ಪೋಟೋ ಮತ್ತು ವರದಿ ಸುರೇಶ್ ಪಟ್ಟಣ್
ಚಿತ್ರದುರ್ಗ ಜೂ. 28 ಜಿಲ್ಲಾ ಯುವ ಕಾಂಗ್ರೆಸ್ ಕಾನೂನು ಘಟಕದವತಿಯಿಂದ ಶನಿವಾರ ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಕಚೇರಿ ಯಲ್ಲಿ ಸಂವಿಧಾನ ಓದು ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.
ಇದೇ ಸಂದರ್ಭದಲ್ಲಿ ಎಸ್.ಎಸ್.ಎಲ್.ಸಿ.ಯಲ್ಲಿ ಉತ್ತಮವಾದ ಅಂಕಗಳನ್ನು ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಕರ್ನಾಟಕ ಯುವ ಕಾಂಗ್ರೆಸ್ ಉಸ್ತುವಾರಿಗಳಾದ ನಿಗಮ್ ಬಂಡಾರಿ, ಯುವ ಕಾಂಗ್ರೆಸ್‍ನ ರಾಜ್ಯಧ್ಯಕ್ಷರಾದ ಹೆಚ್.ಎಸ್. ಮಂಜುನಾಥ್ ಗೌಡ ಹಾಗೂ ಯುವ ಕಾಂಗ್ರೆಸ್, ಕಾನೂನು ಘಟಕದ ರಾಜ್ಯಾಧ್ಯಕ್ಷರಾದ ಶ್ರೀಧರ್ ಜಾದವ್, ಜಿಲ್ಲಾ ಯುವ ಕಾಂಗ್ರೆಸ್,ಕಾನೂನು ಘಟಕದ ಅಧ್ಯಕ್ಷರಾದ ಶಶಾಂಕ್ ಏನ್, ಖುದ್ದುಸ್, ಪ್ರಕಾಶ್ ರಾಮನಾಯ್ಕ್, ಮಧುಗೌಡ, ರಘು ಸೇರಿದಂತೆ ಇತರರು ಭಾಗವಹಿಸಿದ್ದರು.