ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ಚಿತ್ರದುರ್ಗ, ಜ. 08
ಅಯ್ಯಪ್ಪ ಸ್ವಾಮಿಯ ಮಾಲೆ ಧರಿಸಿ ಇರುಮುಡಿ ಹೊತ್ತುಕೊಂಡು ಕೇರಳದ ಶಬರಿಮಲೆಗೆ ಹೋಗಲು ಸಾಧ್ಯವಾಗದೆ ಉಳಿದಿರುವ ಭಕ್ತಾದಿಗಳಿಗೆ, ಕರ್ನಾಟಕದ ಎರಡನೇ ಶಬರಿಮಲೆ ಎಂದು ಪ್ರಸಿದ್ಧಿ ಪಡೆದಿರುವ ಚಿತ್ರದುರ್ಗದ ಮದೆಹಳ್ಳಿ ರಸ್ತೆಯಲ್ಲಿರುವ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಸುವರ್ಣ ಅವಕಾಶವನ್ನು ಕಲ್ಪಿಸಲಾಗಿದೆ ಎಂದು ಕರ್ನಾಟಕ ಅಯ್ಯಪ್ಪ ಸ್ವಾಮಿ ಅನ್ನ ಪ್ರಸಾದ ಸಮಿತಿ ಅಧ್ಯಕ್ಷ ಶರಣ್ ಕುಮಾರ್ ತಿಳಿಸಿದ್ದಾರೆ.
ಜನವರಿ 13ರಂದು ವಿಶೇಷ ಮೆರವಣಿಗೆ
ಜನವರಿ 13-01-2026 ಮಂಗಳವಾರ ಬೆಳಗ್ಗೆಯಿಂದ ಸಂಜೆ 4 ಗಂಟೆಯೊಳಗೆ ಭಕ್ತರು ಇರುಮುಡಿ ಕಟ್ಟಿಸಿಕೊಂಡು ಅಯ್ಯಪ್ಪ ಸ್ವಾಮಿ ದೇವರ ಆಭರಣಗಳೊಂದಿಗೆ ಮೆರವಣಿಗೆಯಲ್ಲಿ ಭಾಗವಹಿಸಬಹುದು. ನೀಲಕಂಠೇಶ್ವರ ದೇವಸ್ಥಾನದಿಂದ ಆರಂಭವಾಗುವ ಮೆರವಣಿಗೆ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ತಲುಪಿ, ಇರುಮುಡಿ ಸಮೇತ 18 ಮೆಟ್ಟಿಲು ಹತ್ತಿ ಸ್ವಾಮಿಯ ದರ್ಶನ ಪಡೆಯುವ ಅಪೂರ್ವ ಅವಕಾಶ ನೀಡಲಾಗಿದೆ.
ಜನವರಿ 14ರಂದು ಇರುಮುಡಿ ಸಮೇತ ದರ್ಶನ
ಜನವರಿ 14-01-2026 ರಂದು ಬೆಳಿಗ್ಗೆ 6 ಗಂಟೆಯಿಂದ 10 ಗಂಟೆಯವರೆಗೆ ಅಯ್ಯಪ್ಪ ಸ್ವಾಮಿ ದೇವರ ಮಾಲೆ ಧರಿಸಿ ಇರುಮುಡಿ ಸಮೇತ ದರ್ಶನ ಮಾಡಲು ದೇವಸ್ಥಾನ ವತಿಯಿಂದ ವಿಶೇಷ ವ್ಯವಸ್ಥೆ ಮಾಡಲಾಗಿದೆ.
ಸಾವಿರಾರು ಭಕ್ತರಿಂದ ದರ್ಶನ
ಈ ವರ್ಷ ಕರ್ನಾಟಕದ ವಿವಿಧ ಭಾಗಗಳಿಂದ ಸಾವಿರಾರು ಅಯ್ಯಪ್ಪ ಸ್ವಾಮಿಗಳು ಮಾಲೆ ಧರಿಸಿ ಇರುಮುಡಿ ಹೊತ್ತುಕೊಂಡು ಚಿತ್ರದುರ್ಗದ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ. ಹಿಂದಿನ ವರ್ಷಗಳಿಗೆ ಹೋಲಿಸಿದರೆ ಈ ಬಾರಿ ಭಕ್ತರ ಸಂಖ್ಯೆಯಲ್ಲಿ ಗಣನೀಯ ಏರಿಕೆ ಕಂಡುಬಂದಿದೆ.
ಭಕ್ತರಿಗೆ ಮನವಿ
ಈ ಸುವರ್ಣ ಅವಕಾಶವನ್ನು ಭಕ್ತಾದಿಗಳು ಸದುಪಯೋಗಪಡಿಸಿಕೊಳ್ಳಬೇಕೆಂದು ಕರ್ನಾಟಕ ಅಯ್ಯಪ್ಪ ಸ್ವಾಮಿ ಅನ್ನ ಪ್ರಸಾದ ಸಮಿತಿ ಅಧ್ಯಕ್ಷ ಶರಣ್ ಕುಮಾರ್ ಹಾಗೂ ಕಾರ್ಯದರ್ಶಿ ಎಂ.ಪಿ. ವೆಂಕಟೇಶ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕ
- ಕಾರ್ಯದರ್ಶಿ: 9342310469
- ಮ್ಯಾನೇಜರ್: 8880188188
Views: 19