ಚಿತ್ರದುರ್ಗ ಅ.30
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ಚಿತ್ರದುರ್ಗ ಬ್ಲಾಕ್ ಕಾಂಗ್ರೆಸ್ ಸಮಿತಿಯ ಗ್ರಾಮಾಂತರ ಉಪಾಧ್ಯಕ್ಷರಾಗಿ ಚಿತ್ರದುರ್ಗ ತಾಲ್ಲೂಕಿನ ಚಿಕ್ಕಪುರ ಅಂಚೆಯ ನೀಲಯ್ಯನಹಟ್ಟಿ ಗ್ರಾಮದ ಟಿ.ಆಲಿಜಾನ್ ರವರನ್ನು ನೇಮಕ ಮಾಡಿ ಚಿತ್ರದುರ್ಗ ತಾಲ್ಲೂಕು ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಆರ್.ಪ್ರಕಾಶ್ ಇಂದು ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಆದೇಶ ಪತ್ರವನ್ನು ವಿತರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅಧ್ಯಕ್ಷ ಪ್ರಕಾಶ್ ಮುಂದಿನ ದಿನಮಾನದಲ್ಲಿ ವಿವಿಧ ರೀತಿಯ ಚುನಾವಣೆಗಳು ಬರುತ್ತವೆ ಇದರಿಂದ ಪಕ್ಷವನ್ನು ಸಂಘಟನೆ ಮಾಡಬೇಕಿದೆ, ಬರೀ ಆದೇಶ ಪತ್ರವನ್ನು ಮನೆಯಲ್ಲಿ ಇಟ್ಟು ಸುಮ್ಮನಾಗದೆ ತಮ್ಮ ವ್ಯಾಪ್ತಿಯ ಪ್ರದೇಶದಲ್ಲಿ ಸಂಚಾರ ಮಾಡುವುದರ ಮೂಲಕ ಪಕ್ಷವನ್ನು ಸಂಘಟನೆಯನ್ನು ಮಾಡಿ, ಪಕ್ಷಕ್ಕೆ ನಿಷ್ಠೆ, ಪ್ರಮಾಣಿಕತೆಯಿಂದ ಸೇವೆಯನ್ನು ಸಲ್ಲಿಸಿ ಭಾರತ ರಾಷ್ಟ್ರೀಯ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಮಲ್ಲಿಕಾರ್ಜನ ಖರ್ಗೆಯವರ ಕೈಯನ್ನು ಬಲ ಪಡಿಸಬೇಕಿದೆ ಪಕ್ಷ ನೀತಿ ನಿಯಮಗಳಿಗೆ ಬದ್ದರಾಗಿ ನಡೆಯುವಂತೆ ತಿಳಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸಂಪತ್ ಕುಮಾರ್, ಮಧುಗೌಡ, ಪೈಲೆಟ್ ಸೇರಿದಂತೆ ಇತರರು ಉಪಸ್ಥಿತರಿದ್ದರು
Views: 33