ಜ.17ರಂದು ವಿದ್ಯಾವಿಕಾಸ ವಿದ್ಯಾಸಂಸ್ಥೆಯ 37ನೇ ವರ್ಷದ ಶಾಲಾ ವಾರ್ಷಿಕೋತ್ಸವ.
ಚಿತ್ರದುರ್ಗ:
ಚಿತ್ರದುರ್ಗ ನಗರದ ವಿದ್ಯಾವಿಕಾಸ ವಿದ್ಯಾಸಂಸ್ಥೆ ವತಿಯಿಂದ ಇದೇ ಜನವರಿ 17ರಂದು ಸಂಜೆ 4.30ಕ್ಕೆ ನಗರದ ಚಳ್ಳಕೆರೆ ರಸ್ತೆಯಲ್ಲಿರುವ ಎಸ್.ಜಿ. ಕಲ್ಯಾಣ ಮಂಟಪದಲ್ಲಿ “ವಿದ್ಯಾವಿಕಾಸ ವಿದ್ಯಾಸಂಸ್ಥೆಯ ಶಾಲಾ ವಾರ್ಷಿಕೋತ್ಸವ – 37ನೇ ವರ್ಷಾಚರಣೆಯ ವಿಜಯೋತ್ಸವ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಭಾಗವಹಿಸಲಿದ್ದು, ಗೌರವ ಅತಿಥಿಗಳಾಗಿ ಧಾರವಾಡದ ವಿಸ್ತಾರ್ ಜಿಂದಗಿ ಹ್ಯೂಮನ್ ಮೈಂಡ್ಸೆಟ್ ಕೋಚ್ ಮಹೇಶ್ ಮಸಾಲ್ ಹಾಗೂ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಂ.ಆರ್. ಮಂಜುನಾಥ್ ಉಪಸ್ಥಿತರಿರಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿದ್ಯಾವಿಕಾಸ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಬಿ. ವಿಜಯ ಕುಮಾರ್ ವಹಿಸಲಿದ್ದಾರೆ. ಈ ಸಂದರ್ಭದಲ್ಲಿ ವಿದ್ಯಾವಿಕಾಸ ವಿದ್ಯಾಸಂಸ್ಥೆಯ ನಿರ್ದೇಶಕಿ ಸುನೀತಾ ವಿಜಯ ಕುಮಾರ್, ವ್ಯವಸ್ಥಾಪಕ ನಿರ್ದೇಶಕ ಎಸ್.ಎಂ. ಪೃಥ್ವೀಶ, ಪ್ರಾಂಶುಪಾಲ ಪಿ. ಬಸವರಾಜಯ್ಯ ಹಾಗೂ ಮುಖ್ಯ ಶಿಕ್ಷಕ ಎನ್.ಜಿ. ತಿಪ್ಪೇಸ್ವಾಮಿ ಉಪಸ್ಥಿತರಿರಲಿದ್ದಾರೆ.
ವಿಜಯೋತ್ಸವ ಕಾರ್ಯಕ್ರಮದ ಅಂಗವಾಗಿ ವಿದ್ಯಾವಿಕಾಸ ವಿದ್ಯಾಸಂಸ್ಥೆಯ ಹಳೆಯ ವಿದ್ಯಾರ್ಥಿ ಹಾಗೂ ವಿಶೇಷ ಸಾಧನೆ ಮಾಡಿದ ನ್ಯೂರೋಲಾಜಿಸ್ಟ್ ಡಾ. ಕಿರಣ್ ಗೌಡ ಅವರಿಗೆ ಹಾಗೂ ಹಿಂದಿನ ವರ್ಷಗಳಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವಿದ್ಯಾವಿಕಾಸ ಸಂಸ್ಥೆಯ ವಿದ್ಯಾರ್ಥಿಗಳಾದ ಕಲ್ಯಾಣ ಬಾಬು, ಹೆಚ್.ವಿ. ಸಮನಾ, ಡಿ.ಎಸ್. ದಿಷಾ ಅವರಿಗೆ “ವಿದ್ಯಾವಿಕಾಸ ರತ್ನ” ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು.
ಕಾರ್ಯಕ್ರಮದ ಅಂತ್ಯದಲ್ಲಿ ಶಾಲೆಯ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ಈ ಕಾರ್ಯಕ್ರಮಕ್ಕೆ ಪಾಲ್ಗೊಳ್ಳುವಂತೆ ವಿದ್ಯಾವಿಕಾಸ ವಿದ್ಯಾಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.
Views: 75