ಬೇಸಿಗೆಯಲ್ಲಿ ನುಗ್ಗೆಕಾಯಿ ಏಕೆ ತಿನ್ನಬೇಕು? ಪ್ರಮುಖ ಕಾರಣಗಳಿವು.

Drumstick Health Benefits: ಬೇಸಿಗೆಯಲ್ಲಿ ನುಗ್ಗೆಕಾಯಿ ಸೇವಿಸುವುದರಿಂದ ಆರೋಗ್ಯಕ್ಕೆ ಯಾವೆಲ್ಲಾ ಪ್ರಯೋಜನಗಳು ದೊರೆಯುತ್ತವೆ ಎಂಬುದರ ಬಗ್ಗೆ ಆರೋಗ್ಯ ತಜ್ಞರು ತಿಳಿಸಿರುವ ಮಾಹಿತಿ ಇಲ್ಲಿದೆ.

Drumstick Health Benefits: ನುಗ್ಗೆಕಾಯಿ ದೇಹವನ್ನು ಹೈಡ್ರೇಟ್ ಆಗಿಡುವುದರಿಂದ ಬೇಸಿಗೆಯಲ್ಲಿ ತಿನ್ನಲು ಉತ್ತಮ ತರಕಾರಿ. ನುಗ್ಗೆಯಲ್ಲಿ ದೇಹದ ಆರೋಗ್ಯ ಕಾಪಾಡಿಕೊಳ್ಳಲು ಜೀವಸತ್ವಗಳು, ಖನಿಜಗಳು ಮತ್ತು ಉತ್ಕರ್ಷಣ ನಿರೋಧಕಗಳು ಸಮೃದ್ಧವಾಗಿವೆ.

ಇದು ವಿಟಮಿನ್ ಸಿ, ಎ, ಇ, ಕ್ಯಾಲ್ಸಿಯಂ, ಪೊಟ್ಯಾಸಿಯಮ್ ಮತ್ತು ಕಬ್ಬಿಣದ ಸಮೃದ್ಧ ಮೂಲವಾಗಿರುವುದರಿಂದ ಒಟ್ಟಾರೆ ದೇಹದ ಆರೋಗ್ಯವನ್ನು ಕಾಪಾಡಿಕೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ವಿಶೇಷವಾಗಿ, ಬೇಸಿಗೆಯಲ್ಲಿ ದೈಹಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ನುಗ್ಗೆ ಸೇವಿಸುವುದು ಉತ್ತಮ ಎಂದು ಅಧ್ಯಯನ ಹೇಳುತ್ತದೆ.

ಉತ್ಕರ್ಷಣ ನಿರೋಧಕ ಗುಣ: ನುಗ್ಗೆಕಾಯಿಯಲ್ಲಿ ಫ್ಲೇವನಾಯ್ಡ್‌ಗಳಿದ್ದು, ಉತ್ಕರ್ಷಣ ನಿರೋಧಕಗಳು ಸಮೃದ್ಧವಾಗಿವೆ. ಈ ಉತ್ಕರ್ಷಣ ನಿರೋಧಕಗಳು ಜೀವಕೋಶಗಳಿಗೆ ಹಾನಿಯನ್ನುಂಟು ಮಾಡುವ ಸ್ವತಂತ್ರ ರಾಡಿಕಲ್‌ಗಳನ್ನು ತಟಸ್ಥಗೊಳಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತವೆ. ಇದು ಬೇಸಿಗೆಯಲ್ಲಿ ಚರ್ಮವನ್ನು ಆಕ್ಸಿಡೇಟಿವ್ ಒತ್ತಡ ಮತ್ತು UV ವಿಕಿರಣದಿಂದ ರಕ್ಷಿಸಲು ಸಹಾಯ ಮಾಡುತ್ತದೆ. ವಯಸ್ಸಾದ ಮತ್ತು ವರ್ಣದ್ರವ್ಯದ ಚಿಹ್ನೆಗಳನ್ನು ತಡೆಯುತ್ತದೆ.

ದೇಹವನ್ನು ಹೈಡ್ರೀಕರಿಸಲು ಸಹಾಯ: ನುಗ್ಗೆಕಾಯಿಯಲ್ಲಿ ಪೊಟ್ಯಾಸಿಯಮ್ ಸಮೃದ್ಧವಾಗಿದ್ದು, ಇದು ನೀರಿನಂಶವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ಇದು ದೇಹವನ್ನು ಹೈಡ್ರೀಕರಿಸಲು ಸಹಾಯ ಮಾಡುತ್ತದೆ. ಜರ್ನಲ್ ಆಫ್ ಫುಡ್ ಸೈನ್ಸ್ ಆ್ಯಂಡ್ ಟೆಕ್ನಾಲಜಿಯಲ್ಲಿ ಪ್ರಕಟವಾದ ಅಧ್ಯಯನವು ಎಲೆಕ್ಟ್ರೋಲೈಟ್ ಸಮತೋಲನ ಕಾಪಾಡಿಕೊಳ್ಳುವಲ್ಲಿ ಪ್ರಯೋಜನಕಾರಿಯಾಗಿದೆ ಎಂದು ತಿಳಿಸಿದೆ.

ನಿರ್ಜಲೀಕರಣ ತಡೆಯಲು ಪೂರಕ: ಬೇಸಿಗೆಯಲ್ಲಿ ಆಹಾರದಲ್ಲಿ ನುಗ್ಗೆಕಾಯಿಯನ್ನು ಸೇರಿಸುವುದರಿಂದ ನಿರ್ಜಲೀಕರಣ ಮತ್ತು ಹೀಟ್​ಸ್ಟ್ರೋಕ್​ನಂತಹ ಕಾಯಿಲೆಗಳನ್ನು ತಡೆಯಲು ಸಹಾಯ ಮಾಡುತ್ತದೆ. ವಾರಕ್ಕೆ ಒಮ್ಮೆ ಅಥವಾ ಎರಡು ಬಾರಿಯಾದರೂ ನಿಮ್ಮ ಆಹಾರದಲ್ಲಿ ನುಗ್ಗೆಕಾಯಿಗಳನ್ನು ಸೇರಿಸಿಕೊಳ್ಳಬೇಕು.

ಉರಿಯೂತ ನಿವಾರಕ: ನುಗ್ಗೆಕಾಯಿಯಲ್ಲಿ ಉರಿಯೂತ ನಿವಾರಕ ಗುಣಗಳು ಸಮೃದ್ಧವಾಗಿವೆ. ಇದು ದೇಹದಲ್ಲಿನ ಉರಿಯೂತ ಕಡಿಮೆ ಮಾಡಲು ಹಾಗೂ ಚರ್ಮದ ಕಿರಿಕಿರಿ, ಬಿಸಿಲಿನ ಬೇಗೆಯಂತಹ ಪರಿಸ್ಥಿತಿಗಳನ್ನು ಶಮನಗೊಳಿಸಲು ಸಹಾಯ ಮಾಡುತ್ತದೆ. ನುಗ್ಗೆಕಾಯಿ ತಂಪಾಗಿಸುವ ಗುಣಗಳನ್ನು ಹೊಂದಿರುವುದರಿಂದ, ದೇಹದ ಆಂತರಿಕ ಉಷ್ಣತೆಯನ್ನು ಕಡಿಮೆ ಮಾಡುವಲ್ಲಿ ನುಗ್ಗೆಕಾಯಿ ಪ್ರಯೋಜನಕಾರಿಯಾಗಿದೆ. ಬೇಸಿಗೆಯಲ್ಲಿ ಉಂಟಾಗುವ ಬಾಯಿ ಹುಣ್ಣುಗಳಂತಹ ಸಮಸ್ಯೆಗಳನ್ನು ಸಹ ಇದು ತಡೆಯುತ್ತದೆ.

NUTRIENTS IN DRUMSTICK  SUMMER VEGETABLES  BEST FOODS IN SUMMER  DRUMSTICK HEALTH BENEFITS

ಕರುಳಿನ ಆರೋಗ್ಯ: ನುಗ್ಗೆಕಾಯಿ ನಾರಿನ ಅತ್ಯುತ್ತಮ ಮೂಲವಾಗಿದೆ. ಇಂಟರ್ನ್ಯಾಷನಲ್ ಜರ್ನಲ್ ಆಫ್ ಫಾರ್ಮಕಾಲಜಿ ಮತ್ತು ಬಯೋಲಾಜಿಕಲ್ ಸೈನ್ಸಸ್‌ನಲ್ಲಿ ಪ್ರಕಟವಾದ ಅಧ್ಯಯನದ ಪ್ರಕಾರ ಇದು ಜೀರ್ಣಕ್ರಿಯೆಯನ್ನು ಉತ್ತೇಜಿಸುತ್ತದೆ. ಇದು ಮಲಬದ್ಧತೆಯನ್ನು ಕಡಿಮೆ ಮಾಡಲು ಮತ್ತು ಕರುಳಿನ ಆರೋಗ್ಯವನ್ನು ಸುಧಾರಿಸಲು ಪ್ರಯೋಜನಕಾರಿಯಾಗಿದೆ. ಬೇಸಿಗೆಯಲ್ಲಿ ಬಿಸಿಲನ್ನು ತಡೆದುಕೊಳ್ಳಲು ಹೆಚ್ಚು ತಂಪು ಪಾನೀಯಗಳು, ಐಸ್ ಕ್ರೀಮ್ ಸೇವಿಸುವುದರಿಂದ ಹೊಟ್ಟೆ ಉಬ್ಬರ ಹಾಗೂ ಜೀರ್ಣಕ್ರಿಯೆ ಸಮಸ್ಯೆಗಳು ಉಂಟಾಗಬಹುದು. ಅಂತಹ ಸಮಸ್ಯೆಗಳನ್ನು ತಡೆಗಟ್ಟಲು, ನೀವು ನಿಮ್ಮ ಆಹಾರದಲ್ಲಿ ನುಗ್ಗೆಕಾಯಿಗಳನ್ನು ಸೇರಿಸಿಕೊಳ್ಳಬೇಕು ಎಂದು ತಜ್ಞರು ತಿಳಿಸುತ್ತಾರೆ.

ಪಿಎಮ್‌ಸಿ ಕಾಂಪ್ಲಿಮೆಂಟರಿ ಮೆಡಿಸಿನ್ ಆ್ಯಂಡ್​ ಥೆರಪಿಸ್‌ನಲ್ಲಿ ಪ್ರಕಟವಾದ ಅಧ್ಯಯನವು ನುಗ್ಗೆಕಾಯಿಯ ಉತ್ಕರ್ಷಣ ನಿರೋಧಕ ಮತ್ತು ಉರಿಯೂತ ನಿವಾರಕ ಗುಣಲಕ್ಷಣಗಳು ಚರ್ಮದ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ ಎಂದು ವಿವರಿಸುತ್ತದೆ.

ಚರ್ಮದ ಕಿರಿಕಿರಿ & ಶುಷ್ಕತೆ ನಿವಾರಣೆ: ನುಗ್ಗೆಕಾಯಿ ಸೇವನೆಯು ಸೂರ್ಯನ ಬೆಳಕಿನಿಂದ ಉಂಟಾಗುವ ಚರ್ಮದ ಕಿರಿಕಿರಿ ಮತ್ತು ಶುಷ್ಕತೆ ನಿವಾರಿಸಲು ಹಾಗೂ ಹಾನಿಗೊಳಗಾದ ಚರ್ಮವನ್ನು ಸರಿಪಡಿಸಲು ಸಹಾಯ ಮಾಡುತ್ತದೆ. ಚರ್ಮದ ಸ್ಥಿತಿಸ್ಥಾಪಕತ್ವ ಸುಧಾರಿಸುವಲ್ಲಿ ಪ್ರಯೋಜನಕಾರಿಯಾಗಿದೆ.

ವೈರಲ್ ಸೋಂಕುಗಳಿಂದ ರಕ್ಷಣೆ: ನುಗ್ಗೆಕಾಯಿ ವಿಟಮಿನ್ ಸಿ ಸೇರಿದಂತೆ ಹಲವು ಪೋಷಕಾಂಶಗಳು ಹೇರಳವಾಗಿವೆ. ಫ್ರಾಂಟಿಯರ್ಸ್ ಇನ್ ನ್ಯೂಟ್ರಿಷನ್‌ನಲ್ಲಿ ಪ್ರಕಟವಾದ ಅಧ್ಯಯನವು ನಿಯಮಿತವಾಗಿ ನುಗ್ಗೆಕಾಯಿ ತಿನ್ನುವುದರಿಂದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ ಎಂದು ಸೂಚಿಸುತ್ತದೆ. ಇದು ಬೇಸಿಗೆಯಲ್ಲಿ ಸಂಭವಿಸಬಹುದಾದ ವೈರಲ್ ಸೋಂಕುಗಳಿಂದ ದೇಹವನ್ನು ರಕ್ಷಿಸಲು ಸಹಾಯ ಮಾಡುತ್ತದೆ.

EVT Bharat

ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 

WhatsApp Group:https://chat.whatsapp.com/KnDIfiBURQ9G5sLEJLqshk

Facebook page: https://www.facebook.com/samagrasudii

Sharechat: https://sharehat.com/profile/edu514826335?d=n

Twitter: https://twitter.com/SuddiSamagra

Threads: https://www.threads.net/@samagrasuddi.co.in

Instagram: https://www.instagram.com/samagrasuddi.co.in/

Telegram: https://t.me/+E1ubNzdguQ5jN2Y1

Leave a Reply

Your email address will not be published. Required fields are marked *