ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ಚಿತ್ರದುರ್ಗ ಅ. 16 : ಟೆಕ್ ಕ್ಷೇತ್ರದಲ್ಲಿ ಈಗಾಗಲೇ ಗಮನಾರ್ಹ ಪ್ರಗತಿ ಸಾಧಿಸುತ್ತಿರುವ ಕರ್ನಾಟಕಕ್ಕೆ ಎಐ ಹಬ್ ಯೋಜನೆ ಕೈ ತಪ್ಪಲು ರಾಜ್ಯ ಕಾಂಗ್ರೆಸ್ ಸರ್ಕಾರದ ಅಭಿವೃದ್ಧಿ ನಿರ್ಲಕ್ಷ್ಯತೆಯೇ ಕಾರಣ ಎಂದು ಜಿಲ್ಲಾ ಬಿಜೆಪಿ ಟೀಕಿಸಿದೆ.
ಈ ಬಗ್ಗೆ ಹೇಳಿಕೆಯನ್ನು ನೀಡಿರುವ ಜಿಲ್ಲಾ ಬಿಜೆಪಿ ವಕ್ತಾರ ನಾಗರಾಜ್ ಬೇದ್ರೇ ಭಾರತದ ಮೊದಲ ಎಐ- ಹಬ್‍ಗಾಗಿ ಗೂಗಲ್ ಬರೋಬರಿ 15 ಶತ ಕೋಟಿ ಡಾಲರ್ ಹೂಡಿಕೆ ಮಾಡಲಿದ್ದು, ಈ ಬೃಹತ್ ಯೋಜನೆಯನ್ನು ತನ್ನದಾಗಿಸಿಕೊಳ್ಳುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಈ ಯೋಜನೆ ಆಂಧ್ರಪ್ರದೇಶದ ಪಾಲಾಗಿದೆ. ಅಧಿಕಾರದ ಕಿತ್ತಾಟ, ಆರ್‍ಎಸ್‍ಎಸ್ ನಿಷೇದಂತಹ ಜನ ವಿರೋಧಿ ನಿಲುವುಗಳನ್ನು ಮಾಡುತ್ತಾ ಕಾಲಹರಣ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಆಗಬೇಕಾಗಿರುವ ಅಭಿವೃದ್ಧಿ ಕೆಲಸಗಳನ್ನು ಸಂಪೂರ್ಣವಾಗಿ ಕಡೆಗಣಿಸಿದೆ. ಈ ಮೂಲಕ ರಾಜ್ಯವನ್ನು ಅಧೋಗತಿಗೆ ತಳ್ಳುತ್ತಿದೆ ಎಂದು ದೂರಿದರು.
ಅಧಿಕಾರ ಹಿಡಿಯಲು ಗ್ಯಾರಂಟಿ ಯೋಜನೆಗಳ ಮೂಲಕ ಜನರನ್ನು ಮರುಳು ಮಾಡುತ್ತಾ ಸರ್ಕಾರವಾಗಿ ಮಾಡಬೇಕಾದ ಪ್ರಗತಿಪರ ಕೆಲಸಗಳ ಬಗ್ಗೆ ಚಿಂತನೆ ಮಾಡದಿರುವುದು ರಾಜ್ಯದ ಜನರ ದುರಂತ. ಕೃತಕ ಬುದ್ಧಿಮತ್ತೆಯ ಉದ್ಯಮವನ್ನು ರಾಜ್ಯದಲ್ಲಿ ಸ್ಥಾಪನೆ ಮಾಡಿದ್ದರೆ ಸಾವಿರಾರು ಜನರಿಗೆ ಉದ್ಯೋಗಾವಕಾಶ ದೊರೆಯುತ್ತಿತ್ತು. ಉದ್ದಿಮೆ ಮೂಲಕ ರಾಜ್ಯದ ಅಭಿವೃದ್ಧಿಗೂ ಅನುಕೂಲವಾಗುತ್ತಿತ್ತು. ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರಕ್ಕೆ ಜನಪರವಾದ. ಅಭಿವೃದ್ಧಿಪರವಾದ ಯಾವುದೇ ಚಿಂತನೆಗಳಿಲ್ಲ ಎಂದು ನಾಗರಾಜ್ ಬೇದ್ರೇ ಟೀಕಿಸಿದ್ದಾರೆ.
ಈ ಹಿಂದೆಯೂ ಸಹಾ ರಾಜ್ಯಕ್ಕೆ ಅನೇಕ ಕಂಪನಿಗಳು ಬಂದಿದ್ದರೂ ಸಹಾ ಆವರಿಗೆ ಸಮರ್ಪಕವಾಗಿ ಜಾಗ ಸೇರಿದಂತೆ ಇತರೆ ಮೂಲಭೂತ ಸೌಲಭ್ಯಗಳನ್ನು ನೀಡಿದೆ ಇದ್ದ ಕಾರಣ ಅವುಗಳು ಇತರೆ ರಾಜ್ಯಗಳಿಗೆ ಹೋಗಿದ್ದಾರೆ ಇವರಿಂದ ರಾಜ್ಯದ ಯುವ ಜನತೆಗೆ ಉದ್ಯೋಗಾವಕಾಶ ದೊರೆಯುವಲ್ಲಿ ಹಿನ್ನಡೆಯಾಗಿದೆ, ರಾಜ್ಯ ಸರ್ಕಾರದಿಂದ ಯಾವುದೇ ಕೈಗಾರಿಕೆಗಳನ್ನು ಸ್ಥಾಪನೆ ಮಾಡುವಲ್ಲಿ ಅರ್ಥಿಕವಾಗಿ ಸಬಲವಾಗಿಲ್ಲ ಈ ಹಿನ್ನಲೆಯಲ್ಲಿ ವಿದೇಶಿ ಕಡೆಗಳಿಂದ ಬಂದಂತಹ ಕಂಪನಿಗಳನ್ನು ಸಹಾ ಉಳಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ದೂರಿದ್ದಾರೆ.
Views: 35