ಕಟ್ಟಡ ಕಾರ್ಮಿಕರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸುತ್ತಿಲ್ಲ:ವೈ.ಕುಮಾರ್ ಆಕ್ರೋಶ,ಚಿತ್ರದುರ್ಗದಲ್ಲಿ 9ನೇ ದಿನವೂ ಧರಣಿ.

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817

ಚಿತ್ರದುರ್ಗ ಡಿ. 17

ಜಿಲ್ಲೆಯಲ್ಲಿ ಒಂದು ಲಕ್ಷ 56 ಸಾವಿರದ 188 ನೊಂದಾಯಿತ ಕಟ್ಟಡ ಕಾರ್ಮಿಕರಿದ್ದಾರೆ. ರಾಜ್ಯದಲ್ಲಿ 42 ಲಕ್ಷ ಕಟ್ಟಡ ಕಾರ್ಮಿಕರಿದ್ದರೂ ಸರ್ಕಾರ ಕಾರ್ಮಿಕರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ಅತಿ ದೊಡ್ಡ ದೊಡ್ಡ ಕಾಮಗಾರಿಗಳ ಪರಿವೀಕ್ಷಣೆ ಮತ್ತು ಸುಂಕ ಸಂಗ್ರಹಣಾಧಿಕಾರಿಯೆಂದು ಕಾರ್ಮಿಕ ಅಧಿಕಾರಿಗಳಿಗೆ ಜವಾಬ್ದಾರಿ ವಹಿಸಿದ್ದರೂ ಇದುವರೆವಿಗೂ ಯಾರು ತಮ್ಮ ಅಧಿಕಾರವನ್ನು ಚಲಾಯಿಸಿ ಕಟ್ಟಡ ಕಾರ್ಮಿಕರ ಕಷ್ಟಗಳನ್ನು ಆಲಿಸುತ್ತಿಲ್ಲ ಎಂದು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕ್ಷೇಮಾಭಿವೃದ್ದಿ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ವೈ.ಕುಮಾರ್ ಆಪಾದಿಸಿದರು.

ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಕಾರ್ಮಿಕ ಇಲಾಖೆ ಅಧಿಕಾರಿಗಳ ಕಚೇರಿ ಎದುರು ಕಳೆದ ಒಂಬತ್ತು ದಿನಗಳಿಂದಲೂ ಧರಣಿ ನಡೆಸುತ್ತಿರುವ ವೈ.ಕುಮಾರ್ ಮಾತನಾಡುತ್ತ ಚಿತ್ರದುರ್ಗ ಜಿಲ್ಲೆಯಲ್ಲಿ ಒಂದು ಲಕ್ಷ 56 ಸಾವಿರದ 188 ನೊಂದಾಯಿತ ಕಟ್ಟಡ ಕಾರ್ಮಿಕರಿದ್ದಾರೆ. ರಾಜ್ಯದಲ್ಲಿ 42 ಲಕ್ಷ ಕಟ್ಟಡ ಕಾರ್ಮಿಕರಿದ್ದರೂ ಸರ್ಕಾರ ಕಾರ್ಮಿರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ಗುತ್ತಿಗೆದಾರರು, ನಿಯೋಜಕರು, ಮನೆ ಮಾಲಿಕರು ಕಾಮಗಾರಿ ಆರಂಭೊಂಡ ದಿನದಿಂದ ಮುಕ್ತಾಯಗೊಂಡರು ಯಾರು ಸೆಸ್ ಪಾವತಿಸಿಲ್ಲವೋ ಅಂತಹವರಿಗೆ ಶೇ. 2 ರಂತೆ ಬಡ್ಡಿ ವಿಧಿಸಬೇಕೆಂಬ ಕಾನೂನಿದ್ದರೂ ಪ್ರಯೋಜನ ವಿಲ್ಲದಂತಾಗಿದೆ. ಇದರಿಂದ ಸೆಸ್‍ನಿಂದ ತಪ್ಪಿಸಿಕೊಳ್ಳುತ್ತಿರುವವರು ನಿಜವಾದ ನೊಂದಾಯಿತ ಕಟ್ಟಡ ಕಾರ್ಮಿಕರಿಗೆ ಅನ್ಯಾಯವೆಸಗುತ್ತಿದ್ದಾರೆ. ಪಿಂಚಣಿ ಸಿಗುತ್ತಿಲ್ಲ. ಹಲವಾರು ಸೌಲಭ್ಯಗಳು ಕೈತಪ್ಪಿ ಹೋಗುತ್ತಿವೆ ಎಂದು ವೈ.ಕುಮಾರ್ ನೊಂದಾಯಿತ ಕಟ್ಟಡ ಕಾರ್ಮಿಕರ ಸಮಸ್ಯೆಗಳನ್ನು ಹೇಳಿಕೊಂಡರು.

ನೊಂದಾಯಿತ ಕಟ್ಟಡ ಕಾರ್ಮಿಕರ ಸಾಕಷ್ಟು ಸಮಸ್ಯೆಗಳ ನಿವಾರಣೆಗಾಗಿ ಆಯೋಗ ಹಾಗೂ ಸೆಸ್ ವಸೂಲಿ ಪ್ರಾಧಿಕಾರ ರಚಿನೆಯಾಗಬೇಕು. ಇದಕ್ಕೆ ಸಂಬಂಧಿಸಿದಂತೆ ಕಾರ್ಮಿಕ ಸಚಿವರು ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಚರ್ಚಿಸಬೇಕೆಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದು, ದಿನಾಂಕ : 18-1-2007 ರ ಪ್ರಕಾರ ಅತಿ ದೊಡ್ಡ ದೊಡ್ಡ ಕಾಮಗಾರಿಗಳ ಪರಿವೀಕ್ಷಣೆ ಮತ್ತು ಸುಂಕ ಸಂಗ್ರಹಣಾದಿ üಕಾರಿಯೆಂದು ಕಾರ್ಮಿಕ ಆಯುಕ್ತರು, ಉಪ ಕಾರ್ಮಿಕ ಆಯುಕ್ತರು, ಸಹಾಯಕ ಕಾರ್ಮಿಕ ಆಯುಕ್ತರು, ಕಾರ್ಮಿಕ ಅಧಿಕಾರಿಗಳಿಗೆ ಜವಾಬ್ದಾರಿ ವಹಿಸಿದ್ದರೂ ಇದುವರೆವಿಗೂ ಯಾರು ತಮ್ಮ ಅಧಿಕಾರವನ್ನು ಚಲಾಯಿಸಿ ಕಟ್ಟಡ ಕಾರ್ಮಿಕರ ಕಷ್ಟಗಳನ್ನು ಆಲಿಸುತ್ತಿಲ್ಲ ಎಂದು ಆಪಾದಿಸಿದರು.

ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕ್ಷೇಮಾಭಿವೃದ್ದಿ ಸಂಘದ ರಾಜ್ಯಾಧ್ಯಕ್ಷ ಜೆ.ಮಂಜುನಾಥ್, ಡಿ.ಈಶ್ವರಪ್ಪ, ಆರ್.ಗೌಸ್‍ಪೀರ್, ನರಸಿಂಹಮೂರ್ತಿ ಗೌಸ್‍ಖಾನ್, ರಫೀಕ್, ತಿಮ್ಮಯ್ಯ ಇನ್ನು ಅನೇಕರು ಹಾಜರಿದ್ದರು.

Views: 83

Leave a Reply

Your email address will not be published. Required fields are marked *