ಚಿತ್ರದುರ್ಗ,ಆ.01
ವರದಿ ಮತ್ತು ಪೋಟೋ ಸುರೇಶ್ ಪಟ್ಟಣ್
ಸಾರಿಗೆ ನೌಕರರ 38 ತಿಂಗಳ ವೇತನ ಪರಿಷ್ಕರಣೆ ಹಿಂಬಾಕಿಯನ್ನು ಕೂಡಲೇ ನೀಡಬೇಕು ಇಲ್ಲವಾದಲ್ಲಿ ಇದೇ ಆ.05 ರಿಂದ ಅನಿರ್ದಿಷ್ಟಾವಧಿ ಮುಷ್ಕರವನ್ನು ಕೈಗೊಳ್ಳುವುದಾಗಿ ಎಂದು ಜಿಲ್ಲಾ ಏಐಟಿಯುಸಿಯ ಜಿಲ್ಲಾ ಮಂಡಳಿಯ ಅಧ್ಯಕ್ಷ ಹಾಗೂ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಚಿತ್ರದುರ್ಗ ವಿಭಾಗದ ಗೌರವ ಅಧ್ಯಕ್ಷರಾದ ಸುರೇಶ್ ಬಾಬು ಸರ್ಕಾರವನ್ನು ಎಚ್ಚರಿಸಿದ್ದಾರೆ.
ನಗರದ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಎಸ್ಆರ್ಟಿಸಿ ನೌಕರರು ಹಗಲು ರಾತ್ರಿ ಕಷ್ಟಪಟ್ಟು ಕೆಲಸ ಮಾಡುತ್ತಿದ್ದಾರೆ. ಆದರೆ ಮುಖ್ಯಮಂತ್ರಿಗಳು ಹೇಳುವುದು ಒಂದು. ಮಾಡುವುದು ಒಂದಾಗಿದೆ. 38 ತಿಂಗಳ ವೇತನ ಪರಿಷ್ಕರಣೆ ಹಿಂಬಾಕಿಯನ್ನು ಕೇಳಿದರೆ ಸಾರಿಗೆ ಸಚಿವರು ಹಿಂದಿನ ಸರ್ಕಾರದ ಮೇಲೆ ಬೆರಳಿಟ್ಟು ತೋರಿಸುತ್ತಿದ್ದಾರೆ ಇದರಿಂದ ಸಮಸ್ಯೆ ಬಗೆಹರಿಯದೆ ಉಳಿದೆ ಎಂದು ಕಳವಳ ವ್ಯಕ್ತಡಿಸಿದರು.
ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಪ್ರತಿಭಟನೆಯನ್ನು ಮಾಡಿದಾಗ ಎಸ್ಮೋ ಜಾರಿ ಮಾಡುತ್ತೇವೆ ಎಂದು ಹೆದರಿಸುವ ತಂತ್ರಗಾರಿಕೆಯನ್ನು ಸರ್ಕಾರ ಮಾಡುತ್ತಿದೆ. ಅಲ್ಲದೆ ಸರ್ಕಾರಿ ಬಸ್ಗಳನ್ನು ನಿಲ್ಲಿಸುತ್ತೇವೆ. ಖಾಸಗಿ ಬಸ್ಗಳನ್ನು ಓಡಿಸುತ್ತೇವೆ ಎಂದು ಹೇಳುವ ಮೂಲಕ ಸಾರಿಗೆ ಸಚಿವರು ಹೇಳುತ್ತಿದ್ದಾರೆ ಉಂಬತನವನ್ನು ಮೆರೆಯುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ನಮ್ಮ ಮುಷ್ಕರಿದಂದ ಸಾರ್ವಜನಿಕರಿಗೆ ತೊಂದರೆಯಾಗಬಹುದು ಆದರೆ ಇದು ನಮಗೆ ಅನಿವಾರ್ಯವಾಗಿದೆ. ಸರ್ಕಾರ ನಮಗೆ ನೀಡಬೇಕಾದ್ದನ್ನು ನೀಡಿದ್ದರೆ ನಾವು ಮುಷ್ಕರದ ಹಾದಿಯನ್ನು ಹಿಡಿಯುತ್ತಿರಲ್ಲಿ ಆದರೆ ಸರ್ಕಾರ ನಮ್ಮ ಮಾತಿಗೆ ಬೆಲೆಯನ್ನು ನೀಡದೆ ಉದ್ದಟತನ ಮಾಡುತ್ತದೆ ಇದರಿಂದ ಮುಷ್ಕರ ಅನಿವಾರ್ಯವಾಗಿದೆ ಎಂದರು.
ಪಂಚ ಗ್ಯಾರಂಟಿಗಳನ್ನು ನೀಡಿದ್ದೇವೆ ಎಂದು ಸಾಧನಾ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳುತ್ತಾ ಬಂದಿದ್ದಾರೆ. ಆದರೆ ಸಾರಿಗೆ ನೌಕರರ 38 ತಿಂಗಳ ಪರಿಷ್ಕರಣೆ ವೇತನ ಹಿಂಬಾಕಿಯನ್ನು ನೀಡಲು ಆಗುತ್ತಿಲ್ಲ ಏಕೆ ಎಂದು ಪ್ರಶ್ನಿಸಿದ ಅವರು ಸರ್ಕಾರ ಸಾರಿಗೆ ನೌಕರರಿಗೆ ಏನಾದರೂ ಮಾಡಿ ಸರ್ಕಾರದ ಯೋಜನೆಗಳನ್ನು ಜಾರಿ ಮಾಡಿ ಎಂದು ಹೇಳುತ್ತದೆ. ಆದರೆ ನೌಕರರ ಬೇಡಿಕೆಗಳನ್ನು ಮಾತ್ರ ಈಡೇರಿಸುವುದಿಲ್ಲ. ಆದ್ದರಿಂದ ಸಾರಿಗೆ ನೌಕರರ ಬೇಡಿಕೆ ಈಡೇರವರೆಗೂ ಆ. 05ರಿಂದ ಅನಿರ್ದಿಷ್ಟಾವಧಿ ಮುಷ್ಕರವನ್ನು ಕೈಗೊಂಡಿದ್ದೆವೆ ಎಂದು ತಿಳಿಸಿದರು.
ಆ. 5 ರಂದು ನಡೆಯುವ ಮುಷ್ಕರದಲ್ಲಿ ಕೆಎಸ್ಆರ್ಟಿಸಿ ಸ್ಟಾಪ್ ಅಂಡ್ ವರ್ಕರ್ಸ್ ಫೆಡರೇಶನ್, ಅಖಿಲ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಮಹಾಮಂಡಳಿ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಫೆಡರೇಶನ್, ಕೆಎಸ್ಆರ್ಟಿಸಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ನೌಕರರ ಸಂಘ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಅಧಿಕಾರಿಗಳ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘ ಹಾಗೂ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರ ಸಂಘಗಳು ಸೇರಿದಂತೆ ಇತರೆ ಸಂಘ ಸಂಸ್ಥೆಗಳು ಸಹ ಭಾಗವಹಿಸಲಿವೆ ಎಂದು ತಿಳಿಸಿದರು.
ಗೋಷ್ಟಿಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಚಿತ್ರದುರ್ಗ ವಿಭಾಗದ ಅಧ್ಯಕ್ಷರಾದ ಕಾಂತರಾಜ್,
ಕಾರ್ಯಾಧ್ಯಕ್ಷರಾದ ರಹೀಂಸಾಬ್, ಪ್ರಧಾನ ಕಾರ್ಯದರ್ಶಿಗಳಾದ ಟಿ.ಅಶೋಕ್, ಉಪಾಧ್ಯಕ್ಷರಾದ ಉಮೇಶ್, ಟಿ.ಅಜ್ಜಣ್ಣ, ಮೂರ್ತಿ ನಾಯ್ಕ್, ಸಂಘಟನಾ ಕಾರ್ಯದರ್ಶಿ ರಾಮಾಂಜನೇಯ, ನಿವೃತ್ತ ನೌಕರರ ಸಂಘದ ಅಧ್ಯಕ್ಷ ರಾಜಪ್ಪ, ಗೌರ ಅಧ್ಯಕ್ಷರಾದ ಎ.ಕೆ.ಮಹದೇವಪ್ಪ, ಎಸ್.ಎಸ್.ಟಿ. ನೌಕರರ ಸಂಘದ ಅಧ್ಯಕ್ಷರಾದ ಎನ್.ಪಿ.ರವಿ, ಗೊಲ್ಲಾಳಪ್ಪ ಗೌಡ ಹಾಗೂ ಉಮಾಪತಿ ಭಾಗವಹಿಸಿದ್ದರು.