ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ಚಿತ್ರದುರ್ಗ: ಜಿ.ಆರ್ ಹಳ್ಳಿ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ದುರಸ್ತಿ ಮಾಡುವಂತೆ ಪಪ್ಪಿಸ್ ಸ್ಟೂಡೆಂಟ್ ವಿಂಗ್ ವತಿಯಿಂದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಕಾರ್ಯ ಪಾಲಕ ಇಂಜಿನಿಯರ್ ಶಿವಮೂರ್ತಿ ರವರಿಗೆ ಮನವಿ ಸಲ್ಲಿಸಿದ್ದಾರೆ.
ತಾಲೂಕಿನ ಜಿ.ಆರ್ ಹಳ್ಳಿ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಗಾಗಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಸ್ಥಾಪಿಸಿದ್ದು ಕಳೆದ ಎರಡು ತಿಂಗಳಿನಿಂದ ಕುಡಿಯುವ ನೀರಿನ ಘಟಕ ಕೆಟ್ಟು ಹೋಗಿದ್ದು, ಕುಡಿಯುವ ನೀರಿನ ವ್ಯವಸ್ಥೆ ಇಲ್ಲದಂತಾಗಿದೆ, ಬೇಸಿಗೆಗಾಲ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ನೀರಿನ ಕೊರತೆ ಮತ್ತು ಆರೋಗ್ಯದ ಸಮಸ್ಯೆ ವಿದ್ಯಾರ್ಥಿಗಳಲ್ಲಿ ಉಂಟಾಗಬಾರದೆಂಬ ನೀಟಿನಲ್ಲಿ ಕೆಟ್ಟು ಹೋಗಿರುವಂತಹ ಶುದ್ಧ ಕುಡಿಯುವ ನೀರಿನ ಘಟಕವನ್ನು ತುರ್ತಾಗಿ ದುರಸ್ತಿಪಡಿಸಿ ವಿದ್ಯಾರ್ಥಿಗಳಿಗೆ ಆರೋಗ್ಯವನ್ನು ಕಾಪಾಡಬೇಕೆಂದು ಪಪ್ಪಿಸ್ ಸ್ಟೂಡೆಂಟ್ ವಿಂಗ್ ವತಿಯಿಂದ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಪಪ್ಪಿಸ್ ಸ್ಟೂಡೆಂಟ್ ವಿಂಗ್ ಅಧ್ಯಕ್ಷ ರವಿ, ಕಾರ್ಯದರ್ಶಿ ಸಲೀಂ, ಸದಸ್ಯರಾದ ತೀರ್ಥೇಶ್ ಇದ್ದರು.
Views: 81