ಚಿತ್ರದುರ್ಗ ನ. 05
ವರದಿ ಮತ್ತು ಪೋಟೋ ಸುರೇಶ್ ಪಟ್ಟಣ್
ಎಸ್.ಎಸ್,ಎಲ್.ಸಿಯಲ್ಲಿ ಉತ್ತಮವಾದ ಅಂಕಗಳನ್ನು ಪಡೆಯಬೇಕಾದರೆ ಹಿಂದಿನ ತರಗತಿಯಲ್ಲಿಯೇ ಸಾಧನೆಯನ್ನು ಮಾಡುವುದರ ಮೂಲಕ ಎಸ್.ಎಸ್.ಎಲ್.ಸಿ.ಯಲ್ಲಿ 625ಕ್ಕ 625 ಅಂಕಗಳನ್ನು ಗಳಿಸಲು ಸಾಧ್ಯವಿದೆ ಈ ಬಾರಿಯ ಎಸ್.ಎಸ್.ಎಲ್.ಸಿ, ಪರೀಕ್ಷೆಯಲ್ಲಿ ಯಾವ ವಿದ್ಯಾರ್ಥಿ 625ಕ್ಕೆ 625 ಅಂಕಗಳನ್ನು ಗಳಿಸುತ್ತಾರೋ ಅಂತಹ ವಿದ್ಯಾರ್ಥಿಗೆ 1 ಲಕ್ಷ ರೂಗಳನ್ನು ನೀಡುವುದಾಗಿ ಶಾಸಕ ಡಾ.ಎಂ.ಚಂದ್ರಪ್ಪ ತಿಳಿಸಿದರು.
ಇಂದು ಹೊಳಲ್ಕೆರೆ ಪಟ್ಟದ ಸಂವಿಧಾನ ಸೌಧದಲ್ಲಿ ಕರ್ನಾಟಕ ಸರ್ಕಾರ ಶಾಲಾ ಶಿಕ್ಷಣ ಇಲಾಖೆ, ಹೊಳಲ್ಕೆರೆ ಕರ್ನಾಟಕ ಗಣಿ ಪರಿಸರ ಪುನಶ್ಚೇತನ ನಿಗಮ ಯೋಜನೆಯಡಿಯಲ್ಲಿ ಸರ್ಕಾರಿ ಶಾಲೆಗಳ 1 ರಿಂದ 10ನೇ ತರಗತಿಯ 11.000 ವಿದ್ಯಾರ್ಥಿಗಳಿಗೆ ಪೂರಕ ಪೌಷ್ಟಿಕ ಆಹಾರ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳ ಕಲಿಕೆಯಲ್ಲಿ ಆಹಾರ ಉತ್ತಮವಾದ ಪಾತ್ರವನ್ನು ವಹಿಸುತ್ತದೆ. ಈ ಹಿನ್ನಲೆಯಲ್ಲಿ ಮಕ್ಕಳಿಗೆ ಉತ್ತಮ ಗುಣಮಟ್ಟದ ಆಹಾರವನ್ನು ನೀಡುವ ಸಲುವಾಗಿ ಈ ಯೋಜನೆಯನ್ನು ಜಾರಿ ಮಾಡಲಾಗಿದೆ. ನಮ್ಮ ಸರ್ಕಾರಿ ಶಾಲೆಯಲ್ಲಿ ಅಭ್ಯಾಸವನ್ನು ಮಾಡುವ ಮಕ್ಕಳಿಗೆ ಉಚಿತವಾಗಿ ಸಮವಸ್ತ್ರ, ಪಠ್ಯ ಪುಸ್ತಕ, ಶೂ, ಮಧ್ಯಾಹ್ನ ಬಿಸಿಯೂಟ, ಕಾಳು, ಹಾಲು, ಮೊಟ್ಟೆ, ಬಾಳೆಹಣ್ಣು ಸೇರಿದಂತೆ ಇತರೆ ಪೌಷ್ಟಿಕವಾದ ಆಹಾರಗಳನ್ನು ನೀಡಲಾಗುತ್ತದೆ.
ಇವುಗಳನ್ನು ಸೇವಿಸುವುದರ ಮೂಲಕ ಮಕ್ಕಳು ಆರೋಗ್ಯವಂತರಾಗಿ ಇರುವುದರ ಮೂಲಕ ಶಾಲೆಯಲ್ಲಿ ಸಿಗುವಂತೆ ಗುಣಮಟ್ಟದ ಶಿಕ್ಷಣವನ್ನು ಪಡೆದೆ ರಾಜ್ಯ ರಾಷ್ಟ್ರ ಮಟ್ಟದಲ್ಲಿ ಹೆಸರನ್ನು ಮಾಡುವುದರ ಮೂಲಕ ತಂದೆತಾಯಿ, ಶಾಲೆಗೆ ತಾಲ್ಲೂಕಿಗೆ ಹೆಸರನ್ನು ತರುವಂತ ಕೆಲಸವನ್ನು ಮಾಡುವಂತೆ ಕರೆ ನೀಡಿದರು.
ಸರ್ಕಾರ 14 ವರ್ಷದೊಳಗಿನ ಮಕ್ಕಳಿಗೆ ಉಚಿತವಾದ ಶಿಕ್ಷಣವನ್ನು ನೀಡುತ್ತಿದೆ, ಇದಕ್ಕೆ ಬೇಕಾದ ಸೌಲಭ್ಯವನ್ನು ಸಹ ನೀಡುತ್ತಿದೆ ಖಾಸಗಿ ಶಾಲೆಗೆ ಹೊಂದರೆ ಅಲ್ಲಿ ಡೊನೇಷನ್, ಪುಸ್ತಕಗಳು ಹಾಗೂ ಸಮವಸ್ತ್ರಗಳನ್ನು ಖರೀದಿ ಮಾಡಲು ಹಣವನ್ನು ನೀಡಬೇಕಿದೆ ಆದರೆ ಸರ್ಕಾರಿ ಶಾಲೆಯಲ್ಲಿ ಎಲ್ಲವೂ ಸಹ ಉಚಿತವಾಗಿ ನೀಡಲಾಗುತ್ತಿದೆ. ಇದರ ಸದುಪಯೋಗವನ್ನು ಪಡೆದುಕೊಂಡು ಶಿಕ್ಷಣವಂತರಾಗಬೇಕಿದೆ, ನಮ್ಮ ತಾಲ್ಲೂಕಿನಲ್ಲಿನ ಸರ್ಕಾರಿ ಮಕ್ಕಳಿಗೆ ಸಿಗುವಂತ ಸೌಲಭ್ಯಗಳು ರಾಜ್ಯದ ಯಾವ ತಾಲ್ಲೂಕಿನಲ್ಲಿಯೂ ಸಹಾ ಸಿಗುತಿಲ್ಲ ಸರ್ಕಾರಿ ಶಾಲೆಯ ಮಕ್ಕಳು ಸಮಯಕ್ಕೆ ಸರಿಯಾಗಿ ಶಾಲೆಗೆ ಬರಲು ಬಸ್ಗಳನ್ನು ಸಹಾ ನೀಡಲಾಗಿದೆ ಎಂದು ಚಂದ್ರಪ್ಪ ತಿಳಿಸಿದರು.
ಈ ಸಂದರ್ಭದಲ್ಲಿ ಪುರಸಭೆ ಉಪಾಧ್ಯಕ್ಷರಾದ ಶ್ರೀಮತಿ ನಾಗರತ್ನ, ಪುರಸಭೆ ಮಾಜಿ ಅಧ್ಯಕ್ಷರಾದ ಆರ್. ಎ. ಅಶೋಕ್, ಹೊಳಲ್ಕೆರೆ ತಹಶೀಲ್ದಾರರಾದ ಶ್ರೀ ವಿಜಯಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀ ಶ್ರೀನಿವಾಸ್, ವೆಂಕಟೇಶ್, ಸುರೇಂದ್ರನಾಥ್, ಪರಮೇಶ್ವರಪ್ಪ, ಹಾಗೂ ಶಿಕ್ಷಕರುಗಳು ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.