India Test Squad: ಭಾರತ ಟೆಸ್ಟ್ ತಂಡ ಪ್ರಕಟ.

India Squad For England Test Series: ಭಾರತ ಮತ್ತು ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿಯು ಜೂನ್ 20 ರಿಂದ ಶುರುವಾಗಲಿದೆ. ಆಂಗ್ಲರ ನಾಡಿನಲ್ಲಿ ನಡೆಯಲಿರುವ ಈ ಸರಣಿಯಲ್ಲಿ ಟೀಮ್ ಇಂಡಿಯಾ 5 ಪಂದ್ಯಗಳನ್ನಾಡಲಿದೆ. ವಿಶೇಷ ಎಂದರೆ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಇಲ್ಲದೆ, ಇದೇ ಮೊದಲ ಬಾರಿಗೆ ಟೀಮ್ ಇಂಡಿಯಾ ವಿದೇಶಿ ಸರಣಿ ಆಡಲು ಮುಂದಾಗುತ್ತಿದೆ.

ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗಾಗಿ ಭಾರತ ಟೆಸ್ಟ್ (India Test Squad) ತಂಡವನ್ನು ಪ್ರಕಟಿಸಲಾಗಿದೆ. 18 ಸದಸ್ಯರ ಈ ತಂಡವನ್ನು ಯುವ ಆಟಗಾರ ಶುಭ್​ಮನ್​ ಗಿಲ್ (Shubman Gill) ಮುನ್ನಡೆಸಲಿದ್ದಾರೆ. ಇದಕ್ಕೂ ಮುನ್ನ ಟೀಮ್ ಇಂಡಿಯಾ ಟೆಸ್ಟ್ ತಂಡದ ನಾಯಕತ್ವ ಜಸ್​ಪ್ರೀತ್ ಬುಮ್ರಾಗೆ ಲಭಿಸಲಿದೆ ಎನ್ನಲಾಗಿತ್ತು. ಆದರೆ ಭವಿಷ್ಯದ ದೃಷ್ಟಿಯಿಂದ ಗಿಲ್ ಅವರಿಗೆ ನಾಯಕತ್ವ ನೀಡಲಾಗಿದೆ. ಹಾಗೆಯೇ ಉಪನಾಯಕನಾಗಿ ರಿಷಭ್ ಪಂತ್ ಆಯ್ಕೆಯಾಗಿದ್ದಾರೆ.

ಇನ್ನು ತಂಡದಲ್ಲಿ ಆರಂಭಿಕರಾಗಿ ಶುಭ್​ಮನ್ ಗಿಲ್, ಯಶಸ್ವಿ ಜೈಸ್ವಾಲ್, ಅಭಿಮನ್ಯು ಈಶ್ವರನ್ ಹಾಗೂ ಸಾಯಿ ಸುದರ್ಶನ್ ಕಾಣಿಸಿಕೊಂಡಿದ್ದಾರೆ. ಇವರಲ್ಲಿ ಇಬ್ಬರು ಇನಿಂಗ್ಸ್ ಆರಂಭಿಸುವುದು ಖಚಿತ. ಅಲ್ಲದೆ ಮತ್ತೊಬ್ಬರು ಮೂರನೇ ಕ್ರಮಾಂಕದಲ್ಲಿ ಆಡುವ ಸಾಧ್ಯತೆಯಿದೆ.

ಮಧ್ಯಮ ಕ್ರಮಾಂಕದ ಬ್ಯಾಟರ್​ಗಳಾಗಿ ಕೆಎಲ್ ರಾಹುಲ್, ಕರುಣ್ ನಾಯರ್ ಹಾಗೂ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಆಯ್ಕೆಯಾಗಿದ್ದಾರೆ.

ಆಲ್​ರೌಂಡರ್​ಗಳಾಗಿ ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್​ ಟೀಮ್ ಇಂಡಿಯಾದಲ್ಲಿ ಕಾಣಿಸಿಕೊಂಡಿದ್ದಾರೆ.

ಇನ್ನು ವೇಗದ ಬೌಲರ್​ಗಳಾಗಿ ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಆಕಾಶ್ ದೀಪ್ ಹಾಗೂ ಅರ್ಷದೀಪ್ ಸಿಂಗ್  ಆಯ್ಕೆಯಾಗಿದ್ದಾರೆ. ಅದರಂತೆ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ತಂಡ ಈ ಕೆಳಗಿನಂತಿದೆ…

ಭಾರತ ಟೆಸ್ಟ್ ತಂಡ: ಶುಭ್​ಮನ್ ಗಿಲ್ (ನಾಯಕ), ರಿಷಭ್ ಪಂತ್ (ಉಪನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ಅಭಿಮನ್ಯು ಈಶ್ವರನ್, ಕರುಣ್ ನಾಯರ್, ನಿತೀಶ್ ಕುಮಾರ್ ರೆಡ್ಡಿ, ರವೀಂದ್ರ ಜಡೇಜಾ, ಧ್ರುವ್ ಜುರೇಲ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಆಕಾಶ್ ದೀಪ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್.

ಭಾರತ ಮತ್ತು ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ:

  • ಮೊದಲ ಟೆಸ್ಟ್: 20-24 ಜೂನ್, 2025 – ಹೆಡ್ಲಿಂಗ್ಲೆ, ಲೀಡ್ಸ್
  • 2ನೇ ಟೆಸ್ಟ್: ಜುಲೈ 2-6, 2025 – ಎಡ್ಜ್‌ಬಾಸ್ಟನ್, ಬರ್ಮಿಂಗ್​ಹ್ಯಾಮ್
  • 3ನೇ ಟೆಸ್ಟ್: ಜುಲೈ 10-14, 2025 – ಲಾರ್ಡ್ಸ್, ಲಂಡನ್
  • 4ನೇ ಟೆಸ್ಟ್: 23-27 ಜುಲೈ, 2025 – ಓಲ್ಡ್ ಟ್ರಾಫರ್ಡ್, ಮ್ಯಾಂಚೆಸ್ಟರ್
  • 5ನೇ ಟೆಸ್ಟ್: 31 ಜುಲೈ-4 ಆಗಸ್ಟ್, 2025 – ದಿ ಓವಲ್, ಲಂಡನ್

TV9 Kannada

ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು WhatsApp Group:https://chat.whatsapp.com/KnDIfiBURQ9G5sLEJLqshk

Facebook page: https://www.facebook.com/samagrasudii

Sharechat: https://sharehat.com/profile/edu514826335?d=n

Twitter: https://twitter.com/SuddiSamagra

Threads: https://www.threads.net/@samagrasuddi.co.in

Instagram: https://www.instagram.com/samagrasuddi.co.in/

Telegram: https://t.me/+E1ubNzdguQ5jN2Y1

Leave a Reply

Your email address will not be published. Required fields are marked *