Murder Case: ಲೈಂಗಿಕ ಕ್ರಿಯೆಗೆ ಸಹಕರಿಸದ ಬಾಲಕಿಯ ಕೊಂದು ಸೂಟ್‌ಕೇಸ್‌ನಲ್ಲಿ ತುಂಬಿ ಎಸೆದ ದುರುಳರ ಬಂಧನ.

ಬೆಂಗಳೂರು (Bengaluru crime news) ನಗರ ಜಿಲ್ಲೆಯ ಆನೇಕಲ್ (Anekal) ತಾಲೂಕಿನ ಹಳೇ ಚಂದಾಪುರ ರೈಲ್ವೆ ಬ್ರಿಡ್ಜ್ ಬಳಿ ಸೂಟ್​ಕೇಸ್​ನಲ್ಲಿ ಪತ್ತೆಯಾಗಿದ್ದ ಅಪರಿಚಿತ ಬಾಲಕಿಯ ಶವ (body found) ಪ್ರಕರಣವನ್ನು ಸೂರ್ಯನಗರ ಠಾಣಾ ಪೊಲೀಸರು ಭೇದಿಸಿದ್ದಾರೆ.

ಆರೋಪಿಗಳು ಬಾಲಕಿಯ ಮೇಲೆ ಅತ್ಯಾಚಾರ (Physical abuse) ಎಸಗಿ, ಬಳಿಕ ಕೊಲೆ (Murder case) ಮಾಡಿ ಶವವನ್ನು ಸೂಟ್‌ಕೇಸ್​ನಲ್ಲಿ ತುರುಕಿ ರೈಲ್ವೆ ಹಳಿ ಪಕ್ಕದಲ್ಲಿ ಎಸೆದು ಹೋಗಿದ್ದರು.

ಪ್ರಕರಣದಲ್ಲಿ ಭಾಗಿಯಾಗಿರುವ ಬಿಹಾರ ಮೂಲದ ಅಶಿಕ್ ಕುಮಾರ್ (22) ಮುಖೇಶ್ ರಾಜಬನ್ಶಿ (35), ಇಂದುದೇವಿ (32) ರಾಜರಾಮ್ ಕುಮಾರ್ (18) ಪಿಂಟು ಕುಮಾರ್ (18), ಕಾಲು ಕುಮಾರ್ (17) ರಾಜು ಕುಮಾರ್ (17) ಬಂಧಿತರು. ಆರೋಪಿಗಳು ಮೇ 20ರಂದು ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದಾರೆ.

ಎ1 ಆಶೀಕ್ ಕುಮಾರ್ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಕಾಚನಾಯಕನಹಳ್ಳಿಯಲ್ಲಿ ವಾಸವಾಗಿದ್ದ. ಆಶೀಕ್ ಕುಮಾರ್ ಮೇ 13ರಂದು ಬೆಂಗಳೂರಿನಿಂದ ಬಿಹಾರಕ್ಕೆ ತೆರಳಿದ್ದ. ಎರಡೇ ದಿನದಲ್ಲಿ ಪಕ್ಕದ ಗ್ರಾಮದ ಬಾಲಕಿಯನ್ನು ಮಾತಿನಿಂದ ಮರುಳು ಮಾಡಿದ್ದ. ಮೇ 15ರಂದು ಆಶೀಕ್ ಕುಮಾರ್ ಬಾಲಕಿಯನ್ನು ಕರೆದುಕೊಂಡು ಬಿಹಾರದಿಂದ ಬೆಂಗಳೂರಿಗೆ ಹೊರಟಿದ್ದು, 18ರಂದು ಇಬ್ಬರೂ ಬೆಂಗಳೂರಿಗೆ ತಲುಪಿದ್ದರು. ಬಾಲಕಿ ಜೊತೆ ಬೆಂಗಳೂರು ನಗರ ಸುತ್ತಾಡಿದ್ದ.

ಆರೋಪಿ ಅದೇ ದಿನ ರಾತ್ರಿ ಸಂಬಂಧಿ ಮುಖೇಶ್ ಮನೆಗೆ ಬಾಲಕಿಯನ್ನು ಕರೆದುಕೊಂಡು ಹೋಗಿದ್ದ. ಮರುದಿನ ಬಾಲಕಿ ಲೈಂಗಿಕ ಕ್ರಿಯೆಗೆ ಸಹಕರಿಸದ ಹಿನ್ನೆಲೆಯಲ್ಲಿ ಆಕೆಯ ಜೊತೆಗೆ ಜಗಳವಾಡಿದ್ದ. ನಂತರ, ಬಿಯರ್ ಬಾಟಲ್​ನಿಂದ ಯುವತಿಯ ಖಾಸಗಿ ಅಂಗಕ್ಕೆ ಹಲ್ಲೆ ಮಾಡಿದ್ದ. ಬಳಿಕ ರಾಡ್​ನಿಂದಲೂ ಬಾಲಕಿ ಮೇಲೆ ಹಲ್ಲೆ ಮಾಡಿದ್ದು, ಅತ್ಯಾಚಾರವೆಸಗಿ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ.

ಬಾಲಕಿಯನ್ನು ಕೊಲೆ ಮಾಡಿದ ಬಳಿಕ ಆರೋಪಿ ಆಶೀಕ್ ಕುಮಾರ್ ಸಂಬಂಧಿಗಳಿಗೆ ವಿಚಾರ ತಿಳಿಸಿದ್ದ. ನಂತರ ಆರೋಪಿಗಳು ಬಾಲಕಿಯ ಶವವನ್ನು ಸೂಟ್​ಕೇಸ್​ನಲ್ಲಿ ತುರುಕಿದ್ದು, ಎಲ್ಲರೂ ಸೇರಿ ಕ್ಯಾಬ್​ನಲ್ಲಿ ಬಾಲಕಿಯ ಶವ ತೆಗೆದುಕೊಂಡು ಹಳೇ ಚಂದಾಪುರ ರೈಲ್ವೆ ಬ್ರಿಡ್ಜ್ ಬಳಿ ಬಂದಿದ್ದರು. ರೈಲು ಹಳಿಯಿಂದ ಕೆಳಕ್ಕೆ ಸೂಟ್​ಕೇಸ್ ಎಸೆದು ಪರಾರಿಯಾಗಿದ್ದರು. ಚಲಿಸುವ ರೈಲಿನಿಂದ ಎಸೆದಿರುವಂತೆ ಬಿಂಬಿಸಲು ಆರೋಪಿಗಳು ಯತ್ನಿಸಿದ್ದರು. ಬಳಿಕ ಏಳೂ ಮಂದಿ ಆರೋಪಿಗಳು ಬಿಹಾರಕ್ಕೆ ಪರಾರಿಯಾಗಿದ್ದಾರೆ.

ಸೂಟ್​ಕೇಸ್​ನಲ್ಲಿ ಬಾಲಕಿ ಶವ ಸಿಕ್ಕ ಪ್ರಕರಣವನ್ನು ಸೂರ್ಯನಗರ ಠಾಣೆ ಪೊಲೀಸರು ಪೋಕ್ಸೋ ಕೇಸ್​ ದಾಖಲಿಸಿಕೊಂಡು ತನಿಖೆ ನಡೆಸಿದ್ದರು. ಆರೋಪಿಗಳ ಚಲನವಲನ ಸಿಸಿ ಕ್ಯಾಮೆರಾಗಳಲ್ಲಿ ಸೆರೆಯಾಗಿತ್ತು. ಆರೋಪಿಗಳು ಸೂಟ್​ಕೇಸ್​​ನಲ್ಲಿ ಶವ ಸಾಗಿಸುವ ದೃಶ್ಯಗಳು ಕೂಡ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಸಿಸಿಟಿವಿ ದೃಶ್ಯ ಆಧರಿಸಿ, ಆರೋಪಿಗಳ ಜಾಡು ಹಿಡಿದು ಹೊರಟ ಪೊಲೀಸರು, ಬಿಹಾರದಲ್ಲಿ ಏಳೂ ಮಂದಿಯನ್ನು ಆರೆಸ್ಟ್ ಮಾಡಿದ್ದಾರೆ. ಸೂರ್ಯನಗರ ಠಾಣೆಯ ಪೊಲೀಸರಿಂದ ತನಿಖೆ ಮುಂದುವರೆದಿದೆ.

ಮೃತ ಬಾಲಕಿಯ ತಂದೆ ಬಿಹಾರದಲ್ಲಿ ಕಿಡ್ನಾಪ್ ಕೇಸ್ ದಾಖಲಿಸಿದ್ದಾರೆ. ಬಾಲಕಿಯ ದೂರು ಆಧರಿಸಿ ಅಶೀಕ್ ಕುಮಾರ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ಬಿಹಾರ ಪೊಲೀಸರು ಸೂರ್ಯನಗರ ಪೊಲೀಸರಿಗೆ ಮಾಹಿತಿ ನೀಡಿದ್ದರು. ಆಗ, ಸೂರ್ಯನಗರ ಠಾಣೆ ಪೊಲೀಸರು ನಡೆದ ಘಟನೆಯನ್ನು ತಿಳಿಸಿದ್ದಾರೆ.

Vishwavani

Leave a Reply

Your email address will not be published. Required fields are marked *