ಮಾಹಿತಿ ಕೃಪೆ :
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ
ಚಿತ್ರದುರ್ಗ(ಜ.25) : ದಾವಣಗೆರೆ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ಇದೇ ಜನವರಿ 30 ಮತ್ತು 31 ರಂದು ದಾವಣಗೆರೆ ನಗರದ ಪಿ.ಬಿ.ರಸ್ತೆಯ ಅರುಣ ಚಿತ್ರ ಮಂದಿರದ ಎದುರಿನ ಪಶು ಆಸ್ಪತ್ರೆ ಆವರಣದಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ರೈತರಿಗೆ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಹಮ್ಮಿಕೊಳ್ಳಲಾಗಿದೆ.
ಆಸಕ್ತರು ಆಧಾರ್ ಕಾರ್ಡ್, ಎರಡು ಪಾಸ್ ಫೋರ್ಟ್ ಸೈಜ್ ಫೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಗಳೊಂದಿಗೆ ತರಬೇತಿಗೆ ಹಾಜರಾಗಬೇಕು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08192-233787ಗೆ ಸಂಪರ್ಕಿಸಬಹುದು ಎಂದು ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದ ಮುಖ್ಯ ಪಶು ವೈದ್ಯಾಧಿಕಾರಿ ತಿಳಿಸಿದ್ದಾರೆ.
The post ಜನವರಿ 30 ಮತ್ತು 31 ರಂದು ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ first appeared on Kannada News | suddione.
from ಚಿತ್ರದುರ್ಗ – Kannada News | suddione https://ift.tt/e7OwizC
via IFTTT