ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ಚಿತ್ರದುರ್ಗ ಜು.05 ದಂಡಿನ ಕುರುಬರಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸುಮಾರು ನಾಲ್ಕು ವರ್ಷಗಳಿಂದ ಅರ್ಧಕ್ಕೆ ನಿಂತಿರುವ
ಶೌಚಾಲಯದ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಪಪ್ಪಿ ಸ್ಟೂಡೆಂಟ್ ವಿಂಗ್ ಸದಸ್ಯರು ತಾಲೂಕು ಪಂಚಾಯಿತಿ
ಕಾರ್ಯನಿರ್ವಹಣಾಧಿಕಾರಿ ಮನವಿ ಮಾಡಿದ್ದಾರೆ.
ಮನವಿ ಸ್ವೀಕರಿಸಿ ಮಾತನಾಡಿದ ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಅರ್ಧಕ್ಕೆ ನಿಂತಿರುವ ಕಾಮಗಾರಿ
ವಿಚಾರವನ್ನು ಸಂಬಂಧಪಟ್ಟ ಪಿಡಿಒ ಅವರ ಗಮನಕ್ಕೆ ತಂದು ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಕಾಮಗಾರಿಯನ್ನು
ಮಾಡಿಸಲಾಗುವುದು, ನಾನು ಕೂಡ ಸ್ಥಳಕ್ಕೆ ವೀಕ್ಷಣೆ ಮಾಡಿ ಅತಿ ಶೀಘ್ರದಲ್ಲೇ ಕೆಲಸ ಮುಗಿಸುವಂತೆ ಅಧಿಕಾರಿಗಳು ಸೂಚನೆ
ನೀಡಲಾಗುವುದು ಎಂದು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಪಪ್ಪಿ ಸ್ಟೂಡೆಂಟ್ ವಿಂಗ್ ಸದಸ್ಯರಾದ ರವಿ, ಸಲೀಂ, ಗೌತಮ್ ಇದ್ದರು.