ಡಿ.ಎಸ್.ಹಳ್ಳಿಯಲ್ಲಿ ಸ್ವಸ್ಥ ನಾರಿ ಸಶಕ್ತ ಪರಿವಾರ ಕಾರ್ಯಕ್ರಮ:
ದೊಡ್ಡಸಿದ್ದವ್ವನಹಳ್ಳಿ: ಸೆ.30
ಮಹಿಳೆಯರು ತಮ್ಮ ಆರೋಗ್ಯವನ್ನು ಬಲಪಡಿಸಿಕೊಂಡಾಗ ಮಾತ್ರ ಕುಟುಂಬ ಮತ್ತು ಸಮಾಜ ಅಭಿವೃದ್ಧಿ ಸಾಧ್ಯ ಎಂದು ಡಾ|| ವಿಜಯಲಕ್ಷ್ಮೀ ಪಿ. ಅಭಿಪ್ರಾಯ ಪಟ್ಟಿದ್ದಾರೆ.

ಕೇಂದ್ರ ಸರ್ಕಾರದ ಮಹಾತ್ವಕಾಂಕ್ಷೆಯ ‘ ಸ್ವಸ್ಥ ನಾರಿ ಸಶಕ್ತ ಪರಿವಾರ್’ ಯೋಜನೆಯ ಅಡಿಯಲ್ಲಿ ಜಿಲ್ಲಾ ಪಂಚಾಯತಿ ಚಿತ್ರದುರ್ಗ, ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ ದೊಡ್ಡಸಿದ್ಧವ್ವನಹಳ್ಳಿ, ಮತ್ತು ಸರ್ಕಾರಿ ಆಯುಷ್ಮಾನ್ ಆರೋಗ್ಯ( ಆಯುಷ್) ಮಂದಿರ ಜೆ ಎನ್ ಕೋಟೆ ಸಹಯೋಗದಲ್ಲಿ ದಿನಾಂಕ 30/9/2025ರ ಮಂಗಳವಾರ ಡಿ.ಎಸ್.ಹಳ್ಳಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಅಂಗನವಾಡಿ ಕೇಂದ್ರದ ಆವರಣದಲ್ಲಿ ಆಯೋಜಿಸಲಾಗಿದ್ದ ಮಹಿಳಾ ಆರೋಗ್ಯ ಜಾಗೃತಿ ಕಾರ್ಯಕ್ರಮ ಉದ್ಧೇಶಿಸಿ ಅವರು ಮಾತನಾಡುತ್ತಾ ಸ್ವಸ್ಥ ನಾರಿ ಸಶಕ್ತ ಪರಿವಾರ್ ಯೋಜನೆ ಕೇಂದ್ರ ಸರ್ಕಾರದ ಹೊಸ ಮಹತ್ವಾಕಾಂಕ್ಷಿ ಆರೋಗ್ಯ ಮತ್ತು ಪೋಷಣಾ ಅಭಿಯಾನವಾಗಿದ್ದು. ಈ ಅಭಿಯಾನವನ್ನು 2025ರ ಸೆಪ್ಟೆಂಬರ್ 17ರಿಂದ ಅಕ್ಟೋಬರ್ 2ರ ವರೆಗೆ ದೇಶದೆಲ್ಲೆಡೆ ನಡೆಸಲಾಗುತ್ತಿದೆ ಮಹಿಳೆಯರು ಈ ಯೋಜನೆಯನ್ನು ಸದುಪಯೋಗ ಪಡಿಸಿಕೊಂಡು ಯಶಸ್ಸುಗೊಳಿಸಬೇಕಾಗಿದೆ ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಶ್ರೀಧರ್ ಮಹಿಳೆಯರು ತಮ್ಮ ಆರೋಗ್ಯ ಕಾಪಾಡಿಕೊಳ್ಳಲು ಕಾಲಕ್ಕೆ ತಕ್ಕಂತೆ ದೇಹದ ರಕ್ತದೊತ್ತಡ, ದೇಹದ ತೂಕ, ಹಿಮೋಗ್ಲೋಬಿನ್, ಪೋಷಣಾ ಸ್ಥಿತಿ, ಮಾನಸಿಕ ಆರೋಗ್ಯ ಇತ್ಯಾದಿಗಳನ್ನು ಆಗಾಗ ತಪಾಸಣೆ ಮಾಡಿಸಿಕೊಳ್ಳಬೇಕು ಕೇಂದ್ರ ಸರ್ಕಾರದ ಮಹಾತ್ವಕಾಂಕ್ಷೆಯ ಸ್ವಸ್ಥ ನಾರಿ ಸಶಕ್ತ ಪರಿವಾರ ಯೋಜನೆಯಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ನೀಡಲಾಗುತ್ತದೆ ಮಹಿಳೆಯರು ಇದರ ಸೂಕ್ತ ಲಾಭವನ್ನು ಪಡೆಯಬೇಕು ಎಂದು ತಿಳಿಸಿದರು.
ದೊಡ್ಡಸಿದ್ದವ್ವನಹಳ್ಳಿ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ|| ಸೈಯದ್ ನಾಜಿಯಾ ಸಮೈಲ್ ಅಧ್ಯಕ್ಷತೆ ವಹಿಸಿದ್ದ ಈ ಕಾರ್ಯಕ್ರಮದಲ್ಲಿ ಡಿ.ಎಸ್ ಹಳ್ಳಿ ಆರೋಗ್ಯ ನಿರೀಕ್ಷಣಾಧಿಕಾರಿ , ಯೋಗ ತರಬೇತುದಾರ ರವಿ ಕೆ.ಅಂಬೇಕರ್, ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿ ಕುಮಾರಿ ಅನಿತಾ, ಗ್ರಾಮದ ಮುಖಂಡ ರುದ್ರಮುನಿ, ಅಂಗನವಾಡಿ ಕಾರ್ಯಕರ್ತೆ ರಾಜೇಶ್ವರಿ ಇನ್ನಿತರರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಆಯುಷ್ ಇಲಾಖೆಯ ಜೆ ಎನ್ ಕೋಟೆ ಆಯುರ್ವೇದ ಕೇಂದ್ರದ ವತಿಯಿಂದ ಗ್ರಾಮಸ್ಥರಿಗೆ ಆರೋಗ್ಯ ಅಭಿವೃದ್ಧಿಗೊಳಿಸುವ ಚ್ಯವನಪ್ರಾಶ್ ಸೇರಿದಂತೆ ಇನ್ನಿತರ ಔಷಧಿಗಳನ್ನು ಉಚಿತವಾಗಿ ವಿತರಿಸಲಾಯಿತು.
Views: 53