ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ಚಿತ್ರದುರ್ಗ ಜ. 16
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ಆರ್) ಸಿರಿಗೆರೆ ಸಿರಿಗೆರೆ ತಾಲ್ಲೂಕು, ಪ್ರಗತಿ ಬಂಧು ಸ್ವ-ಸಹಾಯ ಸಂಘಗಳು, ಒಕ್ಕೂಟ, ಮಾಳಪ್ಪನಹಟ್ಟಿ ವಲಯ ಇವರ ಸಹಯೋಗದೊಂದಿಗೆ ಸಾಮೂಹಿಕ ಗಣ ಹೋಮ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮವೂ ಜ. 17ರ ಶನಿವಾರ ಮಾಳಪ್ಪನ ಹಟ್ಟಿಯ ಶ್ರೀ ಮೈಲಾರಲಿಂಗೇಶ್ವರಸ್ವಾಮಿ ದೇವಸ್ಥಾನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಿರಿಗೆರೆ ತಾಲ್ಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್‍ನ ಯೋಜನಾಧಿಕಾರಿ ರವಿಚಂದ್ರ ತಿಳಿಸಿದ್ದಾರೆ.
ಬೆಳಿಗ್ಗೆ 7 ಗಂಟೆಯಿಂದ ಸಾಮೂಹಿಕ ಗಣ ಹೋಮ ನಡೆಯಲಿದ್ದು ಮಧ್ಯಾಹ್ನ 10.30ಕ್ಕೆ ಸಭಾ ಕಾರ್ಯಕ್ರಮ ನಡೆಯಲಿದ್ದು, ಶಾಸಕರಾದ ಕೆ.ಸಿ.ವಿರೇಂದ್ರ ಪಪ್ಪಿ ಉದ್ಘಾಟನೆ ಮಾಡಲಿದ್ದಾರೆ. ಧಾರ್ಮಿಕ ಉಪನ್ಯಾಸವನ್ನು ಜಿಲ್ಲಾ ಶರಣ ಸಾಹಿತ್ಯ ಪರಿಷತ್‍ನ ಕಾರ್ಯದರ್ಶಿಗಳಾದ ಹುರುಳಿ ಬಸವರಾಜ್ ನಡೆಸಿಕೊಡಲಿದ್ದಾರೆ. ಚೋಳಗಟ್ಟಾ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾದ ಶ್ರೀಮತಿ. ನಿರ್ಮಲಾ ದೇವರಾಜ್ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್‍ನ ನಿರ್ದೇಶಕರಾದ ಕಮಲಾಕ್ಷ, ಮಾಳಪ್ಪನಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯರಾದ ಆರ್.ಸುರೇಶ್ ಉಗ್ರಾಣ, ಚಂದ್ರಣ್ಣ, ಗ್ರಾಮದ ಮುಖಂಡರಾದ ಎಸ್. ಗುರುಸ್ವಾಮಿ ಮಾಳಪ್ಪನಹಳ್ಳಿ ವಲಯದ ಪ್ರಗತಿಬಂಧು ಸ್ವ-ಸಹಾಯ ಸಂಘಗಳು, ಒಕ್ಕೂಟ ಮತ್ತು ಪೂಜಾ ಸಮಿತಿ ಅಧ್ಯಕ್ಷರಾದ ಶ್ರೀಮತಿ ಮಂಜುಳ ಭಾಗವಹಿಸಲಿದ್ದಾರೆ.
Views: 90