“ಗಣಿಗಾರಿಕೆ ವಿರುದ್ಧ ಕ್ರಮ ಕೈಗೊಳ್ಳದ ಸಿಎಂ ಸಿದ್ದರಾಮಯ್ಯ ವಿರುದ್ದ ನಟ ಅಹಿಂಸಾ ಚೇತನ್ ಕಿಡಿ”

ಚಿತ್ರದುರ್ಗ ಸೆ. 17

ಪೋಟೋ ಮತ್ತು ವರದಿ ಸುರೇಶ್ ಪಟ್ಟಣ್


ಸಿದ್ದರಾಮಯ್ಯ ಅವರು ಶಪಥ ಮಾಡಿ ಬಳ್ಳಾರಿಗೆ ಪಾದಯಾತ್ರೆ ಮಾಡಿ ದೇಶದಲ್ಲಿ ಸಂಚಲನ ಸೃಷ್ಟಿಸಿ ಬಳಿಕ ರಾಜ್ಯದ ಸಿಎಂ ಆದರೂ. ಆದರೆ ಮುಖ್ಯಮಂತ್ರಿಯಾದ ಬಳಿಕ ಗಣಿ ಧಣಿಗಳ ವಿರುದ್ಧ ಕ್ರಮ ತೆಗೆದುಕೊಳ್ಳದೆ ಮೌನವಹಿಸಿದ್ದು ವಿಷಾದನೀಯ ಎಂದು ನಟ ಅಹಿಂಸಾ ಚೇತನ್ ಹೇಳಿದರು.


ನಗರದ ಪತ್ರಿಕಾ ಭವನದಲ್ಲಿ ಆಯೋಜಿಸಿದ್ದ ಕರ್ನಾಟಕ ರಾಜ್ಯ ಗಣಿಬಾಧಿತ ಹೋರಾಟ ಸಮಿತಿಯಿಂದ ಆಯೋಜಿಸಿದ್ದ ಗಣಿಬಾಧಿತ ಪ್ರದೇಶಗಳ ಜನರ ಸಂಕಷ್ಟಗಳು, ಪರಿಸರ ಅಸಮತೋಲನ ಮತ್ತು ಚಿತ್ರದುರ್ಗ ಜಿಲ್ಲೆ ಅಭಿವೃದ್ಧಿಯಲ್ಲಿ ಗಣಿಗಳ ಮಹತ್ವ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರಿಗೆ ಗಣಿಗಾರಿಕೆಗೆ ಏನೋ ಒಂದು ನಂಟಿದೆ. ಸಿಎಂ ಸಿದ್ದರಾಮಯ್ಯ ಸಿಂಗಲ್ ವಿಂಡೋ ಎಂದು ಘೋಷಣೆ ಮಾಡಿ ಈಗ ಗಣಿಗಾರಿಕೆ ಮಾಡುವವರಿಗೆ ಸಹಾಯ ಮಾಡಿದ್ದಾರೆ. ಆದರೆ ಸರ್ಕಾರ ಇದನ್ನು ಮತ್ತೊಮ್ಮೆ ಪರಿಶೀಲಿಸಬೇಕು. ಪದೇ ಪದೇ ತಪ್ಪು ಮಾಡಿ ಗಣಿಗಾರಿಕೆ ಮಾಡುತ್ತಿರುವವರಿಗೆ ಲೈಸೆನ್ಸ್ ಕೊಡಬಾರದು. ಪರಿಸರಕ್ಕೆ ಗಣಿಗಾರಿಕೆ ಅನ್ನೋದು ಅತ್ಯಂತ ಅಪಾಯಕಾರಿಯಾಗಿದೆ. ಕೊಡಗು, ಸಂಡೂರು, ಚಿತ್ರದುರ್ಗದಲ್ಲಿ ಗಣಿಗಾರಿಕೆಯಿಂದ ಹಲವು ಸಮಸ್ಯೆಗಳು ಆಗುತ್ತಿವೆ. ಗಣಿಗಾರಿಕೆ ಮಾಡುವವರಿಗೆ ಸರ್ಕಾರ ಸಹಾಯ ಮಾಡದೆ, ಜನರ ಸಮಸ್ಯೆಗಳಿಗೆ ಸ್ಪಂದಿಸುವ ಸರ್ಕಾರ ಬೇಕು. ಮುಂದಿನ ದಿನಗಳಲ್ಲಿ ಈ ಬಗ್ಗೆ ಸರ್ಕಾರದ ಮೇಲೆ ಒತ್ತಡ ಹಾಕುವ ಕೆಲಸ ಮಾಡುತ್ತೇವೆ ಎಂದು ಹೇಳಿದರು.


ಇನ್ನು ಸಿದ್ದರಾಮಯ್ಯ ಅವರು ಶಪಥ ಮಾಡಿ ಬಳ್ಳಾರಿಗೆ ಪಾದಯಾತ್ರೆ ಮಾಡಿ ದೇಶದಲ್ಲಿ ಸಂಚಲನ ಸೃಷ್ಟಿಸಿ ಬಳಿಕ ರಾಜ್ಯದ ಸಿಎಂ ಆದರೂ. ಆದರೆ ಮುಖ್ಯಮಂತ್ರಿಯಾದ ಬಳಿಕ ಗಣಿ ಧಣಿಗಳ ವಿರುದ್ಧ ಕ್ರಮ ತೆಗೆದುಕೊಳ್ಳದೆ ಮೌನವಹಿಸಿದ್ದು ವಿಷಾದನೀಯ ಎಂದ ಅವರು, 
ಚಿತ್ರದುರ್ಗದ ಕಾವಾಡಿಗರಹಟ್ಟಿ ದುರ್ಘಟನೆ ಬಗ್ಗೆ ಪ್ರಸ್ತಾಪ ಮಾಡಿ ಕಾವಡಿಗರಹಟ್ಟಿಯಲ್ಲಿ ಕಲುಷಿತ ನೀರು ಸಮಸ್ಯೆಯಿಂದಾಗಿ ನೂರಾರು ಮಂದಿ ಆಸ್ಪತ್ರೆ ಸೇರಿದ್ದರು, 6 ಮಂದಿ ಮೃತಪಟ್ಟಿದ್ದರು. ಅದು ಒಂದು ರೀತಿ ಪರಿಸರ ಸ್ವಚ್ಛತೆ ಇಲ್ಲದ ಕಾರಣದಿಂದ ಘಟನೆ ಸಂಭವಿಸಿತು ಎಂದು ನಟ ಅಹಿಂಸಾ ಚೇತನ್ ಹೇಳಿದರು.


ಸಂವಾದ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಗಣಿಬಾಧಿತ ಹೋರಾಟ ಸಮಿತಿಯ ಉಪಾಧ್ಯಕ್ಷ ಹಾಗೂ ಸದಸ್ಯರು ಇದ್ದರು.

Views: 9

Leave a Reply

Your email address will not be published. Required fields are marked *