India Women vs Sri Lanka Women: ಶ್ರೀಲಂಕಾ ವಿರುದ್ಧದ ನಾಲ್ಕನೇ ಪಂದ್ಯದಲ್ಲೂ ಭಾರತ ತಂಡ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್ಗಳಲ್ಲಿ 221 ರನ್ ಕಲೆಹಾಕಿದ್ದರು. ಈ ಗುರಿ ಬೆನ್ನತ್ತಿದ ಶ್ರೀಲಂಕಾ 191 ರನ್ಗಳಿಸಲಷ್ಟೇ ಶಕ್ತರಾಗಿದ್ದರು. ಈ ಮೂಲಕ ಭಾರತ ತಂಡ 30 ರನ್ಗಳ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ ಸ್ಮೃತಿ ಮಂಧಾನ ವಿಶೇಷ ವಿಶ್ವ ದಾಖಲೆ ಬರೆದು ಎಲ್ಲರ ಗಮನ ಸೆಳೆದಿದ್ದಾರೆ.
ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಟೀಮ್ ಇಂಡಿಯಾ ಆಟಗಾರ್ತಿ ಸ್ಮೃತಿ ಮಂಧಾನ (Smriti Mandhana) ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಅತೀ ವೇಗವಾಗಿ ರನ್ಗಳಿಸುವ ಮೂಲಕ. ಈ ವೇಗದೊಂದಿಗೆ ಸ್ಮೃತಿ ಮುರಿದಿರುವುದು ಟೀಮ್ ಇಂಡಿಯಾ ಲೆಜೆಂಡ್ ಮಿಥಾಲಿ ರಾಜ್ ಅವರ ದಾಖಲೆಯನ್ನು ಎಂಬುದು ವಿಶೇಷ.
ತಿರುವನಂತಪುರದ ಗ್ರೀನ್ಫೀಲ್ಡ್ ಮೈದಾನದಲ್ಲಿ ನಡೆದ ಶ್ರೀಲಂಕಾ ವಿರುದ್ಧದ 4ನೇ ಟಿ20 ಪಂದ್ಯದಲ್ಲಿ ಆರಂಭಿಕಗಳಾಗಿ ಕಣಕ್ಕಿಳಿದ ಸ್ಮೃತಿ ಮಂಧಾನ ಕೇವಲ 48 ಎಸೆತಗಳಲ್ಲಿ 3 ಭರ್ಜರಿ ಸಿಕ್ಸ್ ಹಾಗೂ 11 ಫೋರ್ಗಳೊಂದಿಗೆ ಸ್ಫೋಟಕ 80 ರನ್ ಬಾರಿಸಿದ್ದರು. ಈ 80 ರನ್ಗಳೊಂದಿಗೆ ಸ್ಮೃತಿ ಮಂಧಾನ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 10000 ರನ್ ಪೂರೈಸಿದ್ದಾರೆ. ಈ ಮೂಲಕ ಮಹಿಳಾ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತೀ ವೇಗವಾಗಿ 10 ಸಾವಿರ ರನ್ ಗಳಿಸಿದ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ಇದಕ್ಕೂ ಮುನ್ನ ಈ ಭರ್ಜರಿ ದಾಖಲೆ ಟೀಮ್ ಇಂಡಿಯಾದ ಮಾಜಿ ನಾಯಕಿ ಮಿಥಾಲಿ ರಾಜ್ ಅವರ ಹೆಸರಿನಲ್ಲಿತ್ತು. ಮಿಥಾಲಿ 291 ಇನಿಂಗ್ಸ್ಗಳ ಮೂಲಕ ಇಂಟರ್ನ್ಯಾಷನಲ್ ಕ್ರಿಕೆಟ್‌ನಲ್ಲಿ 10000 ರನ್ ಕಲೆಹಾಕಿದ್ದರು. ಈ ಮೂಲಕ ಮಹಿಳಾ ಕ್ರಿಕೆಟ್‌ನಲ್ಲಿ ಅತೀ ಕಡಿಮೆ ಇನಿಂಗ್ಸ್ಗಳಲ್ಲಿ 10 ಸಾವಿರ ರನ್ ಪೂರೈಸಿದ ಬ್ಯಾಟರ್ ಎನಿಸಿಕೊಂಡಿದ್ದರು.
ಇದೀಗ ಈ ದಾಖಲೆಯನ್ನು ಸ್ಮೃತಿ ಮಂಧಾನ ಅಳಿಸಿ ಹಾಕಿದ್ದಾರೆ. ಸ್ಮೃತಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 10 ಸಾವಿರ ರನ್ಗಳನ್ನು ಪೂರೈಸಲು ತೆಗದುಕೊಂಡಿರುವುದು ಕೇವಲ 281 ಇನಿಂಗ್ಸ್ಗಳನ್ನು ಮಾತ್ರ. ಈ ಮೂಲಕ ವುಮೆನ್ಸ್ ಇಂಟರ್ನ್ಯಾಷನಲ್ ಕ್ರಿಕೆಟ್‌ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಿಸುವಲ್ಲಿ ಸ್ಮೃತಿ ಮಂಧಾನ ಯಶಸ್ವಿಯಾಗಿದ್ದಾರೆ.
Views: 17