IND vs NZ 3rd ODI: ಇಂದು ಭಾರತ-ನ್ಯೂಜಿಲೆಂಡ್ ತೃತೀಯ ಏಕದಿನ: ಕ್ಲೀನ್​ಸ್ವೀಪ್​ನತ್ತ ರೋಹಿತ್ ಚಿತ್ತ

IND vs NZ 1st ODI live Streaming

ಈಗಾಗಲೇ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯನ್ನು ಭಾರತ (India vs New Zealand) ಕೈವಶ ಮಾಡಿಕೊಂಡಿದೆ. ಹೈದರಾಬಾದ್​ನಲ್ಲಿ ನಡೆದಿದ್ದ ಮೊದಲ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ (Team India) 12 ರನ್​ಗಳ ಜಯ ಸಾಧಿಸಿತ್ತು. ಬಳಿಕ ರಾಪ್​ಪುರದಲ್ಲಿ ಬಿರುಗಾಳಿ ಎಬ್ಬಿಸಿದ ಭಾರತೀಯ ಬೌಲರ್​ಗಳು ದ್ವಿತೀಯ ಪಂದ್ಯದಲ್ಲೂ 8 ವಿಕೆಟ್​ಗಳ ಅಮೋಘ ಗೆಲುವು ಸಾಧಿಸಿ ಮೂರು ಪಂದ್ಯಗಳ ಏಕದಿನದಲ್ಲಿ 2-0 ಮುನ್ನಡೆ ಪಡೆದುಕೊಂಡು ಸರಣಿ ಕೈವಶ ಮಾಡಿಕೊಂಡಿದೆ. ಇದೀಗ ಉಭಯ ತಂಡಗಳು ಮೂರನೇ ಏಕದಿನಕ್ಕೆ ಸಜ್ಜಾಗಿದೆ. ಇಂದು ಭಾರತ ಹಾಗೂ ನ್ಯೂಜಿಲೆಂಡ್ ನಡುವೆ ಅಂತಿಮ ತೃತೀಯ ಏಕದಿನ ಪಂದ್ಯ ಆಯೋಜಿಸಲಾಗಿದೆ.

ಇಂದೋರ್​ನ ಹೋಲ್ಕರ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಮೂರನೇ ಏಕದಿನ ಪಂದ್ಯ ನಡೆಯಲಿದೆ. ಮಧ್ಯಾಹ್ನ 1:30ಕ್ಕೆ ಮ್ಯಾಚ್ ಆರಂಭವಾಗಲಿದ್ದು, 1 ಗಂಟೆಗೆ ಟಾಸ್ ಪ್ರಕ್ರಿಯೆ ಏರ್ಪಡಿಸಲಾಗಿದೆ. ರೋಹಿತ್ ಪಡೆ ಈ ಕೊನೆಯ ಪಂದ್ಯವನ್ನೂ ಗೆದ್ದು ಸರಣಿ ಕ್ಲೀನ್​ಸ್ವೀಪ್ ಮಾಡುವ ಗುರಿ ಹೊಂದಿದ್ದರೆ, ಇತ್ತ ಕಿವೀಸ್ ಪಡೆ ಕನಿಷ್ಠ ಒಂದು ಪಂದ್ಯವನ್ನಾದರೂ ಜಯಿಸಿ ಮಾನ ಉಳಿಸಿಕೊಳ್ಳಲು ಹೋರಾಟ ನಡೆಸಬೇಕಿದೆ.

ಈಗಾಗಲೇ ಸರಣಿ ವಶಪಡಿಸಿಕೊಂಡಿರುವ ಭಾರತ ತಂಡದ ಪ್ಲೇಯಿಂಗ್ ಇಲೆವೆನ್​ನಲ್ಲಿ ಕೆಲವು ಪ್ರಮುಖ ಬದಲಾವಣೆ ನಿರೀಕ್ಷಿಸಲಾಗಿದೆ. ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ ಅವರಿಗೆ ವಿಶ್ರಾಂತಿ ನೀಡುವ ಸಾಧ್ಯತೆ ಇದೆ. ನಾಯಕ ರೋಹಿತ್ ಶರ್ಮಾ ಕೂಡ ರೆಸ್ಟ್ ಮೊರೆ ಹೋದರೆ ಅಚ್ಚರಿ ಪಡಬೇಕಿಲ್ಲ. ಹೀಗಾಗಿ ಟೀಮ್ ಇಂಡಿಯಾ ಆಡುವ ಬಳಗದಲ್ಲಿ ಹೊಸ ಮುಖಗಳು ಕಾಣುವುದು ಖಚಿತ.

ವಿಶೇಷ ಎಂದರೆ ಇಂದೋರ್‌ನಲ್ಲಿ ಟೀಮ್ ಇಂಡಿಯಾ ಒಂದು ವಿಶೇಷ ದಾಖಲೆ ಮಾಡುವ ಅವಕಾಶ ಹೊಂದಿದೆ. ಅದೆನೆಂದರೆ, ಇದುವರೆಗೆ ಹೋಳ್ಕರ್ ಸ್ಟೇಡಿಯಂನಲ್ಲಿ 5 ಏಕದಿನ ಪಂದ್ಯಗಳು ನಡೆದಿದ್ದು, ಈ ಐದು ಪಂದ್ಯಗಳಲ್ಲಿಯೂ ಟೀಂ ಇಂಡಿಯಾ ಜಯ ಸಾಧಿಸಿದೆ. ಈಗ ನಡೆಯುವ 6ನೇ ಏಕದಿನ ಪಂದ್ಯದಲ್ಲೂ ಗೆಲುವ ಸಾಧಿಸಿದರೆ, ಈ ಮೈದಾನದಲ್ಲಿ ಆಡಿದ ಎಲ್ಲಾ ಪಂದ್ಯಗಳನ್ನೂ ಗೆದ್ದ ದಾಖಲೆಯನ್ನು ಟೀಮ್ ಇಂಡಿಯಾ ಬರೆಯಲಿದೆ.

ಭಾರತ ಸಂಭಾವ್ಯ ಪ್ಲೇಯಿಂಗ್ ಇಲೆವೆನ್: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ರಜತ್ ಪಟಿದಾರ್, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಥಾಕೂರ್, ಕುಲ್ದೀಪ್ ಯಾದವ್, ಉಮ್ರಾನ್ ಮಲಿಕ್, ಶಾರ್ದೂಲ್ ಠಾಕೂರ್.

ನ್ಯೂಜಿಲೆಂಡ್ ಸಂಭಾವ್ಯ ಪ್ಲೇಯಿಂಗ್ ಇಲೆವೆನ್: ಫಿನ್ ಅಲೆನ್, ಡೆವೊನ್ ಕಾನ್ವೇ, ಹೆನ್ರಿ ನಿಕೋಲ್ಸ್, ಡೇರಿಲ್ ಮಿಚೆಲ್, ಟಾಮ್ ಲ್ಯಾಥಮ್ (ನಾಯಕ), ಗ್ಲೆನ್ ಫಿಲಿಪ್ಸ್, ಮೈಕೆಲ್ ಬ್ರೇಸ್‌ವೆಲ್, ಹೆನ್ರಿ ಶಿಪ್ಲಿ, ಮಿಚೆಲ್ ಸ್ಯಾಂಟ್ನರ್, ಲಾಕಿ ಫರ್ಗುಸನ್, ಬ್ಲೇರ್ ಟಿಕ್ನರ್.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

source https://tv9kannada.com/sports/cricket-news/india-will-be-aiming-for-a-clean-sweep-against-new-zealand-in-the-third-odi-kannada-cricket-news-vb-au48-506805.html

Leave a Reply

Your email address will not be published. Required fields are marked *