ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ಚಿತ್ರದುರ್ಗ, ಡಿ. 27:
ಜಿಲ್ಲೆಯ ಪ್ರತಿಷ್ಠಿತ ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಯಲ್ಲಿ ಮುಂದಿನ ವರ್ಷ ನಡೆಯಲಿರುವ ‘ಡೆಸ್ಟಿನಿ–2026’ ಕಾರ್ಯಕ್ರಮದ ಅಂಗವಾಗಿ ಲೋಗೋ ಲಾಂಚ್ ಹಾಗೂ ಯತ್ನಿಕ್ (ಡೇ) ಕಾರ್ಯಕ್ರಮದ ಅಧಿಕೃತ ಬಿಡುಗಡೆ ಸಮಾರಂಭವನ್ನು ಶನಿವಾರ ಶಾಲಾ ಆವರಣದಲ್ಲಿ ಅತ್ಯಂತ ಅದ್ದೂರಿಯಾಗಿ ಆಯೋಜಿಸಲಾಯಿತು.
ಪೂರ್ವ ಪ್ರಾಥಮಿಕದಿಂದ ಪ್ರೌಢಶಾಲೆವರೆಗೆ, ಪದವಿ ಪೂರ್ವ, ಪದವಿ, ನರ್ಸಿಂಗ್, ಫಾರ್ಮಸಿ ಹಾಗೂ ಪ್ರಕೃತಿ ಆಯುರ್ವೇದಿಕ್ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳು ಸೇರಿದಂತೆ ವಿವಿಧ ವಿಭಾಗಗಳ ಪ್ರಾಂಶುಪಾಲರು ಮತ್ತು ಶಿಕ್ಷಕರು ಬಣ್ಣ ಬಣ್ಣದ ವಸ್ತ್ರಧಾರಿಗಳಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಂಭ್ರಮಕ್ಕೆ ಸಾಕ್ಷಿಯಾದರು.
ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿಗಳಾದ ಶ್ರೀಮತಿ ಚಂದ್ರಕಲಾ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಸಿ. ರಘು ಚಂದನ್ ಹಾಗೂ ಅವರ ಕುಟುಂಬದ ಸದಸ್ಯರು ಸಾಮೂಹಿಕವಾಗಿ ಡೆಸ್ಟಿನಿ ಲೋಗೋ ಲಾಂಚ್ ಮಾಡಿ, 2026ರ ಜನವರಿ 10ರಿಂದ 13ರವರೆಗೆ ನಡೆಯಲಿರುವ ಕಾರ್ಯಕ್ರಮಕ್ಕೆ ಅಧಿಕೃತ ಚಾಲನೆ ನೀಡಿದರು.

ಕಾರ್ಯಕ್ರಮದ ನಂತರ ಡಿಜೆ ಸಂಗೀತಕ್ಕೆ ಸುಮಾರು ಮೂರು ಗಂಟೆಗಳ ಕಾಲ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪ್ರಾಂಶುಪಾಲರು ವಿವಿಧ ಶೈಲಿಯ ನೃತ್ಯಗಳಲ್ಲಿ ತೊಡಗಿ ಸಂಭ್ರಮವನ್ನು ಹಂಚಿಕೊಂಡರು. ಈ ಸಮಾರಂಭವು ಸಂಸ್ಥೆಯ ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಿಗೆ ಹೊಸ ಉತ್ಸಾಹ ನೀಡಿತು.
Views: 61