ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ಚಿತ್ರದುರ್ಗ ಜೂ. 27 ಚಿತ್ರದುರ್ಗ ಜಿಲ್ಲಾ ರೆಡ್ಡಿ ಜನಸಂಘವು 2024-25ನೇ ಸಾಲಿನ ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿಯಲ್ಲಿ ಉತ್ತಮ ಅಂಕಗಳಿಸಿದ ಪ್ರತಿಭಾವಂತ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಏರ್ಪಡಿಸಲಿದೆ.
ಎಸ್ಸೆಸ್ಸೆಲ್ಸಿಯಲ್ಲಿ ಶೇ.90ಕ್ಕೂ ಹೆಚ್ಚು ಹಾಗೂ ಪಿಯುಸಿಯಲ್ಲಿ ಶೇ.85ಕ್ಕೂ ಹೆಚ್ಚು ಅಂಕಗಳೊಂದಿಗೆ ಉತ್ತೀರ್ಣ ರಾದ ಚಿತ್ರದುರ್ಗ,
ದಾವಣಗೆರೆ, ಶಿವಮೊಗ್ಗ ಜಿಲ್ಲೆಯ ಸಮುದಾಯದ ವಿದ್ಯಾರ್ಥಿಗಳನ್ನು ಗೌರವಿಸಲಾಗುತ್ತದೆ.
ಅರ್ಹರು ಅಗತ್ಯ ದಾಖಲೆಗಳೊಂದಿಗೆ ಚಿತ್ರದುರ್ಗದ ಬಿ.ಡಿ.ರಸ್ತೆಯಲ್ಲಿರುವ ಸಂಘದ ಕಚೇರಿಗೆ ಜುಲೈ 1ರಿಂದ ಸೆಪ್ಟೆಂಬರ್ 30ರೊಳಗೆ
ಅರ್ಜಿ ತಲುಪಿಸುವಂತೆ ಸಂಘದ ಕಾರ್ಯದರ್ಶಿ ಜೆ.ಪರಶುರಾಮ ಹಾಗೂ ಡಿ.ಕೆ.ಶೀಲಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.