KMF ನೇಮಕಾತಿ 2025: ಶಿವಮೊಗ್ಗ–ದಾವಣಗೆರೆ–ಚಿತ್ರದುರ್ಗ ಹಾಲು ಸಂಘಗಳಲ್ಲಿ 194 ಹುದ್ದೆಗಳ ಭರ್ತಿ.

ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿ ನಿಯಮಿತ (KMF) ದೊಡ್ಡ ಮಟ್ಟದ ನೇಮಕಾತಿ ಅಧಿಸೂಚನೆ ಪ್ರಕಟಿಸಿದ್ದು, ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಒಕ್ಕೂಟದಲ್ಲಿ ಒಟ್ಟು 194 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಟೆಕ್ನಿಷಿಯನ್, ಕೆಮಿಸ್ಟ್, ಅಕೌಂಟೆಂಟ್ ಸೇರಿದಂತೆ ಗ್ರೂಪ್ A, B ಮತ್ತು C ವಿಭಾಗಗಳ ವಿವಿಧ ಹುದ್ದೆಗಳಿಗೆ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಡಿಸೆಂಬರ್ 14, 2025ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿಯಲ್ಲಿ ಸಹಾಯಕ ವ್ಯವಸ್ಥಾಪಕರು, ತಾಂತ್ರಿಕ ಅಧಿಕಾರಿಗಳು, ಮಾರುಕಟ್ಟೆ ಅಧಿಕಾರಿಗಳು, ಆಡಳಿತ ಸಹಾಯಕರು, ಲೆಕ್ಕ ಸಹಾಯಕರು, ಕಿರಿಯ ಸಿಸ್ಟಂ ಆಪರೇಟರ್, ಶೀಘ್ರಲಿಪಿಗಾರರು ಮತ್ತು ಕಿರಿಯ ತಾಂತ್ರಿಕರು ಸೇರಿದಂತೆ ಹಲವು ಹುದ್ದೆಗಳು ಒಳಗೊಂಡಿವೆ. 194 ಹುದ್ದೆಗಳ ಭರ್ತಿಗೆ ಅಭ್ಯರ್ಥಿಗಳು ಬಿಇ, ಎಂಬಿಎ, ಬಿಕಾಂ ಮುಂತಾದ ಪದವಿಗಳನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪೂರ್ಣಗೊಳಿಸಿರಬೇಕು.

ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷವಾಗಿದ್ದು, ಗರಿಷ್ಠ ವಯೋಮಿತಿ 35 ವರ್ಷ ನಿಗದಿಯಾಗಿದೆ. ಪ್ರವರ್ಗ–2ಎ, 2ಬಿ, 3ಎ, 3ಬಿ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ/ವಿಧವಾ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಇದೆ.

ಅರ್ಜಿ ಶುಲ್ಕವಾಗಿ ಎಸ್‌ಸಿ, ಎಸ್‌ಟಿ, ಪ್ರವರ್ಗ–1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಂದ ₹500 ಮತ್ತು ಇತರೆ ಎಲ್ಲ ಅಭ್ಯರ್ಥಿಗಳಿಂದ ₹1000 ಆನ್‌ಲೈನ್ ಮೂಲಕ ಪಾವತಿಸಬೇಕು. ಅಭ್ಯರ್ಥಿಗಳ ಆಯ್ಕೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಆಧಾರದಲ್ಲಿ ನಡೆಯಲಿದೆ. ಆಸಕ್ತರು ಕೊನೆಯ ದಿನಾಂಕಕ್ಕಿಂತ ಮೊದಲೇ ಅರ್ಜಿ ಸಲ್ಲಿಸಿ.

ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಕೆಗೆ ಅಭ್ಯರ್ಥಿಗಳು shimul.coop ಇಲ್ಲಿಗೆ ಭೇಟಿ ನೀಡಬಹುದಾಗಿದೆ.

Views: 70

Leave a Reply

Your email address will not be published. Required fields are marked *