ಚಿತ್ರದುರ್ಗ ನ. 06
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ಕೇಂದ್ರದಲ್ಲಿ ಅಧಿಕಾರವನ್ನು ನಡೆಸುತ್ತಿರುವ ಬಿಜೆಪಿ ಸರ್ಕಾರ ಚುನಾವಣೆಯಲ್ಲಿ ಮತಗಳ್ಳತನದಿಂದ ಅಧಿಕಾರವನ್ನು ಹಿಡಿದಿದೆ, ನಿಜವಾಗಿಯೂ ಮತದಾರರು ಬಿಜೆಪಿಯನ್ನು ಬೆಂಬಲಿಸಿಲ್ಲ, ಅಕ್ರಮ ಮತದಾನ ದಿಂದ ಅಧಿಕಾರವನ್ನು ಹಿಡಿಯಲಾಗಿದೆ ಇದರ ವಿರುದ್ದ ಕಾಂಗ್ರೆಸ್ ಅಭಿಯಾನವನ್ನು ಪ್ರಾರಂಭ ಮಾಡಿದೆ ಎಂದು ಮಾಜಿ ಸಂಸದ ಬಿ.ಎನ್.ಚಂದ್ರಪ್ಪ ತಿಳಿಸಿದರು.
ಚಿತ್ರದುರ್ಗ ನಗರದ ಹೊಳಲ್ಕೆರೆ ರಸ್ತೆಯಲ್ಲಿನ 15ನೇ ವಾರ್ಡನಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಹಾಗೂ ಚಿತ್ರದುರ್ಗ ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಆಯೋಜಿಸಿದ್ದ ಬಿಜೆಪಿ ಮತಗಳ್ಳತನ ವಿರುದ್ಧ ವೋಟ್ ಚೌರಿ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ, ಅವರು, ಬಿಜೆಪಿ ಸೇರಿದಂತೆ ಕೋಮುವಾದಿ ಪಕ್ಷಗಳು ದೇಶದಲ್ಲಿ ಸರ್ವಾಧಿಕಾರಿ ಆಯೋಗ ಅಧಿಕಾರಕ್ಕೋಸ್ಕರ ಆಯೋಗದ ಮೂಲಕ ನಡೆಸುತ್ತಿರುವ ಮತಗಳ್ಳತನ ನಿಲ್ಲಬೇಕು. ಚುನಾವಣಾ ನಿಷ್ಪಕ್ಷಪಾತವಾಗಿ ಚುನಾವಣೆಗಳನ್ನು ಉದ್ದೇಶದಿಂದ ಮೂಡಿಸಲು ಪಾರದರ್ಶಕವಾಗಿ ನಡೆಸಬೇಕೆಂಬ ಜನಜಾಗೃತಿಯನ್ನು ಕಾಂಗ್ರೆಸ್ ದೇಶದಾದ್ಯಂತ ಕಳುವಿನ (ಚೌರಿ) ವಿರುದ್ಧ ಚಳುವಳಿ ಮಾದರಿಯಲ್ಲಿ ಅಭಿಯಾನವನ್ನು ನಡೆಸುತ್ತಿದೆ ಎಂದರು.
ಚುನಾವಣೆಗಳಲ್ಲಿ ಮತಗಳವು ಮುಂದುವರೆದಲ್ಲಿ ಪ್ರಜಾಪ್ರಭುತ್ವ ಇರಲ್ಲ ಎಂಬುದನ್ನು ಮನವರಿಕೆ ಮಾಡಿಕೊಟ್ಟು, ಸಾರ್ವತ್ರಿಕ ಚುನಾವಣೆಗಳಲ್ಲಿ ಪ್ರಜಾಪ್ರಭುತ್ವ ಗೆಲ್ಲಬೇಕು. ಅಳ್ವಿಕೆ ನಡೆಸಬೇಕು ಎಂಬ ಸಂದೇಶವನ್ನು ರಾಷ್ಟ್ರದಾದ್ಯಂತ ನೀಡಲಿಕ್ಕೆ ಕಾಂಗ್ರೆಸ್ ಜನಂದೋಲವನ್ನು ಆರಂಭಿಸಿದೆ ಮತಗಳ್ಳತನದ ಮೂಲಕ ಜನಾದೇಶ ಕಗೊಲೆಯಾಗುತ್ತಿದೆ. ಇಂತಹ ಕೃತ್ಯದ ವಿರುದ್ಧ ರಾಹುಲ್ ಗಾಂಧಿ ಅವರು ಜನಜಾಗೃತಿಯ ಚಳುವಳಿ ನಡೆಸುತ್ತಿದ್ದಾರೆ. ಸಾಂವಿಧಾನಿಕ ಸ್ವಾಯತ್ತ ಸಂಸ್ಥೆಯಾಗಿರುವ ಚುನಾವಣಾ ಆಯೋಗವನ್ನು ಪ್ರತಿಯೊಬ್ಬ ಮತದಾರರು ತಮ್ಮ ಮತದ ಹಕ್ಕನ್ನು ಕದಿಯಲು, ಕಸಿಯಲು ಅವಕಾಶ ನೀಡದಂತೆ ಎಚ್ಚರಿಸಬೇಕು. ಅದಕ್ಕಾಗಿ ಜಾಗೃತಿ ಮೂಡಿಸಲು ಮತದಾರರ ಹಕ್ಕುಗಳಿಗಾಗಿ ಸಹಿ ಅಭಿಯಾನವನ್ನು ಸಂಗ್ರಹಣೆ ಪ್ರತಿಯೊಂದು ವಿಧಾನಸಭಾ ಕ್ಷೇತ್ರದಲ್ಲಿ ಸರ್ವಾಧಿಕಾರಿ ಹಮ್ಮಿಕೊಳ್ಳಲಾಗುತ್ತಿದೆ. ಧೋರಣೆಯುಳ್ಳವರ ಕೈಗೆ ಅಧಿಕಾರ ಕೊಟ್ಟರೆ ಜನರ ಹಕ್ಕು ಮತ್ತು ವಾಕ್ ಸ್ವಾತಂತ್ರ್ಯದ ಹರಣವಾಗುತ್ತದೆ ಎಂದು ಎಚ್ಚರಿಸಿದರು.
ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಎಂ.ಕೆ.ತಾಜ್‍ಪೀರ್ ಮಾತನಾಡಿ, ವಿಪಕ್ಷಗಳನ್ನು ಬೆಂಬಲಿಸುವ ಮತದಾರರನ್ನು ಪಕ್ಷವಾಗಿ ಬಿಜೆಪಿ ಮತಧಾರರ ಪಟ್ಟಿಯಿಂದಲೇ ಕಿತ್ತೆಸೆದು ಮತದಾರರಲ್ಲಿ ಗೊಂದಲ ಸೃಷ್ಟಿಸಲಾಗುತ್ತಿದೆ. ಉತ್ತರ ಪ್ರದೇಶ, ಮಧ್ಯ ಪ್ರದೇಶ ಹಾಗೂ ಬಿಹಾರ ರಾಜ್ಯಗಳಲ್ಲಿ ಓಟ್ ಚೌರಿ ಆಗಿರುವುದನ್ನ ಖಚಿತ ಪಡಿಸಿಕೊಂಡು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಜೀವನದ ಹಂಗನ್ನು ತೊರೆದು ಹೋರಾಟವನ್ನು ನಡೆಸುತ್ತಿದ್ದಾರೆ. ಚುನಾವಣೆ ವೇಳೆ ಸುಳಿವು ಕೊಟ್ಟ ಕೂಡಲೇ ದಾಳಿ ಮಾಡುವ ಚುನಾವಣಾ ಆಯೋಗ ಮತಗಳವು ಬಗ್ಗೆ ರಾಹುಲ್ ಗಾಂಧಿ ಅವರನ್ನು ದಾಖಲೆಕೇಳುತ್ತಿದೆ. ಚುನಾವಣೆ ಅಕ್ರಮ, ಮತಗಳವು ತಡೆಗಟ್ಟಬೇಕಾದದ್ದು ಆಯೋಗದ ಸಂವಿಧಾನಿಕವಾದ ಕರ್ತವ್ಯ ಜವಾಬ್ದಾರಿಯಾಗಿದೆ ಆಯೋಗ ಎಂಬುದನ್ನು ಅರಿಯಬೇಕೆಂದು ಸಲಹೆ ನೀಡಿದರು.
ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷರಾದ ಶ್ರೀಮತಿ ನಂದಿನಿಗೌಡ ಮಾತನಾಡಿ, ಎಐಸಿಸಿ ದೇಶದಾದ್ಯಂತ ಆಯೋಚಿಸಿರುವ ಹಕ್ಕುಗಳಿಗಾಗಿ ಸಹಿ ಸಂಗ್ರಹಣೆ ಮಾಡಲಾಗುತ್ತಿದೆ. ಕೇಂದ್ರ ಸರ್ಕಾರ ಮತಗಳ್ಳತನ ನಿಲ್ಲಿಸಿ. ವೋಟ್ ಚೌಲ ವಿರುದ್ಧದ ಅಭಿಯಾನದಲ್ಲಿ ಮತದಾರರ ಜನಾದೇಶ ಕಗ್ಗೋಲೆ ಆಗುವುದನ್ನು ತಪ್ಪಿಸಲು ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಅದಕ್ಕಾಗಿ ಪ್ರತಿಯೊಂದು ವಿಧಾನಸಭಾ ಕ್ಷೇತ್ರದಲ್ಲಿ 20 ಸಾವಿರ ಸಹಿಗಳನ್ನು ಪಡೆಯಲಾಗುವುತ್ತಿದೆ. ಅಭಿಯಾನವನ್ನು ಯಶಸ್ವಿಗೊಳಿಸಲು ಪಕ್ಷದ ಕಾರ್ಯಕರ್ತರು ಸೇರಿದಂತೆ ಮುಖಂಡರು ಹಾಗೂ ನಾಯಕರು ಚುರುಕಿನಿಂದ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ತಿಳಿಸಿದರು.
ಓಬಿಸಿ ಅಧ್ಯಕ್ಷ ಎನ್.ಡಿ.ಕುಮಾರ್ ಮಾತನಾಡಿ, ಸ್ಲಂ ಮತ್ತು ಬಡವರು ಕಾಂಗ್ರೆಸ್ ಪಕ್ಷದ ಮತದಾರರು ಇವರಿಗೆ ಶಿಕ್ಷಣ ಕಡಿಮೆ ಇರುತ್ತದೆ ಎಂದು ಬಿಜೆಪಿ ಇಂತಹರ ಮತಗಳನ್ನು ಕದ್ದಿದೆ, ಇವರಿಗೆ ಮತದಾನ ಮತದ ಬಗ್ಗೆ ಅಷ್ಟಾಗಿ ಗಮನ ಇರುವುದಿಲ್ಲ ಇದನ್ನು ಮನಗಂಡು ಮತಗಳ್ಳತನವನ್ನು ಮಾಡಿದೆ. ಬಿಜೆಪಿ ವಾಮಮಾರ್ಗದಿಂದ ಅಧಿಕಾರವನ್ನು ಹಿಡಿದಿದೆ, ಇವಿಎಂ ಮೂಲಕ ಮತವನ್ನು ಪಡೆದಿದೆ ಆದರೆ ಬ್ಯಾಲೆಟ್ ಮೂಲಕ ಮತವನ್ನು ಕದಿಯಲು ಆಗುವುದಿಲ್ಲ ಎಂದು ಬಿಜೆಪಿ ಇವಿಎಂನ್ನು ಚುನಾವಣೆಯಲ್ಲಿ ಬಳಕೆ ಮಾಡಲು ಮುಂದಾಗಿದೆ ಎಂದು ದೂರಿದರು.
ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷರಾದ ಹಾಲಸ್ವಾಮಿ ಪ್ರಧಾನ ಕಾರ್ಯದರ್ಶಿಗಳಾದ ಸಂಪತ್ ಕುಮಾರ್, ಮೈಲಾರಪ್ಪ, ಗ್ಯಾರೆಂಟಿ ಪ್ರಾಧಿಕಾರದ ಅಧ್ಯಕ್ಷರಾದ ಶಿವಣ್ಣ ಗಂಜಿಗಟ್ಟೆ, ಕೆಪಿಸಿಸಿ ಸದಸ್ಯರಾದ ಶ್ರೀಮತಿ ಮೋಕ್ಷಾ ರುದ್ರಸ್ವಾಮಿ, ನಗರಾಧ್ಯಕ್ಷ ಲಕ್ಷ್ಮೀಕಾಂತ, ನಂದೀಶ್, ಆಶ್ವಕ್ ಆಲಿ, ಪೈಲಟ್, ನಗರಸಭಾ ಮಾಜಿ ಸದಸ್ಯರಾದ ನರಸಿಂಹ ಮೂರ್ತಿ, ಮುನ್ನಾ, ಖುದ್ದುಸ್ ಸೇರಿದಂತೆ ಇತರರು ಭಾಗವಹಿಸಿದ್ದರು.