ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ಗ್ರೀಷ್ಮ ಋತುವಿನ ಜ್ಯೇಷ್ಠ ಮಾಸ ಶುಕ್ಲ ಪಕ್ಷದ ಚತುರ್ಥೀ ತಿಥಿ, ಶುಕ್ರವಾರ ಉದ್ಯೋಗದಲ್ಲಿ ವಿಶೇಷ ಅನುಭವ, ಕೋಪದಿಂದ ಅಸಮಾಧಾನ, ಸಮಯಾಭಾವದಿಂದ ಬೇಸರ, ಕೊಟ್ಟ ಹಣವನ್ನು ಒತ್ತಡದಿಂದ ಪಡೆಯುವುದು ಇವೆಲ್ಲ ಇರಲಿದೆ.

ಶಾಲಿವಾಹನ ಶಕೆ 1948ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು : ಗ್ರೀಷ್ಮ, ಸೌರ ಮಾಸ : ವೃಷಭ, ಮಹಾನಕ್ಷತ್ರ : ರೋಹಿಣೀ, ಮಾಸ : ಜ್ಯೇಷ್ಠ, ಪಕ್ಷ : ಶುಕ್ಲ, ವಾರ : ಶುಕ್ರ, ತಿಥಿ : ಚತುರ್ಥೀ ನಿತ್ಯನಕ್ಷತ್ರ : ಪುನರ್ವಸು, ಯೋಗ : ಶೂಲಿ, ಕರಣ : ತೈತಿಲ, ಸೂರ್ಯೋದಯ – 06 – 03 am, ಸೂರ್ಯಾಸ್ತ – 06 – 556 pm, ಇಂದಿನ ಶುಭಾಶುಭಕಾಲ : ರಾಹು ಕಾಲ 10:54 – 12:30, ಯಮಘಂಡ ಕಾಲ 15:43 – 17:20, ಗುಳಿಕ ಕಾಲ 07:41 – 09:17
ಮೇಷ ರಾಶಿ: :ಮಾತನ್ನು ವಿವಾದಾತ್ಮಕವಾಗಿ ಪರಿವರ್ತಿಸಬಹುದು. ಭೂಮಿಯ ಉತ್ಪನ್ನವನ್ನು ತಯಾರಿಸುತ್ತಿದ್ದರೆ ಉತ್ತಮ ಲಾಭವಿದೆ. ಸಾಲಬಾಧೆಯಿಂದ ಕೆಟ್ಟ ಕೆಲಸವನ್ನು ಮಾಡಲು ಪ್ರೇರಣೆಯಾಗಬಹುದು. ಆಕ್ಷೇಪಕ್ಕೆ ಸಕಾರಣವನ್ನು ಕೊಡುವುದು ಸೂಕ್ತ. ಇದರಿಂದ ತೊಂದರೆ ಸಿಕ್ಕಿಹಾಕಿಕೊಳ್ಳುವ ಸ್ಥಿತಿ ತಪ್ಪುತ್ತದೆ. ಸಂಗಾತಿಯೊಂದಿಗೆ ಜಗಳ ಉಂಟಾದರೂ ಅವರು ಶಾಂತಿ ಕಾಪಾಡುತ್ತಾರೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸಿ ಮನಸ್ಸಿಗೆ ನೆಮ್ಮದಿ ಪಡೆಯಿರಿ. ಉದ್ವಿಗ್ನಗೊಳ್ಳದೇ ಸಮಾಧಾನದಿಂದ ಇರಬೇಕಾದ ಅವಶ್ಯಕತೆಯಿದೆ. ನಿಮ್ಮ ಆದಾಯ ಮತ್ತು ಖರ್ಚಿಗೆ ನೀವು ಯೋಜನೆ ಸಿದ್ಧಪಡಿಸಿದರೆ ಅದು ನಿಮಗೆ ಒಳ್ಳೆಯದು. ನಿಮ್ಮ ಆರ್ಥಿಕ ಸ್ಥಿತಿಯನ್ನು ಬಲಪಡಿಸುವ ಪ್ರಯತ್ನಗಳಲ್ಲಿ ನೀವು ತೊಡಗಿರುವಿರಿ. ಇದರಲ್ಲಿ ನೀವು ಖಂಡಿತವಾಗಿಯೂ ಯಶಸ್ಸನ್ನು ಪಡೆಯುತ್ತೀರಿ. ಕಾರ್ಯಗಳನ್ನು ಹಂಚಿ ನೀವು ನಿಶ್ಚಿಂತರಾಗುವಿರಿ. ಯಾರದ್ದಾದರೂ ಪ್ರಲೋಭನೆಗೆ ಒಳಗಾಗುವ ಸಾಧ್ಯತೆ ಇದೆ. ಯಾರದೋ ಕೆಲಸವನ್ನು ಮಾಡಿಕೊಡಬೇಕಾಗುವುದು.
ವೃಷಭ ರಾಶಿ: :ಕೆಛೇರಿಯ ಕೆಲಸದಲ್ಲಿನ ತೊಂದರೆಗಳನ್ನು ಯಾರ ಜೊತೆಗೂ ಹೇಳಿಕೊಳ್ಳಲಾರಿರಿ. ಇಂದು ನಂಬಿಕೆಯ ವಿಚಾರದಲ್ಲಿ ಮನಸ್ಸು ಮುರಿದುಹೋಗುವುದು. ಹಣಕಾಸನ್ನು ಭದ್ರವಾಗಿ ಇಟ್ಟುಕೊಳ್ಳಿ. ಮೋಸ ಹೋಗುವ ಸಾಧ್ಯತೆ ಇದೆ. ಮಕ್ಕಳಿಗೆ ಸಹಾಯ ಮಾಡಿ ಒಳ್ಳೆಯ ಸಂಬಂಧ ಬೆಳೆಸಿಕೊಳ್ಳಿ. ಪ್ರೇಮ ಜೀವನದಲ್ಲಿ ಪ್ರಾಮಾಣಿಕತೆ ಮುಖ್ಯ. ಛಿದ್ರವಾದ ಮನಸ್ಸನ್ನು ಒಮ್ಮೆಲೆ ಸೇರಿಸಲಾಗದು. ಉದ್ಯಮಿಗಳಿಗೆ ಜನ ಲಾಭ. ದಿನದ ಕೊನೆಯಲ್ಲಿ ಆತ್ಮೀಯರೊಂದಿಗೆ ಸಮಯ ಕಳೆಯಬಹುದು. ಸಂಗಾತಿಯ ಪ್ರೀತಿ ನಿಮ್ಮನೆನಪಿನಲ್ಲಿ ಉಳಿಯುವ ರೀತಿಯಲ್ಲಿರುತ್ತದೆ. ಅಸಮರ್ಪಕ ಸಮಯದ ಹೊಂದಾಣಿಕೆಯಿಂದ ಕಷ್ಟವಾಗುವುದು. ಸಮರ್ಥನೆಯನ್ನು ಕೊಟ್ಟು ಸಮಯವನ್ನು ವ್ಯರ್ಥಮಾಡಬೇಡಿ. ಸ್ವಲ್ಪಕಾಲದಲ್ಲಿ ಎಲ್ಲವೂ ಸ್ಪಷ್ಟವಾಗಿ ಗೋಚರವಾಗುವುದು. ಆರ್ಥಿಕ ಯೋಜನೆಗಳಿಗೆ ಉತ್ತೇಜನ ದೊರೆಯಲಿದೆ. ನಿಮ್ಮ ಕೆಲವು ಹೊಸ ಪ್ರಯತ್ನಗಳು ಫಲ ನೀಡುತ್ತವೆ. ನಿಮ್ಮ ವೈಯಕ್ತಿಕ ಕಾರ್ಯಗಳು ಹಲವು ಹಾಗಯೇ ಉಳಿದುಕೊಂಡಿರುವುದು.
ಮಿಥುನ ರಾಶಿ: :ಪ್ರಾಚೀನ ದಾಖಲೆಯನ್ನು ಪರಿಶೀಲಿಸಬೇಕಾಗುವುದು. ಇಂದು ನಿಮಗೆ ಕುಟುಂಬ ಜೊತೆ ಸಲುಗೆಯಿಂದ ಕಾಲವನ್ನು ಕಳೆಯುವ ಮನಸ್ಸಿರುವುದು. ಕಾರ್ಯದ ಒತ್ತಡದಿಂದ ಪೂರ್ತಿಯಾಗಿ ಆಗದೇ ಹೋಗಬಹುದು. ನಾಯಕತ್ವದ ಹೊಣೆಗಾರಿಕೆಗಳೂ ಹೆಚ್ಚಾಗುತ್ತವೆ. ಸಂಗಾತಿಯು ನಿಮ್ಮ ಉತ್ಸುಕತೆಗೆ ಭಂಗ ತರಬಹುದು. ಆತ್ಮತೃಪ್ತಿ ಹೊಸ ಬಾಗಿಲುಗಳನ್ನು ತೆರೆಯುತ್ತದೆ. ಉದ್ಯೋಗದಲ್ಲಿ ಧೈರ್ಯದಿಂದ ಹೊಸ ಪ್ರಯತ್ನ ನಡೆಸಿ. ದೇಹ-ಮನಸ್ಸು ನಡುವೆ ಸಮತೋಲನ ಕಲಿಯಿರಿ. ಆರೋಗ್ಯದಲ್ಲಿ ಶಕ್ತಿಯ ಚಲನೆ ಇರಲಿ. ಇದೇ ನಿಮಗೆ ಛಲವಾಗಿಯೂ ಪರಿಣಾಮ ಬೀರಿ ಉತ್ತಮವಾದ ಯೋಜನೆಗಳನ್ನು ರೂಪಿಸಿ. ಪ್ರೇಮವು ಅಂಕುರಿಸಬಹುದು. ಸ್ಪರ್ಧಾಮನೋಭಾವವಿಲ್ಲದೇ ಎಲ್ಲರ ಜೊತೆ ಖುಷಿಯಿಂದ ಭಾಗವಹಿಸಿ. ಉದಾಸೀನತೆಯೇ ನಿಮ್ಮ ಉದ್ಯೋಗಕ್ಕೆ ಮುಳುವಾಗಬಹುದು. ಉದ್ಯಮದ ಕಾರಣಕ್ಕೆ ಅಧಿಕ ಸುತ್ತಾಟವು ಇರುವುದು. ಪ್ರೀತಿಯನ್ನು ನೀವು ಒಪ್ಪಿಕೊಳ್ಳದೇ ನಿಮ್ಮದೇ ವಾದ ಮಾಡುವಿರಿ.
ಕರ್ಕಾಟಕ ರಾಶಿ: :ಸಂಕಲ್ಪದಲ್ಲಿಯೇ ಪುಣ್ಯ ಕಾಲ ಕಳೆದಂತೆ, ಕೇವಲ ಯೋಚನೆಯಿಂದ ಸಮಯವನ್ನು ಕಳೆದು ದುಃಖಿಸುವಿರಿ. ನೀವು ಹಣವನ್ನು ಯಾವುದಕ್ಕೂ ಖರ್ಚು ಮಾಡದೇ ಜಿಪುಣ ಎನಿಸಬಹುದು. ಬಾಕಿಯಿರುವ ಗೃಹಕೃತ್ಯಗಳನ್ನು ಪೂರೈಸಲು ಒಂದು ಅನುಕೂಲಕರ ದಿನ. ಉದ್ಯೋಗದಲ್ಲಿ ವಿವೇಕ ಮತ್ತು ತಾರ್ಕಿಕತೆ ಅವಶ್ಯ. ಚಟುವಟಿಕೆಗಳ ಮೂಲಕ ಪುನಶ್ಚತನಗೊಳ್ಳುತ್ತದೆ. ಆರೋಗ್ಯದಲ್ಲಿ ತಾಳ್ಮೆಯೇ ಮುಖ್ಯ. ಹೊಸ ನಿಲುವಿನಿಂದ ಭವಿಷ್ಯ ನಿರ್ಮಿಸಿ. ಮಕ್ಕಳ ಆರೋಗ್ಯದ ಮೇಲೆ ಗಮನಬೇಕಿದೆ. ಎಲ್ಲ ಹತಾಶೆ, ನೋವು, ಸಂಕಟ, ತುಮುಲಗಳನ್ನು ನಿವಾರಿಸಿಕೊಳ್ಳಲು ಒಳ್ಳೆಯ ಸಮಯವಾಗಿದೆ. ಆಪ್ತರು ಎನಿಸಿದ ಸ್ನೇಹಿತರ ಜೊತೆ ಆಗಿದ್ದ ನೋವನ್ನು ಹೇಳಿಕೊಂಡು ಹಗುರಾಗಿ. ವೈಯಕ್ತಿಕ ಸಮಸ್ಯೆಯನ್ನು ನೀವು ಯಾರ ಬಳಿಯೂ ಹೇಳಿಕೊಳ್ಳುವುದು ಕಷ್ಟವಾದೀತು. ಸುಮ್ಮನೇ ಎಲ್ಲದಕ್ಕೂ ಒಪ್ಪಿಗೆಯನ್ನು ಸೂಚಿಸುವುದು ಬೇಡ.
ಸಿಂಹ ರಾಶಿ: :ನಿಮ್ಮ ಮೇಲೆ ಮಾತ್ರ ನಂಬಿಕೆ ಇದ್ದರೆ ಸಾಲದು, ದೈವದ ಮೇಲೂ ಬೇಕು. ಜಯ ಈರ್ವರಿಂದಲೂ ಸಾಧ್ಯವಾಗುವುದು. ನಿಮ್ಮ ಮುಂಗೋಪವು ನಿಮ್ಮವರಿಗೆ ಮುಜುಗರವಾಗಬಹುದು. ಉದ್ಯೋಗದಿಂದ ಹೊರನಡೆಯುವ ಸಾಧ್ಯತೆ ಇದೆ. ನೆಮ್ಮದಿಯನ್ನು ಕಾಣುವಾಗಲೇ ಈ ಘಟನೆ ನಿಮ್ಮನ್ನು ಆತಂಕಕ್ಕೆ ದೂಡಲಿದೆ. ಪ್ರೀತಿ ಜೀವನ ಚೈತನ್ಯ ತುಂಬಿದಂತೆ ತೋರುತ್ತದೆ. ಉದ್ಯೋಗದಲ್ಲಿ ಉತ್ತಮ ಸ್ಥಾನ ಹಾಗೂ ಲಾಭ ಸಿಗಲಿದೆ. ಮನೆಯಲ್ಲಿ ಸಮಸ್ಯೆಗಳಿದ್ದರೂ ನೀವು ಸಮಾಧಾನದಿಂದಿರುವುದು ಉತ್ತಮ. ಉಚಿತ ಸಮಯದಲ್ಲಿ ಹೊಸದನ್ನು ಕಲಿಯಿರಿ. ಶತ್ರುಗಳ ಬಗ್ಗೆ ಆತಂಕ ಇರವುದು. ದೊಡ್ಡ ಮೊತ್ತದ ವ್ಯವಹಾರವನ್ನು ಮಾಡುವಾಗ ಭಯವಿರುವುದು. ನಿಮ್ಮ ಶಾಂತವಾದ ಮನಸ್ಸೇ ಹಲವು ಸಮಸ್ಯೆಗಳನ್ನು ದೂರ ಮಾಡುವುದು. ಪ್ರಾಮಾಣಿಕತೆಯು ಇಂದು ನಿಮಗೆ ವರದಾನವಾಗುವುದು. ಅಪರಿಚಿತ ಸ್ಥಳದಿಂದ ಭೀತಿಯಾಗಬಹುದು.
ಕನ್ಯಾ ರಾಶಿ: :ಸಂಶೋಧನೆಯನ್ನು ಇಷ್ಟಪಡುವವರು ಹೊರ ಹೋಗಬೇಕಾಗುವುದು. ಇಂದು ಸ್ನೇಹಿತರ ಒತ್ತಾಯಕ್ಕೆ ಮೋಜಿಗಾಗಿ ಹಣವನ್ನು ಹಾಕಿ ಕಳೆದುಕೊಳ್ಳುವಿರಿ. ಮನೆಯ ಬಗ್ಗೆ ನಿಮಗೆ ಒಲವು ಕಡಮೆಯಾದೀತು. ವಿದ್ಯಾರ್ಥಿಗಳು ತಮ್ಮ ಅಧ್ಯಯನದ ಕಡೆಗೆ ಹೆಚ್ಚಿನ ಗಮನ ಹರಿಸಬೇಕು. ತಪ್ಪು ಎಲ್ಲ ಕಡೆಯಿಂದ ಸುತ್ತಿ ನಿಮ್ಮ ಬುಡಕ್ಕೇ ಬರವುದು. ಮಕ್ಕಳ ಬಗ್ಗೆ ಹೆಚ್ಚಿನ ಕಾಳಜಿ ಅಗತ್ಯ. ಕುಟುಂಬದ ಕೇಂದ್ರಬಿಂದುವಾಗಿ ನೀವು ಬೆಳಗಬಹುದು. ಸಹಭಾಗಿತ್ವದ ವಿಚಾರದಲ್ಲಿ ಸ್ಪಷ್ಟತೆ ಅಗತ್ಯ. ಸಂಗಾತಿಯ ಅತಿಯಾದ ಆಸಕ್ತಿ ನಿಮ್ಮ ಮನಸ್ಸಿಗೆ ಒತ್ತಡ ತರಬಹುದು. ನಿಮಗೆ ನಿಶ್ಚಯವಿಲ್ಲದೇ ಯಾವುದನ್ನೂ ಮಾಡಲು ಹೋಗುವುದು ಬೇಡ. ಕೆಲಸದ ವೇಗವು ನಿರೀಕ್ಷೆಯಂತೆ ಇರುತ್ತದೆ. ಕಾನೂನಾತ್ಮಕ ವಿಷಯಕ್ಕೆ ಸರಿಯಾದ ಸಲಹೆಯನ್ನು ಪಡೆಯುವಿರಿ. ನೀವು ಸ್ನೇಹಿತನೊಂದಿಗೆ ಯಾವುದೇ ವಿವಾದವನ್ನು ಹೊಂದಿದ್ದರೆ, ಅವರು ನಿಮ್ಮನ್ನು ಸಮಾಧಾನಪಡಿಸಲು ಬರಬಹುದು. ಹಿರಿಯರಿಗೆ ಕೊಡಬೇಕಾದ ಗೌರವವನ್ನು ಕೊಡಿ. ಹಳೆಯ ತಪ್ಪಿನಿಂದ ಪಾಠ ಕಲಿಯಬೇಕು.
ತುಲಾ ರಾಶಿ: :ಕಲಾರಂಗದಲ್ಲಿ ನಿಮ್ಮನ್ನು ಗುರುತಿಸಿಕೊಳ್ಳುವ ಬಯಕೆ. ಒಳಗೆ ಸೇರಿಕೊಳ್ಳಲು ದಾರಿ ಸಿಗದು. ಇಂದು ನಿಮ್ಮ ಕೆಲಸದ ಮೇಲೆ ಮಾತ್ರ ಗಮನಹರಿಸಿದರೆ ಉತ್ತಮ. ಏನಾದರೂ ಬಾಲಿಶವಾದದ್ದನ್ನು ಮಾಡುವ ಮೊದಲು ನಿಮ್ಮ ವರ್ತನೆಯ ಪರಿಣಾಮದ ಬಗ್ಗೆ ಆಲೋಚಿಸಿ. ಆತ್ಮವಿಶ್ವಾಸದ ಮೂಲಕ ನೀವು ದೈಹಿಕ, ಮಾನಸಿಕ ಸಂಕಟವನ್ನು ಎದುರಿಸಬಹುದು. ಹಳೆಯ ನೆನಪಿನಿಂದ ಶಕ್ತಿ ಕುಗ್ಗಬಹುದು. ಹಣಕಾಸು ಯೋಜನೆಗಳಲ್ಲಿ ಜಾಗರೂಕತೆ ಅವಶ್ಯಕ. ಮನೆಯ ಒತ್ತಡ ಹೆಚ್ಚಾಗಬಹುದು, ಆದರೆ ಸಹಕಾರದಿಂದ ಅದು ಕಡಿಮೆಯಾಗುತ್ತದೆ. ಜನರೊಂದಿಗೆ ಇಣುಕು ನೋಟದಿಂದ ವ್ಯವಹರಿಸಬೇಕು. ನೀವು ಆಗದಿರುವ ಕೆಲಸಗಳಿಂದ ನಿರಾಸೆಯನ್ನು ಅನುಭವಿಸುವುದು ಬೇಡ. ಅದು ದೈವೇಚ್ಛೆ ಎಂದು ಬಿಟ್ಟು ಮುಂದಿನ ಕೆಲಸಕ್ಕೆ ತೆರಳಿ. ಕುಟುಂಬದ ಸದಸ್ಯರಿಂದ ನೀವು ಆಶ್ಚರ್ಯಕರ ಉಡುಗೊರೆಯನ್ನು ಪಡೆಯಬಹುದು. ಇದರಿಂದ ನಿಮ್ಮ ಮೇಲಿರುವ ಭಾವನೆಯು ಬದಲಾಗುವುದು. ಕೃತಜ್ಞತೆಯನ್ನು ಸ್ಮರಿಸಿಕೊಳ್ಳುವಿರಿ. ಇಂದು ಕೆಲಸಕ್ಕಾಗಿ ಓಡಾಡುವುದು ವ್ಯರ್ಥವೇ ಆಗುವುದು. ನಿಮ್ಮ ಅಧ್ಯಯನವು ಕಡಿಮೆಯಾಗಲಿದೆ.
ವೃಶ್ಚಿಕ ರಾಶಿ: :ಅಂತಃಕರಣದಿಂದ ಮಾಡಿದ ಕೆಲಸಕ್ಕೆ ಗೆಲವು ನಿಶ್ಚಿತ. ಇಂದು ನಿಮ್ಮ ಮಾತು ಕಡಿಮೆ ಇದ್ದಷ್ಟೂ ನಿಮಗೂ ನಿಮ್ಮ ಕುಟುಂಬಕ್ಕೂ ಒಳ್ಳೆಯದು. ಅವಿವಾಹಿತರಿಗೆ ಮಾಂಗಲ್ಯ ಭಾಗ್ಯ ಕೂಡಿಬರಲಿದೆ. ಮಮಕಾರದಿಂದ ಕೊನೆಗೆ ದುಃಖವೇ ಆಗಬಹುದು. ಕ್ರೀಡೆಯಲ್ಲಿ ಜಯಗಳಿಸುವ ಸಾಧ್ಯತೆ ಇದೆ. ಸಂಬಂಧಿಗಳೊಂದಿಗೆ ಸಣ್ಣ ಪ್ರಯಾಣ ನೆಮ್ಮದಿ ತರಬಹುದು. ಪ್ರೇಮ ಜೀವನದಲ್ಲಿ ಗಾಢತೆಯ ಅನುಭವ. ನಿಮ್ಮ ಶ್ರಮದ ಫಲವನ್ನು ಇತರರು ಪಡೆದರೆ ವ್ಯಥೆ ಆಗಬಹುದು. ಹಳೆ ಸ್ನೇಹಿತರ ಭೇಟಿಗೆ ಯೋಜನೆ ಮಾಡುವಿರಿ. ಸಂಗಾತಿಯ ಕಾಳಜಿಯು ನಿಮ್ಮ ಮನಸ್ಸನ್ನು ಮುಕ್ತಗೊಳಿಸುತ್ತದೆ. ಸ್ನೇಹಿತರ ಸಾಲವು ತೀರುವುದು. ಪ್ರೇಯಸಿ ಜೊತೆಯಲ್ಲಿ ಹೊರಗೆ ವಾಯುವಿಹಾರಕ್ಕೆ ಹೋಗುವಿರಿ. ನೀವು ವ್ಯವಹಾರದಲ್ಲಿ ಪಾಲುದಾರರಾಗುವುದು ಉತ್ತಮ, ಇದು ನಿಮ್ಮ ವ್ಯವಹಾರವನ್ನು ಇನ್ನಷ್ಟು ವಿಸ್ತರಿಸುತ್ತದೆ. ಯಾವುದೇ ಕೆಲಸಕ್ಕೆ ಬೇರೆಯವರ ಮೇಲೆ ಅವಲಂಬಿತರಾಗಬೇಡಿ. ಉದ್ಯಮವು ದಿಕ್ಕು ತಪ್ಪದಂತೆ ನೋಡಿಕೊಳ್ಳಿ. ಹೊರದೇಶಕ್ಕೆ ನೀವು ಹೋಗಬೇಕಾದ ಸ್ಥಿತಿಯು ಬರಬಹುದು.
ಧನು ರಾಶಿ: :ನಿಮ್ಮವರಿಗೆ ಬೆಂಬಲ ಕೊಡುವ ಕೆಲಸ ಮಾಡುವಿರಿ. ಇಂದು ಅನಿರೀಕ್ಷಿತವಾಗಿ ವೈವಾಹಿಕ ಸಂಬಂಧವು ಕೂಡಿ ಬರಬಹುದು. ಬಂದ ಯೋಗವನ್ನು ಬಿಡುವುದು ಬೇಡ. ಇಂದು ಏನನ್ನೂ ಸಾಲವಾಗಿ ಕೊಡುವುದು ಬೇಡ. ಯಾರ ಮಾತಿಗೂ ಮನಸೋಲದೇ ನಿಮ್ಮದಾದುದನ್ನು ಮಾಡಿ. ಇಂದು ನಿಮ್ಮ ಕೆಲಸದ ಸ್ಥಳದಲ್ಲಿ ಪ್ರೀತಿ ಮೇಲುಗೈ ಸಾಧಿಸುತ್ತದೆ. ಮನೆಯವರೊಂದಿಗೆ ಹೆಚ್ಚು ಕಾಲ ಇಲ್ಲದಿದ್ದರೆ ಸಂಬಂಧಗಳ ಮೇಲೆ ವಿಪರೀತ ಪರಿಣಾಮ ಬೀರುತ್ತದೆ. ಸಹೋದ್ಯೋಗಿಗಳೊಂದಿಗೆ ಒಳ್ಳೆಯ ಸಂಬಂಧ ಬೆಳೆಸಿಕೊಳ್ಳಿ. ಕೆಲಸದಲ್ಲಿ ಹೊಸ ಜನರನ್ನು ಭೇಟಿಯಾಗಿ ಮುಂದಿನ ಅವಕಾಶಗಳತ್ತ ಗಮನ ಹರಿಸಿ. ನೀವು ಯಾರಿಗಾದರೂ ಮಾತುಕೊಟ್ಟರೆ, ಅದನ್ನು ಪೂರೈಸಲು ಪ್ರಯತ್ನಿಸುವಿರಿ. ನಿಮ್ಮ ಪ್ರೀತಿಪಾತ್ರರಿಗೆ ನಿಮ್ಮ ಮೇಲೆ ಸಂಪೂರ್ಣ ನಂಬಿಕೆ ಇರುತ್ತದೆ. ನಿಮ್ಮ ಸಂಗಾತಿಯ ಜೊತೆ ಚರ್ಚಿಸಿದರೆ ಅದು ನಿಮಗೆ ಉತ್ತಮವಾಗಿರುತ್ತದೆ. ನೀವು ಹಳೆಯ ಸ್ನೇಹಿತರನ್ನು ಭೇಟಿ ಮಾಡಲು ಹೋಗಬಹುದು. ಸ್ವಂತ ಬುದ್ಧಿಯಿಂದ ನಿಮ್ಮ ಕಾರ್ಯವನ್ನು ಮಾಡಿಕೊಳ್ಳಿ.
ಮಕರ ರಾಶಿ: :ಯಾವುದಕ್ಕೆ ಬಂಡವಾಳ ಹಾಕಲೂ ಭಯವಾಗಬಹುದು. ನಿಮ್ಮ ಅತ್ಯುತ್ಸಾಹಕ್ಕೆ ದೇಹವು ಸಹಕರಿಸದೇ ಇರಬಹುದು. ಮಕ್ಕಳ ತುಂಟಾಟಕ್ಕೆ ಅವರಿಗೆ ಬೈದು ಅವರ ದ್ವೇಷಕ್ಕೆ ಕಾರಣರಾಗುವಿರಿ. ದಾಂಪತ್ಯದಲ್ಲಿ ಆಪ್ತಭಾವವಿರಲಿದೆ. ಜಾಣ ಕಿವುಡುತನದಿಂದ ದೊಡ್ಡವರಾಗುವುದು ಬೇಡ. ಹಣಕಾಸಿನಲ್ಲಿ ಎಚ್ಚರಿಕೆ ಅಗತ್ಯ. ಸಂಗಾತಿಯೊಂದಿಗೆ ಜಗಳವಾದರೂ, ತಾಳ್ಮೆ ಬೇಕು. ಕೆಲಸದ ಕಡೆ ನೂರಕ್ಕೆ ನೂರು ಗಮನ ನೀಡಿ. ಹಿರಿಯರಿಂದ ಮಾರ್ಗದರ್ಶನ ಸಿಗಬಹುದು. ಪ್ರೀತಿಯಲ್ಲಿ ದುಃಖವಾಗಬಹುದು. ದೂರದಲ್ಲಿರುವ ನಿಮಗೆ ಮನೆಯ ವಾತಾವರಣ ಹಿತವೆನಿಸಬಹುದು. ಮನಸ್ಸು ಸ್ಥಿರವಾಗಿರಲಿ. ನಿಮ್ಮ ತಾಯಿಯ ಕಡೆಯಿಂದ ಆರ್ಥಿಕ ಲಾಭವನ್ನು ಪಡೆಯುತ್ತಿರುವಿರಿ. ವಿದೇಶದಲ್ಲಿರುವ ಕುಟುಂಬದ ಸದಸ್ಯರಿಂದ ನಿಮಗೆ ಶುಭ ಸುದ್ದಿಯು ಬರುವುದು. ರಾಜಕೀಯವಾಗಿ ಒತ್ತಡಗಳು ಬರಬಹುದು. ಅದನ್ನು ತಾಳ್ಮೆಯಿಂದ ಎದುರಿಸಬೇಕು. ಉಚಿತವಾದ ಸ್ಥಾನವು ಇಂದು ನಿಮಗೆ ಸಿಗಬಹುದು. ವಿಶ್ವಾಸಘಾತದಿಂದ ನಿಮಗೆ ಬೇಸರವಾಗುವುದು.
ಕುಂಭ ರಾಶಿ: :ಭವಿಷ್ಯದ ತೀರ್ಮಾನವನ್ನು ಇಂದು ಮಾಡಲಾಗದೇ ಮುಂದೂಡುಬಿರಿ. ನೀವು ಎಂತಹ ವಿಚಾರದಲ್ಲಿ ಪ್ರಸ್ತಾಪಿಸಿದರೂ ವಿವಾದವಾಗುವುದು. ಸಾಮಾಜಿಕ ಜಾಲತಾಣದಲ್ಲಿ ಸಮಯವನ್ನು ಹೆಚ್ಚು ಕಳೆಯಬಹುದು. ಜೀವನದ ತೊಂದರೆಗಳನ್ನು ಸಂಬಂಧಿಕರೊಂದಿಗೆ ಹಂಚಿಕೊಳ್ಳಬೇಡಿ. ಹಣದ ಹೂಡಿಕೆ ಕುರಿತು ಯೋಚಿಸಿ ನಿರ್ಧಾರ ಮಾಡಿ. ಕುಟುಂಬದಲ್ಲಿ ಭಿನ್ನಾಭಿಪ್ರಾಯಗಳು ಇರುವಾಗ ಸಹನೆವಹಿಸಿ. ಪ್ರೇಮದಲ್ಲಿ ವಿಶಿಷ್ಟ ಅನುಭವ ಸಾಧ್ಯ. ಕೆಲಸಕ್ಕಾಗಿ ಕೈಗೊಂಡ ಪ್ರಯಾಣ ಯಶಸ್ಸು ತರುತ್ತದೆ. ಸಣ್ಣ ಮೊತ್ತವನ್ನೂ ಹಣವೆಂದೇ ಭಾವಿಸಿ. ಇದೇ ನಿಮಗೆ ಮುಂದಿನ ಸಂಪತ್ತನ್ನು ಕೊಡಿಸುವುದು. ನೀವು ನಿಮ್ಮ ಹಿರಿಯರ ಸಲಹೆಯನ್ನು ಅನುಸರಿಸಿದರೆ ಉತ್ತಮವಾದುದನ್ನು ಪಡೆಯುವಿರಿ. ಆತುರದಲ್ಲಿ ಯಾವುದೇ ಕೆಲಸ ಮಾಡುವುದನ್ನು ಮುಖ್ಯ ಕಾರ್ಯಗಳೇ ಮರೆತುಹೋಗಬಹುದು. ನಿಮ್ಮ ವಿರೋಧಿಗಳಲ್ಲಿ ಒಬ್ಬರು ನಿಮಗೆ ಕಿರುಕುಳ ನೀಡಲು ಪ್ರಯತ್ನಿಸಬಹುದು.
ಮೀನ ರಾಶಿ: :ಬೇಕಾದುದನ್ನು ಪಡೆಯಲು ಹಲವು ಬಾರಿ ಹಲವು ರೀತಿಯಲ್ಲಿ ಮಾಡಬೇಕಾಗಬಹುದು. ಇಂದು ನೀವು ಏಕಾಂತವಾಗಿ ಇರಲು ಆಗದು. ಏನಾದರೂ ಅಡಚಣೆ ಇರುವುದು. ನಿಮ್ಮೊಳಗೆ ಅತೃಪ್ತಭಾವವು ಇರಲಿದೆ. ಯಾರದೋ ಕೆಲಸದಲ್ಲಿ ಮಗ್ನರಾಗುವಿರಿ. ಆಲಸ್ಯವು ಮೈತುಂಬಿಕೊಂಡು ನಿದ್ರೆಯನ್ನು ಮಾಡುವ ಮನಃಸ್ಥಿತಿಯಲ್ಲಿ ಇರುವಿರಿ. ಹಣಕಾಸಿನ ಕೆಲಸಗಳಲ್ಲಿ ಯಶಸ್ಸು ಸಿಗಬಹುದು. ಸಂಗಾತಿಯ ಕುಟುಂಬದ ಅಡ್ಡಿ ಕೆಲವೊಂದು ವ್ಯತ್ಯಯ ತಂದರೂ, ನಿಮ್ಮ ಸಹನೆಗೆ ಅದರ ಬಗ್ಗೆ ಪ್ರಭಾವ ಬೀರುವುದಿಲ್ಲ. ನೀವು ನಿರೀಕ್ಷೆ ಮಾಡದ ರೀತಿ ದಿನ ನಡೆಯಲಿದೆ. ಬೆನ್ನುನೋವು ಕಾಣಿಸಿಕೊಂಡೀತು. ಇಂದು ಯಾರನ್ನೂ ಒಪ್ಪಿಕೊಳ್ಳಲಾರಿರಿ. ನೀವು ಇಂದು ಹೊರಗಿನವರಿಗೆ ಯಾವುದೇ ಆಂತರಿಕ ಪ್ರಮುಖ ಮಾಹಿತಿಯನ್ನು ಬಹಿರಂಗಪಡಿಸಬಾರದು. ಸಂಬಂಧಗಳು ಮೊದಲಿಗಿಂತ ಉತ್ತಮವಾಗಿರುತ್ತವೆ. ನಿಮ್ಮ ಯೋಜನೆಗಳನ್ನು ನೀವು ವೇಗಗೊಳಿಸುತ್ತೀರಿ. ಯಾವುದೇ ಹೂಡಿಕೆ ಸಂಬಂಧಿತ ಯೋಜನೆಯ ಬಗ್ಗೆ ನಿಮಗೆ ಮಾಹಿತಿ ಬಂದರೆ ಹೂಡಿಕೆ ಮಾಡಿ.
TV9Kannada