ಚಿತ್ರದುರ್ಗ ನಗರ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಜಗದೀಶ್ ಪಿ ನೇಮಕ; ಮುಂದಿನ ಚುನಾವಣೆಗಳತ್ತ ಸಂಘಟನೆ ಬಲಪಡಿಸುವ ಕರೆ.

ಚಿತ್ರದುರ್ಗ ನ. 21

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817

ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಚಿತ್ರದುರ್ಗ ನಗರ ಬ್ಲಾಕ್ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷರನ್ನಾಗಿ ಜಗದೀಶ್ ಪಿ ಇವರನ್ನು ನೇಮಕ ಮಾಡಿ ಆದೇಶದ ಪ್ರತಿಯನ್ನು ಕಾಂಗ್ರೆಸ್ ಕಚೇರಿಯಲ್ಲಿ ಚಿತ್ರದುರ್ಗ ನಗರ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಲಕ್ಷ್ಮೀಕಾಂತ್ ವಿತರಣೆ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಚಿತ್ರದುರ್ಗ ನಗರ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಲಕ್ಷ್ಮೀಕಾಂತ್ ಜಗದೀಶ್ ರವರು ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾರ್ಗ ದರ್ಶನದಲ್ಲಿ ಪಕ್ಷವನ್ನು ಸಂಘಟಿಸಬೇಕಿದೆ ಇಲ್ಲದೆ ಮುಂಬರುವ ಜಿ.ಪಂ.ತಾ.ಪಂ ಹಾಗೂ ಸ್ಥಳಿಯ ಚುನಾವಣೆಗಳಲ್ಲಿ ಪಕ್ಷದವತಿಯಿಂದ ಸ್ಪರ್ದೆ ಮಾಡುವ ಅಭ್ಯರ್ಥಿಯ ಪರವಾಗಿ ಪ್ರಚಾರ ಮಾಡುವುದರ ಮೂಲಕ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿ ಅಧಿಕಾರ ಹಿಡಿಯುವಂತೆ ಮಾಡಬೇಕಿದೆ ಎಂದು ಸೂಚಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಸಂಪತ್ ಕುಮಾರ್ ಸೇರಿದಂತೆ ಇತರರು ಹಾಜರಿದ್ದರು.

Views: 24

Leave a Reply

Your email address will not be published. Required fields are marked *