ಚಿತ್ರದುರ್ಗದಲ್ಲಿ ಕಾಂಗ್ರೆಸ್‌ ‘ವೋಟ್‌ ಚೌರಿ’ ವಿರುದ್ಧ ಜಾಗೃತಿ ಅಭಿಯಾನ ಆರಂಭ – ಮತಗಳ್ಳತನ ನಿಲ್ಲಿಸುವ ಕೋರಿಕೆ.

ಚಿತ್ರದುರ್ಗ ನ. 02

ಪೋಟೋ ಮತ್ತು ವರದಿ ಸುರೇಶ್ ಪಟ್ಟಣ್


ಬಿಜೆಪಿ ಸೇರಿದಂತೆ ಕೋಮುವಾದಿ ಪಕ್ಷಗಳು ದೇಶದಲ್ಲಿ ಸರ್ವಾಧಿಕಾರಿ ಆಯೋಗ ಅಧಿಕಾರಕ್ಕೋಸ್ಕರ ಆಯೋಗದ ಮೂಲಕ ನಡೆಸುತ್ತಿರುವ ಮತಗಳ್ಳತನ ನಿಲ್ಲಬೇಕು. ಚುನಾವಣಾ ನಿಷ್ಪಕ್ಷಪಾತವಾಗಿ ಚುನಾವಣೆಗಳನ್ನು ಉದ್ದೇಶದಿಂದ ಮೂಡಿಸಲು ಪಾರದರ್ಶಕವಾಗಿ ನಡೆಸಬೇಕೆಂಬ ಜನಜಾಗೃತಿಯನ್ನು ಕಾಂಗ್ರೆಸ್ ದೇಶದಾದ್ಯಂತ ಕಳುವಿನ (ಚೌರಿ) ವಿರುದ್ಧ ಚಳುವಳಿ ಮಾದರಿಯಲ್ಲಿ ಅಭಿಯಾನವನ್ನು ನಡೆಸುತ್ತಿದೆ ಎಂದು ನಗರಾಭೀವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷರು ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಆರ್.ಕೆ.ಸರ್ದಾರ್ ತಿಳಿಸಿದರು.


ಚಿತ್ರದುರ್ಗ ನಗರದ ಕಾಂಗ್ರೆಸ್ ಕಚೇರಿಯಲ್ಲಿ ಭಾನುವಾರ ಜಿಲ್ಲಾ ಕಾಂಗ್ರೆಸ್ ಸಮಿತಿ ಹಾಗೂ ಬ್ಲಾಕ್ ಕಾಂಗ್ರೆಸ್ ಸಮಿತಿ ಆಯೋಜಿಸಿದ್ದ ವೋಟ್ ಚೌರಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ, ಅವರು ಮತಗಳವು ಮುಂದುವರೆದಲ್ಲಿ ಪ್ರಜಾಪ್ರಭುತ್ವ ಇರಲ್ಲ-ಎಂಬುದನ್ನು ಮನವರಿಕೆ ಮಾಡಿಕೊಟ್ಟು, ಸಾರ್ವತ್ರಿಕ ಚುನಾವಣೆಗಳಲ್ಲಿ ಪ್ರಜಾಪ್ರಭುತ್ವ ಗೆಲ್ಲಬೇಕು.

ಅಳ್ವಿಕೆ ನಡೆಸಬೇಕು ಎಂಬ ಸಂದೇಶವನ್ನು ರಾಷ್ಟ್ರದಾದ್ಯಂತ ನೀಡಲಿಕ್ಕೆ ಕಾಂಗ್ರೆಸ್ ಜನಂದೋಲವನ್ನು ಆರಂಭಿಸಿದೆ ಎಂದ ಅವರು. ಮತಗಳ್ಳತನದ ಮೂಲಕ ಜನಾದೇಶ ಕಗೊಲೆಯಾಗುತ್ತಿದೆ. ಇಂತಹ ಕೃತ್ಯದ ವಿರುದ್ಧ ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರು ಜನಜಾಗೃತಿಯ ಚಳುವಳಿ ನಡೆಸುತ್ತಿದ್ದಾರೆ. ಸಾಂವಿಧಾನಿಕ ಸ್ವಾಯತ್ತ ಸಂಸ್ಥೆಯಾಗಿರುವ ಚುನಾವಣಾ ಆಯೋಗವನ್ನು ಪ್ರತಿಯೊಬ್ಬ ಮತದಾರರು ತಮ್ಮ ಮತದ ಹಕ್ಕನ್ನು ಕದಿಯಲು, ಕಸಿಯಲು ಅವಕಾಶ ನೀಡದಂತೆ ಎಚ್ಚರಿಸಬೇಕು ಎಂದರು. 


ಜನತೆಯಲ್ಲಿ ಜಾಗೃತಿ ಮೂಡಿಸಲು ಮತದಾರರ ಹಕ್ಕುಗಳಿಗಾಗಿ ಕಾಂಗ್ರೆಸ್ ಮುಂದಾಗಿದೆ ಧೋರಣೆಯುಳ್ಳವರ ಕೈಗೆ ಅಧಿಕಾರ ಕೊಟ್ಟರೆ ಜನರ ಹಕ್ಕು ಮತ್ತು ವಾಕ್ ಸ್ವಾತಂತ್ರ್ಯದ ಹರಣವಾಗುತ್ತದೆ ವಿಪಕ್ಷಗಳನ್ನು ಬೆಂಬಲಿಸುವ ಮತದಾರರನ್ನು ಪಕ್ಷವಾಗಿ ಬಿಜೆಪಿ ಮತಧಾರರ ಪಟ್ಟಿಯಿಂದಲೇ ಕಿತ್ತೆಸೆದು ಮತದಾರರಲ್ಲಿ ಗೊಂದಲ ಸೃಷ್ಟಿಸಲಾಗುತ್ತಿದೆ. ಉತ್ತರ ಪ್ರದೇಶ, ಮಧ್ಯ ಪ್ರದೇಶ ಹಾಗೂ ಬಿಹಾರ ರಾಜ್ಯಗಳಲ್ಲಿ ಓಟ್ ಚೌರಿ ಆಗಿರುವುದನ್ನು ಖಚಿತ ಪಡಿಸಿಕೊಂಡು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಜೀವನದ ಹಂಗನ್ನು ತೊರೆದು ಹೋರಾಟವನ್ನು ನಡೆಸುತ್ತಿದ್ದಾರೆ. ಚುನಾವಣೆ ವೇಳೆ ಸುಳಿವು ಕೊಟ್ಟ ಕೂಡಲೇ ದಾಳಿ ಮಾಡುವ ಚುನಾವಣಾ ಆಯೋಗ ಮತಗಳವು ಬಗ್ಗೆ ರಾಹುಲ್ ಗಾಂಧಿ ಅವರನ್ನು ದಾಖಲೆ ಕೇಳುತ್ತಿದೆ. ಚುನಾವಣೆ ಅಕ್ರಮ, ಮತಗಳವು ತಡೆಗಟ್ಟಬೇಕಾದದ್ದು ಆಯೋಗದ ಸಂವಿಧಾನಿಕವಾದ ಕರ್ತವ್ಯ ಜವಾಬ್ದಾರಿಯಾಗಿದೆ ಆಯೋಗ ಎಂಬುದನ್ನು ಅರಿಯಬೇಕೆಂದು ಎಂದರು. 


ಕಾಂಗ್ರೆಸ್ ಜಿಲ್ಲಾಧ್ಯಕ್ಷ ತಾಜ್‍ಪೀರ್  ಮಾತನಾಡಿ, ಎಐಸಿಸಿ ದೇಶದಾದ್ಯಂತ ಆಯೋಚಿಸಿರುವ ಹಕ್ಕುಗಳಿಗಾಗಿ ಸಹಿ ಸಂಗ್ರಹಣೆ ಮಾಡಲಾಗುತ್ತಿದೆ. ಕೇಂದ್ರ ಸರ್ಕಾರ ಮತಗಳ್ಳತನ ನಿಲ್ಲಿಸಿ. ವೋಟ್ ಚೌಲ ವಿರುದ್ಧದ ಅಭಿಯಾನದಲ್ಲಿ ಮತದಾರರ ಜನಾದೇಶ ಕಗ್ಗೋಲೆ ಆಗುವುದನ್ನು ತಪ್ಪಿಸಲು ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಅದಕ್ಕಾಗಿ ಪ್ರತಿಯೊಂದು ವಿಧಾನಸಭಾ ಕ್ಷೇತ್ರದಲ್ಲಿ 20 ಸಾವಿರ ಸಹಿಗಳನ್ನು ಪಡೆಯಲಾಗುತ್ತಿದೆ. ಅಭಿಯಾನವನ್ನು ಯಶಸ್ವಿಗೊಳಿಸಲು ಪಕ್ಷದ ಕಾರ್ಯಕರ್ತರು ಸೇರಿದಂತೆ ಮುಖಂಡರು ಹಾಗೂ ನಾಯಕರು ಚುರುಕಿನಿಂದ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ತಿಳಿಸಿದರು. 


ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರೆಂಟಿ ಅನುಷ್ಠಾನದ ಜಿಲ್ಲಾಧ್ಯಕ್ಷರಾದ ಶಿವಣ್ಣ ಗಂಜಿಗಟ್ಟೆ, ಪ್ರಧಾನ ಕಾರ್ಯದರ್ಶಿಗಳಾದ ಸಂಪತ್ ಕುಮಾರ್ ಮೈಲಾರಪ್ಪ, ಚಿತ್ರದುರ್ಗ ತಾಲ್ಲೂಕು ಗ್ಯಾರೆಂಟಿ ಪ್ರಾಧಿಕಾರದ ಅಧ್ಯಕ್ಷರಾದ ಪ್ರಕಾಶ್, ಓಬಿಸಿ ಅಧ್ಯಕ್ಷ ಎನ್.ಡಿ.ಕುಮಾರ್, ಲಕ್ಷ್ಮೀಕಾಂತ್, ಚೋಟು ಸೇರಿದಂತೆ ಇತರರು ಭಾಗವಹಿಸಿದ್ದರು.

Views: 30

Leave a Reply

Your email address will not be published. Required fields are marked *