‘ನಿಷೇಧಿತ ಪದ ಬಳಕೆ’ ಆರೋಪ: ಕಾಂಗ್ರೆಸ್ ನ ಎನ್.ಡಿ.ಕುಮಾರ್ ನೇತೃತ್ವದಲ್ಲಿ ಸಿ.ಟಿ.ರವಿ ವಿರುದ್ಧ ದೂರು.

ಚಿತ್ರದುರ್ಗ ನ. 04

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817

ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ವಿರುದ್ಧ ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರಾದ ಎನ್.ಡಿ.ಕುಮಾರ್ ನೇತೃತ್ವದಲ್ಲಿ ಚಿತ್ರದುರ್ಗ ನಗರಠಾಣೆಯಲ್ಲಿ ದೂರನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಅಧ್ಯಕ್ಷ ಎನ್.ಡಿ,ಕುಮಾರ್ ವಿಧಾನ ಪರಿಷತ್ ಸಿ.ಟಿ.ರವಿ ಅವರು ಕಾರ್ಯ ನಿಮಿತ್ತ ಅ. 27ರಂದು ಚಿಕ್ಕಮಗಳೂರು ಗ್ರಾಮಾಂತರದಲ್ಲಿನ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಭೇಟಿ ನೀಡಿದ್ದು, ಅಲ್ಲಿನ ಅಧಿಕಾರಿಗಳನ್ನು ವಿಚಾರಿಸುವ ಮೊಬೈಲ್‍ನಲ್ಲಿ ಮಾತನಾಡುವ ಸಂದರ್ಭದಲ್ಲಿ ಸವಿತ ಸಮಾಜದ ನಿಷೇಧಿತ ಪದ(ಹಜಾಮ)ವನ್ನು ಬಳಸಿದ್ದಾರೆ.

ಈ ರೀತಿ ಅಸಂವಿಧಾನಿಕ ಪದಗಳನ್ನು ಬಳಸಿ ನಮ್ಮ ಜಾತಿಯ ವೃತ್ತಿ ಧರ್ಮಕ್ಕೆ ಅವಮಾನ ಮಾಡಿ ನಮ್ಮ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಿರುತ್ತಾರೆ ಇದರಿಂದ ಕರ್ನಾಟಕ ರಾಜ್ಯ ಸವಿತಾ ಸಮಾಜಕ್ಕೆ ತೀವ್ರ ನೋವುಂಟಾಗಿದೆ ಆದ್ದರಿಂದ ಅವರು ಬಹಿರಂಗವಾಗಿ ಕ್ಷಮೆಯಾಚಿಸಬೇಕು ಹಾಗೂ ಕಾನೂನಿನಡಿ ಅವರಿಗೆ ಶಿಕ್ಷೆ ಆಗಬೇಕು ಎಂದು ಆಗ್ರಹಿಸಿದರು.

Leave a Reply

Your email address will not be published. Required fields are marked *