ಜಿಲ್ಲೆಗೆ ಹೆಚ್ಚುವರಿ ಏಕಲವ್ಯ ವಸತಿ ಶಾಲೆ ಮಂಜೂರಾತಿಗೆ ಸಂಸದ ಗೋವಿಂದ ಎಂ.ಕಾರಜೋಳ ಮನವಿ.

ಪೋಟೋ ಮತ್ತು ವರದಿ ಸುರೇಶ್ ಪಟ್ಟಣ್

ಚಿತ್ರದುರ್ಗ ಜೂ. 26  ಸುಮಾರು 4 ಲಕ್ಷಕ್ಕೂ ಹೆಚ್ಚು ಪರಿಶಿಷ್ಟ ಪಂಗಡಗಳ ಜನರು ವಾಸಿಸುತ್ತಿರುವ ಚಿತ್ರದುರ್ಗ ಜಿಲ್ಲೆಗೆ ಹಾಲಿ ಇರುವ ಏಕಲವ್ಯ ವಸತಿ ಶಾಲೆಯ ಜೊತೆಗೆ ಇನ್ನೊಂದು ಹೆಚ್ಚುವರಿ ಏಕಲವ್ಯ ವಸತಿ ಶಾಲೆಯನ್ನು ಮಂಜೂರು ಮಾಡಲು ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವರಿಗೆ ಶಿಫಾರಸ್ಸು ಮಾಡುವಂತೆ ಸಂಸದ ಗೋವಿಂದ ಎಂ.ಕಾರಜೋಳ ರವರು ನಿನ್ನೆ ನವದೆಹಲಿಯಲ್ಲಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ರಾಷ್ಟ್ರೀಯ ಬಿ.ಜೆ.ಪಿ.ಅಧ್ಯಕ್ಷರಾದ ಜೆ.ಪಿ.ನಡ್ಡಾರವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. 

ಚಿತ್ರದುರ್ಗ ಜಿಲ್ಲೆಯಲ್ಲಿ ಸಾಕಷ್ಟು ಪರಿಶಿಷ್ಟ ಪಂಗಡಕ್ಕೆ ಸೇರಿದವರ ಜನಸಂಖ್ಯೆಯಿದೆ, ಅದರಲ್ಲೂ ಚಳ್ಳಕೆರೆ ಹಾಗೂ ಮೊಳಕಾಲ್ಲೂರು ತಾಲ್ಲೂಕುಗಳಲ್ಲಿ ಅತಿ ಹೆಚ್ಚು ಪರಿಶಿಷ್ಟ ವರ್ಗದ ಜನರು ವಾಸಿಸುತ್ತಿದ್ದಾರೆ. ಜಿಲ್ಲೆಯಲ್ಲಿ ಹಾಲಿ ಇರುವ ಏಕಲವ್ಯ ವಸತಿ ಶಾಲೆ ಬೇಡಿಕೆಯನ್ನೂ ಪೂರೈಸಲಾಗುತ್ತಿಲ್ಲ, ಪರಿಶಿಷ್ಟ ವರ್ಗಗಳ ಮಕ್ಕಳೂ ಕೂಡ ಗುಣಮಟ್ಟದ ಶಿಕ್ಷಣ ಪಡೆದು ಮುಖ್ಯವಾಹಿನಿಗೆ ಬರಬೇಕು ಎನ್ನುವ ಆಶಯ ನನ್ನದಾಗಿದೆ ಎಂಬದನ್ನು ಸಚಿವರಿಗೆ ಸಂಸದರು ಮನದಟ್ಟು ಮಾಡಿದ್ದಾರೆ. ಏಕಲವ್ಯ ವಸತಿ ಶಾಲೆಗೆ ಅಗತ್ಯವಾಗಿರುವ 15 ಎಕರೆ ಜಮೀನನ್ನೂ ಸಹ ಗುರುತಿಸಲು ಈಗಾಗಲೇ ಕ್ರಮಕೈಗೊಂಡಿರುವುದಾಗಿ ಪತ್ರದಲ್ಲಿ ಸಂಸದರು ತಿಳಿಸಿದ್ದಾರೆ. 

ಈ ಸಂದರ್ಭದಲ್ಲಿ ಸಂಸದರ ಜೊತೆ ವಿಧಾನಪರಿಷತ್ ಸದಸ್ಯರಾದ ನವೀನ್, ಎನ್.ರವಿಕುಮಾರ್

Leave a Reply

Your email address will not be published. Required fields are marked *