ಚಿತ್ರದುರ್ಗ ಡಿ.09
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಮೆಕ್ಕೆಜೋಳ ಖರೀದಿ ಕೇಂದ್ರಗಳನ್ನು ತೆರೆಯುಬೇಕು ಮತ್ತು ಜಿಲ್ಲಾಡಳಿತ ರೈತರ ಕೆಲವು ಬೇಡಿಕೆಗಳನ್ನು ಈಡೇರಿಸದೇ ಇರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಚಿತ್ರದುರ್ಗ ಜಿಲ್ಲೆ ಶಾಖೆವತಿಯಿಂದ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ನಗರದ ಪ್ರವಾಸಿ ಮಂದಿರದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೂ ಸರ್ಕಾರದ ವಿರುದ್ದ ಘೋಷಣೆಗಳನ್ನು ಕೂಗುತ್ತಾ ಬೇಡಿಕೆ ಈಡೇರಿಕೆಗೆ ಆಗ್ರಹಿಸಲಾಯಿತು. ಚಿತ್ರದುರ್ಗ ಜಿಲ್ಲೆಯಲ್ಲಿ ಮೆಕ್ಕೆಜೋಳ ಬೆಳೆ ಮಾರುಕಟ್ಟೆಯಲ್ಲಿ ಬೆಲೆ ಕುಸಿತದಿಂದ ರೈತರು ಕಂಗಲಾಗಿದ್ದು, ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ಸರ್ಕಾರ ಮತ್ತು ಜಿಲ್ಲಾ ಆಡಳಿತಕ್ಕೆ ಮಿತಿಯಿಲ್ಲದೇ ರೈತರ ಮೆಕ್ಕೆಜೋಳವನ್ನು ಬೆಂಬಲ ಬೆಲೆಯಲ್ಲಿ ಖರೀದಿ ಮಾಡಬೇಕೆಂದು ಮನವಿಯನ್ನು ಸಲ್ಲಿಸಿದ್ದರು ಸಹ ಖರೀದಿ ಕೇಂದ್ರವನ್ನು ತೆರೆಯದೇ ನಿರ್ಲಕ್ಷ ವಹಿಸುತ್ತಿರುವುದರಿಂದ ಈಗಾಗಲೇ ರೈತರು ಕಡಿಮೆ ಬೆಲೆಗೆ ಮಾರಾಟ ಮಾಡಿರುತ್ತಾರೆ. ಆದ್ದರಿಂದ ತಕ್ಷಣ ಎಲ್ಲಾ ತಾಲ್ಲೂಕುಗಳಲ್ಲಿ ಖರೀದಿ ಕೇಂದ್ರಗಳನ್ನು ತೆರೆದು ರೈತರ ಆರ್ಥಿಕ ಧೈರ್ಯವನ್ನು ತುಂಬುವಂತಹ ಕೆಲಸವನ್ನು ಸರ್ಕಾರ ಮತ್ತು ಜಿಲ್ಲಾ ಆಡಳಿತ ಮಾಡಬೇಕಾಗಿತ್ತು. ಮತ್ತು ಚಿತ್ರದುರ್ಗ ಜಿಲ್ಲೆಯಲ್ಲಿ ಶೇಂಗಾ ಬೆಳೆ ಸಂಪೂರ್ಣವಾಗಿ ಹಾಳಾಗಿದ್ದರು ಸಹ ಬೆಳೆ ಪರಿಹಾರ ಮತ್ತು ಬೆಳೆ ವಿಮೆಯನ್ನು ಇದುವರೆಗೂ ರೈತರ ಬ್ಯಾಂಕ್ ಖಾತೆಗೆ ಜಮಾ ಆಗಿರುವುದಿಲ್ಲ ಮತ್ತು ಚಿತ್ರದುರ್ಗ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಈರುಳ್ಳಿ ಬೆಳೆ ಹಾಳಾಗಿದ್ದರೂ ಸಹ ಬೆಳೆ ಪರಿಹಾರ ಮತ್ತು ಬೆಳೆ ವಿಮೆಯನ್ನು ನೀಡಿರುವುದಿಲ್ಲ. ಬೆಲೆ ಕುಸಿತದಿಂದ ಕಂಗಲಾಗಿರುವ ರೈತರಿಗೆ ಈರುಳ್ಳಿ ಬೆಳೆಯನ್ನು ಬೆಂಬಲ ಬೆಲೆಯಲ್ಲಿ ಖರೀದಿ ಮಾಡುವಂತೆ ಮನವಿಯನ್ನು ಸಲ್ಲಿಸಿದ್ದರೂ ಸಹ ಜಿಲ್ಲಾ ಆಡಳಿತ ಮತ್ತು ಅಧಿಕಾರಿಗಳ ನಿರ್ಲಕ್ಷತನ ಮಾಡಿರುವುದರಿಂದ ಜಿಲ್ಲಾಡಳಿತ ಹಾಗೂ ಸರ್ಕಾರ ರೈತರ ಪರವಾಗಿ ಇಲ್ಲದಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ.
2022-23 ನೇ ಅತಿವೃಷ್ಟಿಯಿಂದ ಬೆಳೆ ಪರಿಹಾರವನ್ನು ನಿಜವಾದ ಫಲಾನುಭವಿಗಳನ್ನು ಹಾಕದೇ ಬೇನಾಮಿ ಬ್ಯಾಂಕ್ ಖಾತೆಗಳಿಗೆ ಪರಿಹಾರದ ಹಣವನ್ನು ವರ್ಗಾಹಿಸಿರುವುದು ಕಂಡುಬಂದಿದ್ದರೂ ಸಹ ಯಾವುದೇ ಕ್ರಮವನ್ನು ಕೈಗೊಂಡಿರುವುದಿಲ್ಲ. ಬೇನಾಮಿ ಬ್ಯಾಂಕ್ ಖಾತೆಗಳಿಗೆ ಪರಿಹಾರದ ಹಣವನ್ನು ಜಮಾ ಮಾಡಿದವರ ವಿರುದ್ಧ ಸೂಕ್ತ ಕಾನೂನು ಕ್ರಮವಹಿಸಿ ನಿಜವಾದ ರೈತರಿಗೆ ಪರಿಹಾರದ ಹಣವನ್ನು ಜಮಾ ಮಾಡಲು ಕೂಡಲೇ ಕ್ರಮವಹಿಸೇಬೇಕೆಂದು ಒತ್ತಾಯಿಸಿದೆ. ಇದನ್ನು ತಕ್ಷಣ ಸರಿಪಡಿಸಿ ರೈತರಿಗೆ ಆತ್ಮಸ್ಥೆರ್ಯವನ್ನು ತುಂಬುವಂತಹ ಕೆಲಸವನ್ನು ತುರ್ತಾಗಿ ಮಾಡಬೇಕೆಂದು ಮೂಲಕ ಒತ್ತಾಯಿಸಲಾಯಿತು.
ಈ ಪ್ರತಿಭಟನೆಯ ನೇತೃತ್ವವನ್ನು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಚಿತ್ರದುರ್ಗ ಜಿಲ್ಲೆ ಶಾಖೆಯ ಅಧ್ಯಕ್ಷ ಡಿ. ಎಸ್. ಹಳ್ಳಿ ಮಲ್ಲಿಕಾರ್ಜುನ ವಹಿಸಿದ್ದರು. ಪ್ರತಿಭಟನೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆರ್.ಬಿ. ನಿಜಲಿಂಗಪ್ಪ, ಜಿಲ್ಲಾ ಕಾರ್ಯದರ್ಶಿ ರಾಮರೆಡ್ಡಿ, ಸಂಜೀವಪ್ಪ, ಸಿ.ನಾಗರಾಜು ಮುದ್ದಾಪುರ, ಬಾಗೇನಾಳ್ ತಿಪ್ಪೇಸ್ವಾಮಿ, ನಿರಂಜನಮೂರ್ತಿ, ಮಹಾಸ್ವಾಮಿ, ಓಬಳೇಶ್, ಸದಾಶಿವಪ್ಪ, ವೆಂಕಟೇಶಪ್ಪ, ಕುಮಾರ್, ಪ್ರವೀಣಕುಮಾರ್, ಲಕ್ಷ್ಮಣ್, ಬಾಬು ರಾಜಶೇಣರಪ್ಪ ಜಯ್ಯಣ್ಣ ನಾಗರಾಜು ಲೋಕಣ್ಣ ತಿಪ್ಪೆಸ್ವಾಮಿ ಸೇರಿದಂತೆ ಇತರರು ಭಾಗವಹಿಸಿದ್ದರು.