ ಬಾಧೆಯು ಕಾಣಿಸಿಕೊಳ್ಳುವುದು. ಯಾರಾದರೂ ಚುಚ್ಚಿ ಮಾತನಾಡಬಹುದು. ಅದನ್ನು ಮನಸ್ಸಿ ತೆಗದುಕೊಳ್ಳುವಿರಿ. ವಿದ್ಯಾರ್ಥಿಗಳು ಪ್ರೇಮದಲ್ಲಿ ಬೀಳುವ ಸಾಧ್ಯತೆ ಇದೆ. ಮನೆಯವರ ಮಕ್ಕಳ ಮೇಲೆ ಗಮನ ಇರಿಸುವುದು ಮುಖ್ಯ. ದುಷ್ಟರ ಸಹವಾಸದಿಂದ ಅಪಮಾನ ಸಾಧ್ಯತೆ. ಸಂಸ್ಥೆಯ ಜವಾಬ್ದಾರಿಯನ್ನು ಹೊತ್ತು ಅದನ್ನು ನಿಮ್ಮ ಹಿಡಿತದಲ್ಲಿ ಇರುವಂತೆ ನೋಡಿಕೊಳ್ಳಿ.

ಕುಂಭ ರಾಶಿ: ನಿಮ್ಮ ಒರಟು ಮಾತುಗಳಿಂದ ಆಪ್ತರು ದೂರಾಗಬಹುದು. ಇಂದು ನೀವು ಎಲ್ಲವನ್ನೂ ಶಕ್ತಿಮೀರಿ ಪ್ರಯತ್ನಿಸುವಿರಿ. ಆಲಸ್ಯವು ಒಳ್ಳೆಯದಲ್ಲ‌. ನಿಮ್ಮದೇ ಯೋಜನೆಗಳು ನಿಮಗಿದ್ದು ಅದರ ಕುರಿತು ಆಲೋಚನೆಯನ್ನು ಮಾಡುವಿರಿ. ವಾಹನ ಸಂಚಾರದಿಂದ ತೊಂದರೆ. ಆತುರದಿಂದ ಎಲ್ಲಿರಿಗೂ ಹೋಗುವುದು ಬೇಡ. ಕಲಾವಿದರು ಉತ್ತಮವಾದ ಅವಕಾಶವನ್ನು ಪಡೆಯಲಿದ್ದಾರೆ. ಮಾತು ವಿವಾದವಾಗಿ ದ್ವೇಷದಲ್ಲಿ ಕೊನೆಗೊಳ್ಳಬಹುದು. ಹಳೆಯ ಖಾಯಿಲೆಯು ಮತ್ತೆ ಮರುಕಳಿಸಬಹುದು. ಹಣದ ವಿಚಾರದಲ್ಲಿ ನಿಮಗೆ ಇಂದು ಲೋಭವು ಇರದು. ನೀವು ಇಂದು ಯಾರ ಮಾತನ್ನೂ ನಂಬುವ ಮನಃಸ್ಥಿತಿಯಲ್ಲಿ ಇಲ್ಲ. ಹಣಕಾಸಿನಲ್ಲಿ ಸುಧಾರಣೆಯನ್ನು ಕಾಣಬಹುದಾಗಿದೆ. ಕಾರ್ಯದಲ್ಲಿ ಸಾವಧಾನತೆ ಇರಲಿದೆ. ಸ್ನೇಹವು ದೂರ ಮಾಡಿಕೊಳ್ಳುವಿರಿ. ಹೂಡಿಕೆಯಲ್ಲಿ ಮಿತಿ ಇರಲಿ. ಹೊಸ ಕೆಲಸಗಳ ಕಡೆ ಗಮನ ಇರುವುದು. ಅಹಂಕಾರವು ಕಡಿಮೆ ಮಾಡಿಕೊಳ್ಳುವುದು ಉತ್ತಮ. ಯಾವ ಕಾರ್ಯವನ್ನೇ ಮಾಡುವುದಾದರೂ ಪ್ರಮಾಣದ ಅಗತ್ಯವಿರಲಿದೆ.

ಮೀನ ರಾಶಿ: ಯೋಜ‌ನೆಯನ್ನು ಆರಂಭಿಸಿ ಅನಂತರ ಸರಿ ತಪ್ಪುಗಳ ಬಗ್ಗೆ ಯೋಚಿಸುವಿರಿ. ಇಂದು ನಿಮ್ಮ ಕುರಿತು ಸಲ್ಲದ ಮಾತುಗಳನ್ನು ಕೇಳಬೇಕಾಬಹುದು. ತಪ್ಪುಗಳ ನಡೆಯದಿದ್ದಾಗ ಅದಕ್ಕೆ ಹೆದರಬೇಕಾದ ಅವಶ್ಯಕತೆಯಿರದು. ನಿಮ್ಮ ಕಾರ್ಯಗಳು ಎಂದಿನಂತೆ ಅಬಾಧಿತವಾಗಿ ನಡೆಯಲಿದೆ. ವಿದ್ಯಾರ್ಥಿಗಳ ಅಭ್ಯಾಸಕ್ಕೆ ಅನುಕೂಲತೆ ಇರಲಿದೆ. ಆಪ್ತರ ಭೇಟಿಯಾಗಬಹುದು. ಹಲವು ದಿನಗಳಿಂದ ಹೇಳದೇ ಉಳಿದುಕೊಂಡ ವಿಷಯಗಳನ್ನು ಚರ್ಚಿಸುವಿರಿ. ಆಹಾರದ ಉದ್ಯಮವನ್ನು ಲಾಭದತ್ತ ಕೊಂಡುಯ್ಯುವಿರಿ. ಭವಿಷ್ಯದ ಬಗ್ಗೆ ಆಪ್ತಸಮಾಲೋಚನೆ ನಡೆಸುವಿರಿ. ನೌಕರರ ಬಗ್ಗೆಯೂ ಪ್ರೀತಿ ಇರಲಿದೆ. ಉದ್ಯೋಗದ ಸ್ಥಳದಲ್ಲಿ ಹೆಚ್ಚು ಲವಲವಿಕೆ ಇರಲಿದೆ. ಸಣ್ಣ ಕಾರ್ಯಕ್ಕೆ ಹೆಚ್ಚು ಶ್ರಮವಹಿಸಬೇಕಾದೀತು. ಆಪ್ತರನ್ನು ದೂರ ಮಾಡಿಕೊಳ್ಳುವಿರಿ. ನೌಕರರಿಗೆ ನೀವು ಕೊಡುವ ವ್ಯವಸ್ಥೆಯಿಂದ ಸಂತೋಷವಾಗಲಿದೆ. ಸೋತರೂ ಗೆದ್ದವರ ಜೊತೆ ನಿಮ್ಮ ಪ್ರತಿಷ್ಠೆಯನ್ನು ತೋರಿಸುವಿರಿ.

Source : TV9 Kannada

Leave a Reply

Your email address will not be published. Required fields are marked *