India Playing 11: ಟೀಮ್ ಇಂಡಿಯಾ ಪ್ಲೇಯಿಂಗ್ 11 ನಲ್ಲಿ 2 ಬದಲಾವಣೆ ಬಹುತೇಕ ಖಚಿತ

India Playing 11 for 3rd T20 vs New Zealand

India vs New Zealand 3rd T20: ಭಾರತ-ನ್ಯೂಜಿಲೆಂಡ್ ನಡುವಣ ಮೂರನೇ ಟಿ20 ಪಂದ್ಯವು ನಾಳೆ (ಫೆಬ್ರವರಿ 1) ನಡೆಯಲಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಸರಣಿ ನಿರ್ಣಾಯಕ. ಮೂರು ಪಂದ್ಯಗಳ ಸರಣಿಯ ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವು 21 ರನ್​ಗಳಿಂದ ಜಯ ಸಾಧಿಸಿದರೆ, 2ನೇ ಪಂದ್ಯವನ್ನು ಟೀಮ್ ಇಂಡಿಯಾ 6 ವಿಕೆಟ್​ಗಳಿಂದ ಗೆದ್ದುಕೊಂಡಿತ್ತು. ಇದೀಗ ಮೂರನೇ ಪಂದ್ಯವು ಫೈನಲ್ ಫೈಟ್ ಆಗಿ ಮಾರ್ಪಟ್ಟಿದೆ. ಹೀಗಾಗಿ ಉಭಯ ತಂಡಗಳಿಂದ ರೋಚಕ ಹೋರಾಟವನ್ನು ನಿರೀಕ್ಷಿಸಬಹುದು.

ಅದರಲ್ಲೂ ಕಳೆದ ಪಂದ್ಯದಲ್ಲಿ ತಿಣಕಾಡಿ ಜಯ ಸಾಧಿಸಿದ್ದ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ನಲ್ಲಿ ಬದಲಾವಣೆ ಕಂಡು ಬರುವುದು ಖಚಿತ ಎಂದೇ ಹೇಳಬಹುದು. ಏಕೆಂದರೆ ಕಳೆದ 2 ಪಂದ್ಯಗಳಲ್ಲಿ ಭಾರತ ತಂಡದ ಆರಂಭಿಕರು ವಿಫಲರಾಗಿದ್ದಾರೆ. ಹೀಗಾಗಿ ಮೂರನೇ ಪಂದ್ಯದಲ್ಲಿ ಶುಭ್​ಮನ್ ಗಿಲ್ ಅಥವಾ ಇಶಾನ್ ಕಿಶನ್ ಬದಲಿಗೆ ಪೃಥ್ವಿ ಶಾ ಅವಕಾಶ ಪಡೆಯಬಹುದು.

ಇನ್ನು ಕಳೆದ ಪಂದ್ಯದಂತೆ ಈ ಬಾರಿ ಕೂಡ ಟೀಮ್ ಇಂಡಿಯಾ ಮೂವರು ಆಲ್​ರೌಂಡರ್​ ಒಳಗೊಂಡಂತೆ ಒಟ್ಟು 7 ಬೌಲರ್​ಗಳೊಂದಿಗೆ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚು. ಏಕೆಂದರೆ ಅಹಮದಾಬಾದ್ ಪಿಚ್ ಕೂಡ ಸ್ಪಿನ್ ಬೌಲರ್​ಗಳಿಗೆ ಹೆಚ್ಚಿನ ನೆರವು ನೀಡುತ್ತದೆ. ಹೀಗಾಗಿ ಉಮ್ರಾನ್ ಮಲಿಕ್ ಬದಲಿಗೆ ಈ ಪಂದ್ಯದಲ್ಲೂ ಯುಜ್ವೇಂದ್ರ ಚಹಾಲ್ ಪ್ಲೇಯಿಂಗ್ ಇಲೆವೆನ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ.

Also Read: ICC Rankings 2023: ಐಸಿಸಿ ರ‍್ಯಾಂಕಿಂಗ್​ನಲ್ಲಿ ಟೀಮ್ ಇಂಡಿಯಾದ ಮೂವರು ನಂಬರ್ 1

ಅದರಂತೆ ಆರಂಭಿಕರಾಗಿ ಪೃಥ್ವಿ ಶಾ ಹಾಗೂ ಇಶಾನ್ ಕಿಶನ್ ಇನಿಂಗ್ಸ್ ಆರಂಭಿಸಬಹುದು. ಹಾಗೆಯೇ ಮೂರನೇ ಕ್ರಮಾಂಕದಲ್ಲಿ ರಾಹುಲ್ ತ್ರಿಪಾಠಿ ಆಡಿದರೆ, 4ನೇ ಕ್ರಮಾಂಕದಲ್ಲಿ ಸೂರ್ಯಕುಮಾರ್ ಯಾದವ್ ಕಣಕ್ಕಿಳಿಯಲಿದ್ದಾರೆ. ಇನ್ನು 5ನೇ ಕ್ರಮಾಂಕದಲ್ಲಿ ಹಾರ್ದಿಕ್ ಪಾಂಡ್ಯ, 6ನೇ ಕ್ರಮಾಂಕದಲ್ಲಿ ದೀಪಕ್ ಹೂಡಾ ಬ್ಯಾಟ್ ಬೀಸಲಿದ್ದಾರೆ. ಹಾಗೆಯೇ ಕ್ರಮಾಂಕದಲ್ಲಿ ವಾಷಿಂಗ್ಟನ್ ಸುಂದರ್ ಆಡಬಹುದು.

ಇನ್ನುಳಿದಂತೆ ಬೌಲರ್​ಗಳಾಗಿ ಶಿವಂ ಮಾವಿ, ಅರ್ಷದೀಪ್ ಸಿಂಗ್, ಯುಜ್ವೇಂದ್ರ ಚಹಾಲ್ ಹಾಗೂ ಕುಲ್ದೀಪ್ ಯಾದವ್ ಪ್ಲೇಯಿಂಗ್ ಇಲೆವೆನ್​ನಲ್ಲಿ ಸ್ಥಾನ ಪಡೆಯಬಹುದು. ಅದರಂತೆ ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಹೀಗಿರಲಿದೆ…

  1. ಇಶಾನ್ ಕಿಶನ್
  2. ಪೃಥ್ವಿ ಶಾ
  3. ರಾಹುಲ್ ತ್ರಿಪಾಠಿ
  4. ಸೂರ್ಯಕುಮಾರ್ ಕುಮಾರ್
  5. ಹಾರ್ದಿಕ್ ಪಾಂಡ್ಯ
  6. ದೀಪಕ್ ಹೂಡಾ
  7. ವಾಷಿಂಗ್ಟನ್ ಸುಂದರ್
  8. ಶಿವಂ ಮಾವಿ
  9. ಅರ್ಷದೀಪ್ ಸಿಂಗ್
  10. ಯುಜ್ವೇಂದ್ರ ಚಹಾಲ್
  11. ಕುಲ್ದೀಪ್ ಯಾದವ್

ಟೀಮ್ ಇಂಡಿಯಾ ಟಿ20 ತಂಡ:

ಹಾರ್ದಿಕ್ ಪಾಂಡ್ಯ (ನಾಯಕ), ಶುಭಮನ್ ಗಿಲ್, ಇಶಾನ್ ಕಿಶನ್, ಪೃಥ್ವಿ ಶಾ, ಸೂರ್ಯಕುಮಾರ್ ಯಾದವ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ರುತುರಾಜ್ ಗಾಯಕ್ವಾಡ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಾಹಲ್, ಕುಲದೀಪ್ ಯಾದವ್, ಅರ್ಷದೀಪ್​ ಸಿಂಗ್, ಶಿವಂ ಮಾವಿ, ಉಮ್ರಾನ್ ಮಲಿಕ್.

 

 

source https://tv9kannada.com/sports/cricket-news/india-playing-11-for-3rd-t20-vs-new-zealand-kannada-news-zp-au50-512017.html

Leave a Reply

Your email address will not be published. Required fields are marked *