ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ಚಿತ್ರದುರ್ಗ ಡಿ. 09
ಕರ್ನಾಟಕ ಏಕೀಕರಣದ ಶಿಲ್ಪಿ, ಸ್ವಾತಂತ್ರ್ಯ ಹೋರಾಟಗಾರ ಹಾಗೂ ಏಕೀಕೃತ ಮೈಸೂರು ರಾಜ್ಯದ ಪ್ರಥಮ ಮುಖ್ಯಮಂತ್ರಿ ಎಸ್. ನಿಜಲಿಂಗಪ್ಪರ 120ನೇ ಜನ್ಮದಿನಾಚರಣೆ ಅಂಗವಾಗಿ ಸೀಬಾರದಲ್ಲಿ ವಿಶೇಷ ಪುಷ್ಪ ನಮನ ಕಾರ್ಯಕ್ರಮಕ್ಕೆ ಸಜ್ಜಾಗಿದೆ.
ಎಸ್. ನಿಜಲಿಂಗಪ್ಪ ಮೆಮೋರಿಯಲ್ ಟ್ರಸ್ಟ್ (ರಿ) ಸೀಬಾರ ಹಾಗೂ ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಡಿಸೆಂಬರ್ 10, ಬುಧವಾರ ಬೆಳಗ್ಗೆ 10.30ಕ್ಕೆ ಎಸ್.ಎನ್. ಸ್ಮಾರಕದಲ್ಲಿ ಈ ಕಾರ್ಯಕ್ರಮ ನಡೆಯಲಿದೆ.
ಟ್ರಸ್ಟ್ ಕಾರ್ಯದರ್ಶಿ ಹಾಗೂ ವಿಶ್ರಾಂತ ಮುಖ್ಯ ವಾಸ್ತುಶಿಲ್ಪಿ ಪ್ರೊ. ಎಸ್.ಎನ್. ಕಿರಣ್ ಶಂಕರ್ ತಿಳಿಸಿದ್ದಾರೆ.
ಈ ಭಾವಪೂರ್ಣ ಕಾರ್ಯಕ್ರಮದಲ್ಲಿ ಯೋಗವನ ಬೆಟ್ಟದ ಅಧ್ಯಕ್ಷ ಡಾ. ಬಸವಕುಮಾರ ಸ್ವಾಮಿಗಳು, ಮಾದಾರ ಚನ್ನಯ್ಯ ಗುರುಪೀಠದ ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮಿಗಳು, ಮಾಜಿ ಸಂಸದ ಹೆಚ್. ಹನುಮಂತಪ್ಪ ಹಾಗೂ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಎಂ.ಕೆ. ತಾಜ್ ಪೀರ್ ಸೇರಿದಂತೆ ಗಣ್ಯರು ಭಾಗವಹಿಸಲಿದ್ದಾರೆ.
ಕರ್ನಾಟಕದ ನಿರ್ಮಾಣಕ್ಕೆ ಮಹತ್ತರ ಕೊಡುಗೆ ನೀಡಿದ ನಿಜಲಿಂಗಪ್ಪರ ಸೇವೆಯನ್ನು ಸ್ಮರಿಸುವ ಗಂಭೀರ ಕ್ಷಣಕ್ಕೆ ಸೀಬಾರದ ‘ಪುಣ್ಯಭೂಮಿ’ ಮತ್ತೊಮ್ಮೆ ಸಾಕ್ಷಿಯಾಗಲಿದೆ.