ಎಲ್ಲ ಪಕ್ಷಗಳ ಪ್ರತಿನಿಧಿಗಳು ಭಾಗವಹಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಹಿರಿಯ ಕಾಂಗ್ರೆಸ್ ನಾಯಕ ಅಶೋಕ್ ಗೆಹ್ಲೋಟ್ ಈ ಘೋಷಣೆ ಮಾಡಿದರು.
ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆಗೆ ಆರ್‌ಜೆಡಿ ನಾಯಕ ಮತ್ತು ಮಾಜಿ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ವಿರೋಧ ಪಕ್ಷಗಳ ಇಂಡಿಯಾ ಬಣ ಗುರುವಾರ ಘೋಷಿಸಿದೆ.
ಎಲ್ಲ ಪಕ್ಷಗಳ ಪ್ರತಿನಿಧಿಗಳು ಭಾಗವಹಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಹಿರಿಯ ಕಾಂಗ್ರೆಸ್ ನಾಯಕ ಅಶೋಕ್ ಗೆಹ್ಲೋಟ್ ಈ ಘೋಷಣೆ ಮಾಡಿದರು. ಈ ನಿರ್ಧಾರವನ್ನು ತಮ್ಮ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬೆಂಬಲಿಸಿದ್ದಾರೆ ಎಂದು ಪ್ರತಿಪಾದಿಸಿದರು.
ಇಂಡಿಯಾ ಬಣವು ಬಿಹಾರದಲ್ಲಿ ಸರ್ಕಾರ ರಚಿಸಿದರೆ, ವಿಕಾಸಶೀಲ್ ಇನ್ಸಾನ್ ಪಕ್ಷದ (ವಿಐಪಿ) ಮುಖ್ಯಸ್ಥ ಮುಖೇಶ್ ಸಾಹ್ನಿ ಉಪಮುಖ್ಯಮಂತ್ರಿಗಳಲ್ಲಿ ಒಬ್ಬರಾಗುತ್ತಾರೆ ಮತ್ತು ಅದೇ ಹುದ್ದೆಯನ್ನು ಹಿಂದುಳಿದ ವರ್ಗಗಳ ಮತ್ತೊಬ್ಬ ನಾಯಕ ಅಲಂಕರಿಸುತ್ತಾರೆ ಎಂದು ಗೆಹ್ಲೋಟ್ ಹೇಳಿದರು.
Views: 17