ಡಿ.21ರಂದು ನಿವೃತ್ತ ಮುಖ್ಯ ಇಂಜಿನೀಯರ್ ಕೆ.ಜಿ. ಜಗದೀಶ್ ಅವರಿಗೆ ಜಿಲ್ಲಾ ಮಾದಿಗ ನೌಕರರ ಸಾಂಸ್ಕೃತಿಕ ಸಂಘದಿಂದ ಭವ್ಯ ಸನ್ಮಾನ.

ಚಿತ್ರದುರ್ಗ:

ನೌಕರರ ಸ್ನೇಹಿ ಹಾಗೂ ಜನಪ್ರಿಯ ಅಧಿಕಾರಿಯಾಗಿ ಖ್ಯಾತಿ ಪಡೆದಿರುವ ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ವಲಯದ ನಿವೃತ್ತ ಮುಖ್ಯ ಇಂಜಿನೀಯರ್ ಕೆ.ಜಿ. ಜಗದೀಶ್ ಅವರು ಸೇವೆಯಿಂದ ನಿವೃತ್ತಿ ಹೊಂದಿರುವ ಹಿನ್ನೆಲೆಯಲ್ಲಿ, ಚಿತ್ರದುರ್ಗ ಜಿಲ್ಲಾ ಮಾದಿಗ ನೌಕರರ ಸಾಂಸ್ಕೃತಿಕ ಸಂಘದ ವತಿಯಿಂದ ಡಿಸೆಂಬರ್ 21ರಂದು ಭವ್ಯ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಚಿತ್ರದುರ್ಗದ ಪ್ರವಾಸಿ ಮಂದಿರದ ಬಳಿಯಿರುವ ಲೀಡ್ಕರ್ ಭವನದಲ್ಲಿ ಬೆಳಿಗ್ಗೆ 11 ಗಂಟೆಗೆ ನಡೆಯುವ ಈ ಸಮಾರಂಭದಲ್ಲಿ, ಜಿಲ್ಲೆಯ ಸಮಸ್ತ ಮಾದಿಗ ನೌಕರರು, ವಿವಿಧ ಸಮಾಜಗಳ ಗಣ್ಯರು, ಚುನಾಯಿತ ಪ್ರತಿನಿಧಿಗಳು, ಜನಪರ ಸಂಘಟನೆಗಳ ಮುಖಂಡರು ಹಾಗೂ ಸಮಾಜದ ಮುಖಂಡರು ಭಾಗವಹಿಸಿ ಕೆ.ಜಿ. ಜಗದೀಶ್ ಅವರನ್ನು ಸನ್ಮಾನಿಸಲಿದ್ದಾರೆ ಎಂದು ಸಂಘದ ಅಧ್ಯಕ್ಷ ಡಿ.ಟಿ. ಶ್ರೀನಿವಾಸ್ ತಿಳಿಸಿದ್ದಾರೆ.

ಕೆ.ಜಿ. ಜಗದೀಶ್ ಅವರು ಚಿತ್ರದುರ್ಗ ಜಿಲ್ಲೆಯಲ್ಲಿ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸಿದ್ದು, ನಾಲ್ಕು ಅವಧಿಗೆ ಸತತವಾಗಿ ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ. ಜಿಲ್ಲೆಯ ಇತಿಹಾಸದಲ್ಲೇ ನೌಕರರ ಸಂಘಟನೆಯನ್ನು ಬಲಪಡಿಸಿದ ಅಪರೂಪದ ನಾಯಕನಾಗಿ ಅವರು ಗುರುತಿಸಿಕೊಂಡಿದ್ದಾರೆ. ಸರ್ಕಾರದ ಮುಖ್ಯ ಇಂಜಿನೀಯರ್ ಹುದ್ದೆಗೆ ಏರಿದ ಸಮಾಜದ ವ್ಯಕ್ತಿಯಾಗಿರುವುದು ನಮಗೆ ಹೆಮ್ಮೆಯ ವಿಷಯವಾಗಿದ್ದು, ಅದಕ್ಕಾಗಿ ಅವರನ್ನು ಅದ್ದೂರಿಯಾಗಿ ಗೌರವಿಸಲಾಗುತ್ತಿದೆ ಎಂದು ಡಿ.ಟಿ. ಶ್ರೀನಿವಾಸ್ ತಿಳಿಸಿದರು.

ಗಣ್ಯರ ಸಾನಿಧ್ಯ, ಗಣ್ಯರ ಉಪಸ್ಥಿತಿ

ಮಾದಾರ ಚೆನ್ನಯ್ಯ ಗುರುಪೀಠದ ಶ್ರೀ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ ಅವರ ದಿವ್ಯ ಸಾನಿಧ್ಯದಲ್ಲಿ ನಡೆಯುವ ಈ ಕಾರ್ಯಕ್ರಮವನ್ನು ಲೋಕಸಭಾ ಸದಸ್ಯ ಗೋವಿಂದ ಎಂ. ಕಾರಜೋಳ ಉದ್ಘಾಟಿಸಲಿದ್ದು, ಜಿಲ್ಲಾ ಮಾದಿಗ ನೌಕರರ ಸಾಂಸ್ಕೃತಿಕ ಸಂಘದ ಅಧ್ಯಕ್ಷ ಡಿ.ಟಿ. ಶ್ರೀನಿವಾಸ್ ಅಧ್ಯಕ್ಷತೆ ವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಮಾಜಿ ಸಚಿವ ಹೆಚ್. ಆಂಜನೇಯ, ಮಾಜಿ ಸಂಸದರು ಎ. ನಾರಾಯಣಸ್ವಾಮಿ, ಬಿ.ಎನ್. ಚಂದ್ರಪ್ಪ, ಆದಿಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ.ಎಸ್. ಮಂಜುನಾಥ್, ಲೀಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ್, ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಪಿ. ರಘು, ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿ ಎಂ. ನಾರಾಯಣಸ್ವಾಮಿ, ಬೆಸ್ಕಾಂ ಮುಖ್ಯ ಇಂಜಿನೀಯರ್ ಎಂ. ರೋಮರಾಜ್, ಕಾರ್ಯಪಾಲಕ ಇಂಜಿನೀಯರ್‌ಗಳಾದ ಎಲ್. ಹನುಮಂತಪ್ಪ, ಆರ್. ನಾಗರಾಜ್, ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ಎಸ್. ವಿನಾಯಕ, ಹಾವೇರಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಸಿ. ಚಂದ್ರಪ್ಪ, ಹೊಳಲ್ಕೆರೆ ಲೋಕೋಪಯೋಗಿ ಇಲಾಖೆ ಸಹಾಯಕ ಇಂಜಿನೀಯರ್ ಕಾಂತರಾಜ್, ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಿವೃತ್ತ ಕಾರ್ಯದರ್ಶಿ ಎಂ. ರೇವಣ್ಣ ಸಿದ್ದಪ್ಪ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ನಿವೃತ್ತ ಅಧಿಕಾರಿ ಡಿ.ಟಿ. ಜಗನ್ನಾಥ್, ವಿಜ್ಞಾನಿಕ ಸಂಶೋಧನಾ ಪರಿಷತ್ ಜಿಲ್ಲಾಧ್ಯಕ್ಷೆ ಬಿ.ಟಿ. ಲೋಲಾಕ್ಷಮ್ಮ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಬಿ.ಎಂ. ಗುರುನಾಥ್ ಸೇರಿದಂತೆ ಹಲವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಮತ್ತೊಂದು ಸನ್ಮಾನ

ಇದೇ ಸಂದರ್ಭದಲ್ಲಿ ನಿವೃತ್ತ ಶಿಕ್ಷಕ ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಮಾಜಿ ಅಧ್ಯಕ್ಷ ಕೆ. ವೀರಣ್ಣ ಅವರನ್ನೂ ಸಹ ಗೌರವಿಸಲಾಗುವುದು.

ಕಾರ್ಯಕ್ರಮಕ್ಕೆ ಕೆ.ಜಿ. ಜಗದೀಶ್ ಅವರ ಅಭಿಮಾನಿಗಳು, ಮಾದಿಗ ಸಮಾಜದ ಬಾಂಧವರು, ನೌಕರರು ಹಾಗೂ ವಿವಿಧ ಸಮಾಜಗಳ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಜಿಲ್ಲಾ ಮಾದಿಗ ನೌಕರರ ಸಾಂಸ್ಕೃತಿಕ ಸಂಘದ ಅಧ್ಯಕ್ಷ ಡಿ.ಟಿ. ಶ್ರೀನಿವಾಸ್ ಮನವಿ ಮಾಡಿದ್ದಾರೆ.

Views: 26

Leave a Reply

Your email address will not be published. Required fields are marked *