ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817

ಚಿತ್ರದುರ್ಗ: ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್, ಸಾಣೇಹಳ್ಳಿಯ ತರಳಬಾಳು ಜಗದ್ಗುರು ಶಾಖಾ ಮಠ ಮತ್ತು ಚಿತ್ರದುರ್ಗ ಜಿಲ್ಲಾ ಮಕ್ಕಳ ಸಾಹಿತ್ಯ ಪರಿಷತ್ ವತಿಯಿಂದ ನಾಳೆಯಿಂದ ಮೂರು ದಿನಗಳ ಕಾಲ ನಡೆಯಲಿರುವ ರಾಜ್ಯ ಮಟ್ಟದ ಮಕ್ಕಳ ಸಾಹಿತ್ಯ-ಸಂಸ್ಕೃತಿ ಕಮ್ಮಟವನ್ನು ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ಶಾಸಕ ಸಿ.ಎನ್. ಬಾಲಕೃಷ್ಣ ಉದ್ಘಾಟಿಸಲಿದ್ದು, ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಯವರು ದಿವ್ಯ ಸಾನಿಧ್ಯ ಹಾಗೂ ರಾಜ್ಯಾಧ್ಯಕ್ಷರಾದ ಸಿ.ಎನ್. ಅಶೋಕ್ ಅಧ್ಯಕ್ಷತೆ ವಹಿಸುವ ಮೂಲಕ ಕಾರ್ಯಕ್ರಮಕ್ಕೆ ಅದ್ಧೂರಿ ಚಾಲನೆ ದೊರೆಯಲಿದೆ ಎಂದು ಚಿತ್ರದುರ್ಗ ಜಿಲ್ಲಾ ಮಕ್ಕಳ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಯೋಗೀಶ್ ಸಹ್ಯಾದ್ರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಜ್ಯ ಮಸಾಪ ಘಟಕವು 10 ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಕಳೆದ ವರ್ಷ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ರಾಷ್ಟ್ರೀಯ ಮಕ್ಕಳ ಸಾಹಿತ್ಯ ಸಾಹಿತ್ಯ ಸಮ್ಮೇಳನವನ್ನು ಯಶಸ್ವಿಯಾಗಿ ಆಯೋಜನೆ ಮಾಡಲಾಗಿತ್ತು. ಸಾಣೇಹಳ್ಳಿಯಲ್ಲಿ ಜರುಗುವ ಶಿಬಿರವು ಭಾನುವಾರ ಬೆಳಿಗ್ಗೆ 8.30 ಕ್ಕೆ ಮೆರವಣಿಗೆಯ ಮೂಲಕ ಪ್ರಾರಂಭವಾಗುವ ಮಕ್ಕಳ ಸಾಹಿತ್ಯ ಸಂಸ್ಕೃತಿ ಕಮ್ಮಟದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಸುಮಾರು 350 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸುತ್ತಿದ್ದು, ಮೂರು ದಿನಗಳು ಸೇರಿ ವಿವಿಧ ವಿಷಯಗಳ ಪರಿಣಿತರು, ಹಿರಿಯ ಸಾಹಿತಿಗಳು ಒಟ್ಟು 30 ಜನ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿದ್ದಾರೆ ಎಂದು ಯೋಗೀಶ್ ಸಹ್ಯಾದ್ರಿ ತಿಳಿಸಿದ್ದಾರೆ.
ವಿಶೇಷವಾಗಿ ಆಯೋಜನೆ ಮಾಡಲಾಗಿರುವ ಕಮ್ಮಟದಲ್ಲಿ ಮಕ್ಕಳಿಗೆ ನಾಟಕ ರಚನೆ, ಕಥೆ ಕವನ ರಚನೆ, ನೃತ್ಯ, ಹಸೆ ಚಿತ್ತಾರ ಸೇರಿದಂತೆ ಜಾನಪದ ಹಾಗೂ ಸುಗಮ ಸಂಗೀತ ತರಬೇತಿ, ಮೂಲ ಜಾನಪದ ನೃತ್ಯ, ಯಕ್ಷಗಾನ, ಹಗ್ಗದ ಮಲ್ಲ ಕಂಬ ಮುಂತಾದ ನಮ್ಮ ನಾಡಿನ ಅನೇಕ ಕಲೆ ಸಾಹಿತ್ಯ ಸಂಸ್ಕೃತಿಗೆ ಸಂಬಂಧಿಸಿದ ವಿಷಯಗಳ ಕುರಿತು ತಿಳಿಸಲಾಗುವುದು. ಚಿತ್ರದುರ್ಗ ಜಿಲ್ಲೆಯಿಂದ ಒಟ್ಟು 30 ವಿದ್ಯಾರ್ಥಿಗಳು ಆಯ್ಕೆಯಾಗಿದ್ದು, ಅಪರಾಧ ಶಾಸ್ತ್ರದ ವಿಶ್ರಾಂತ ಪ್ರಾಧ್ಯಾಪಕ ಡಾ. ನಟರಾಜ್ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿದ್ದಾರೆ.
ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತಿನ ಮಹಾ ಪೋಷಕರಾದ ಆದಿಚುಂಚನಗಿರಿ ಶಾಖಾ ಮಠದ ಶ್ರೀ ಶಂಭುನಾಥ ಸ್ವಾಮೀಜಿಯವರು ಸಹ ಉಪಸ್ಥಿತರಿದ್ದು, ಚಿತ್ರದುರ್ಗ ಜಿಲ್ಲಾ ಮಕ್ಕಳ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಯೋಗೀಶ್ ಸಹ್ಯಾದ್ರಿ ಅವರು ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧ್ಯಕ್ಷರು, ರಾಜ್ಯ ಘಟಕದ ಪದಾಧಿಕಾರಿಗಳು, ಮಕ್ಕಳ ಸಾಹಿತಿಗಳು, ವಿದ್ಯಾರ್ಥಿಗಳು, ಸಾಹಿತ್ಯಾಸಕ್ತರು, ಶ್ರೀಮಠದ ಸಿಬ್ಬಂದಿ ವರ್ಗದವರು ಭಾಗವಹಿಸಲಿದ್ದಾರೆ ಎಂದು ಲೇಖಕ ಹಾಗೂ ಮಸಾಪ ಜಿಲ್ಲಾ ಅಧ್ಯಕ್ಷ ಯೋಗೀಶ್ ಸಹ್ಯಾದ್ರಿ ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group:https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1