ಕನ್ನಡದ ರಂಗಭೂಮಿ ಹಾಗೂ ಚಿತ್ರರಂಗಕ್ಕೆ ಒಂದು ದೊಡ್ಡ ಆಘಾತ ಎದುರಾಗಿದೆ. ರಾಜ್ಯದ ಹಿರಿಯ ರಂಗಭೂಮಿ ಕಲಾವಿದ ಯಶವಂತ ಸರದೇಶಪಾಂಡೆ ಅವರು ಇಂದು (ಸೆಪ್ಟೆಂಬರ್ 29) ಬೆಳಿಗ್ಗೆ ನಿಧನರಾಗಿದ್ದಾರೆ. ಅವರಿಗೆ 60 ವರ್ಷ ವಯಸ್ಸಾಗಿತ್ತು. ಅವರ ಸಾವು ಸಾಕಷ್ಟು ದುಃಖ ತಂದಿದೆ.
ಅವರಿಗೆ ತೀವ್ರ ಹೃದಯಾಘಾತ (Heart Attack) ಉಂಟಾಯಿತು ಎಂದು ತಿಳಿದು ಬಂದಿದೆ.
ಯಶವಂತ ಸರದೇಶಪಾಂಡೆ ಅವರಿಗೆ ಬೆಳಿಗ್ಗೆ 10 ಗಂಟೆ ಸುಮಾರಿಗೆ ತೀವ್ರ ಹೃದಯಾಘಾತ ಉಂಟಾಯಿತು. ಅವರನ್ನು ಫೋರ್ಟಿಸ್ ಆಸ್ಪತ್ರೆ ದಾಖಲು ಮಾಡಲಾಯಿತು. ಆದರೆ, ಯಾವುದೇ ಪ್ರಯೋಜನ ಉಂಟಾಗಿಲ್ಲ. ಅವರ ಸಾವಿಗೆ ಅನೇಕರು ಸಂತಾಪ ಸೂಚಿಸುತ್ತಿದ್ದಾರೆ.
ಈ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸೋಶಿಯಲ್ ಮೀಡಿಯಾ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. ‘ಖ್ಯಾತ ಕನ್ನಡ ರಂಗಭೂಮಿ ನಟ, ರಾಜ್ಯಾದ್ಯಂತ ಅನೇಕ ನಾಟಕಗಳಲ್ಲಿ ನಟಿಸಿ-ನಿರ್ದೇಶಿಸಿ ಅತ್ಯಂತ ಜನಪ್ರೀಯ ನಾಟಕಕಾರರಾಗಿದ್ದ ನಮ್ಮ ಹುಬ್ಬಳ್ಳಿಯ ಯಶವಂತ ಸರದೇಶಪಾಂಡೆ ಅವರು ಇಂದು ಬೆಳಿಗ್ಗೆ ನಿಧನರಾದ ವಿಷಯ ತಿಳಿದು ಅತ್ಯಂತ ದುಃಖವಾಗಿದೆ. ಅವರ ಆಲ್ ದಿ ಬೆಸ್ಟ್ ನಾಟಕ ಅಭೂತಪೂರ್ವ ಯಶಸ್ಸು ಕಂಡಿತು. ಕಿರುತೆರೆ ಮತ್ತು ಚಲನಚಿತ್ರಗಳಲ್ಲಿಯೂ ಇವರು ಪಾತ್ರವಹಿಸುತ್ತಿದ್ದರು’ ಎಂದು ಅವರು ಬರೆದುಕೊಂಡಿದ್ದಾರೆ.
ಪ್ರಲ್ಹಾದ್ ಜೋಶಿ ಪೋಸ್ಟ್
https://www.facebook.com/share/1Pop3HZGEt
ಯಶವಂತ ಅವರು ನಾಟಕಗಳನ್ನು ನಿರ್ದೇಶಿಸಿ, ಅವುಗಳಲ್ಲಿ ನಟಿಸಿ ಜನಪ್ರಿಯತೆ ಪಡೆದುಕೊಂಡಿದ್ದರು. ಅವರು ಮುಖ್ಯವಾಗಿ ಹಾಸ್ಯ ನಾಟಕಗಳಲ್ಲಿ ನಟಿಸುತ್ತಿದ್ದರು. ಕರ್ನಾಟಕ ಮಾತ್ರವಲ್ಲದೆ, ದೇಶ-ವಿದೇಶಗಳಲ್ಲಿಯೂ ನಾಟಕಗಳನ್ನು ಮಾಡಿದ್ದರು. ಅವರಿಗೆ ಅಪಾರ ಅಭಿಮಾನಿಗಳು ಇದ್ದಾರೆ. ಯಶವಂತ ಅವರು ನಾಟಕಗಳಲ್ಲಿ ಮಾತ್ರವಲ್ಲದೆ ಹಲವು ಸಿನಿಮಾ ಹಾಗೂ ಧಾರಾವಾಹಿಗಳಲ್ಲೂ ನಟಿಸಿದ್ದರು. ಅಲ್ಲಿಯೂ ಹಾಸ್ಯ ಪಾತ್ರಗಳ ಮೂಲಕವೇ ಗುರುತಿಸಿಕೊಂಡಿದ್ದರು. ‘ಆಲ್ ದಿ ಬೆಸ್ಟ್’ ನಾಟಕ ಅಭೂತಪೂರ್ವ ಯಶಸ್ಸು ಕಂಡಿತ್ತು.’ರಾಮ ಶ್ಯಾಮ ಭಾಮಾ’ ಸಿನಿಮಾದಲ್ಲಿ ನಟಿಸಿ ಅವರು ಗಮನ ಸೆಳೆದಿದ್ದರು.
ಸೆಪ್ಟೆಂಬರ್ 22ರಂದು ಲಿಂಗರಾಜ ನಗರ ದಸರಾ ಉದ್ಘಾಟನೆಗೆ ಯಶವಂತ ಅವರು ತೆರಳಿದ್ದರು. ಖುಷಿ ಖುಷಿಯಿಂದ ಅವರು ದಸರಾ ಉದ್ಘಾಟನೆ ಮಾಡಿ ಬಂದಿದ್ದರು. ಈ ಬಗ್ಗೆ ಸೋಶಿಯಲ್ ಮೀಡಿಯಾ ಮೂಲಕವೂ ಅವರು ಮಾಹಿತಿ ಹಂಚಿಕೊಂಡಿದ್ದರು. ಆದರೆ, ವಿಧಿ ಅವರ ಬಾಳಲ್ಲಿ ಚೆಲ್ಲಾಟ ಆಡಿದೆ.
Views: 17