5 ದಿನಗಳ ಬ್ಯಾಂಕಿಂಗ್ ಪದ್ಧತಿ ಜಾರಿಗೆ ಒತ್ತಾಯ: ಚಿತ್ರದುರ್ಗದಲ್ಲಿ ಬ್ಯಾಂಕ್ ನೌಕರರ ಮುಷ್ಕರ.

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817

ಚಿತ್ರದುರ್ಗ ಜ. 27

ಬ್ಯಾಂಕ್ ನೌಕರರ ದಶಕಗಳ 5 ದಿನಗಳ ಬ್ಯಾಂಕಿಂಗ್ ವ್ಯವಸ್ಥೆಯನ್ನು ಜಾರಿಗೊಳಿಸಬೇಕು ಎಂದು ಕೇಂದ್ರ ಸರಕಾರ, ಕೇಂದ್ರ ಹಣಕಾಸು ಸಚಿವಾಲಯ ಹಾಗೂ ಹಣಕಾಸು ಸೇವೆಗಳ ಇಲಾಖೆಯನ್ನು ಒತ್ತಾಯಿಸಿ ಬ್ಯಾಂಕ್ ಕಾರ್ಮಿಕ ಸಂಘಗಳ ಸಂಯುಕ್ತ ವೇದಿಕೆಯ ಕರೆಯ ಮೇರೆಗೆ ಜ 27 ಮಂಗಳವಾರಂದು ಚಿತ್ರದುರ್ಗದ ಸ್ಟೇಟ್‍ಬ್ಯಾಂಕ್‍ಆಪ್‍ಇಂಡಿಯಾ ಮುಂಭಾಗದಲ್ಲಿ ಒಂದು ದಿನದ ಮುಷ್ಕರವನ್ನು ನಡೆಸಲಾಯಿತು.

ಬ್ಯಾಂಕ್ ಉದ್ಯೋಗಿಗಳು 5 ದಿನಗಳ ಬ್ಯಾಂಕಿಂಗ್ ಪದ್ಧತಿ ಜಾರಿಗೆ ಬರಬೇಕು ಎನ್ನುವ ಬೇಡಿಕೆಯ ಕುರಿತಾಗಿ ಈಗಾಗಲೇ ಇಂಡಿಯನ್ ಬ್ಯಾಂಕ್ ಅಸೋಸಿಯೇಷನ್ ಹಾಗೂ ಬ್ಯಾಂಕ್ ಕಾರ್ಮಿಕ ಸಂಘಗಳ ನಡುವೆ ದಿನಾಂಕ 08.03.2024 ರಂದು ಒಪ್ಪಂದವಾಗಿ ಅದರ ಅನುಮೋದನೆಗಾಗಿ ಕೇಂದ್ರ ಹಣಕಾಸು ಸೇವೆಗಳ ಇಲಾಖೆಗೆ ಕಳುಹಿಸಲಾಗಿತ್ತು. ಆದರೆ ಒಪ್ಪಂದವಾಗಿ 2 ವರ್ಷಗಳು ಕಳೆದರೂ, ಈ ಕುರಿತಾಗಿ ಹತ್ತಾರು ಸಭೆಗಳು ನಡೆದರೂ, ಬೇಡಿಕೆ ಈಡೇರಿಸಬೇಕು ಎಂದು ಹಲವಾರು ಪ್ರತಿಭಟನೆಗಳು ನಡೆದಿದ್ದರೂ ಸಹ ಅನಗತ್ಯವಾಗಿ ವಿಳಂಬ ಧೋರಣೆಯನ್ನು ಅನುಸರಿಸಲಾಗುತ್ತಿದೆ. ಬೇಡಿಕೆಯ ಈಡೇರಿಕೆಗಾಗಿ ಈ ಹಿಂದೆ ಅಖಿಲ ಭಾರತ ಬ್ಯಾಂಕ್ ಮುಷ್ಕರಕ್ಕೆ ಕರೆ ಕೊಟ್ಟಂತಹ ಸಂದರ್ಭದಲ್ಲಿ ಕೇಂದ್ರ ಕಾರ್ಮಿಕ ಆಯುಕ್ತರ ಸಮ್ಮುಖದಲ್ಲಿ ಕೇಂದ್ರ ಹಣಕಾಸು ಸೇವೆಗಳ ಇಲಾಖೆಯ ಉನ್ನತಾಧಿಕಾರಿಗಳು ಅತೀ ಶೀಘ್ರವಾಗಿ ಬ್ಯಾಂಕ್ ಉದ್ಯೋಗಿಗಳ ಬೇಡಿಕೆಯನ್ನು ಈಡೇರಿಸುವುದಾಗಿ ಭರವಸೆ ನೀಡಿದ್ದರು. ಅದಾಗಿ ಒಂದು ವರ್ಷವೇ ಕಳೆದಿದ್ದರೂ ಬೇಡಿಕೆ ಇನ್ನೂ ಈಡೇರಿಲ್ಲ. ಈಗ ಬ್ಯಾಂಕ್ ಉದ್ಯೋಗಿಗಳ ಸಹನೆಯ ಕಟ್ಟೆ ಒಡೆದಿದೆ. ಮುಷ್ಕರದ ಹಾದಿ ಅನಿವಾರ್ಯವಾಗಿದೆ ಎಂದಿದ್ದಾರೆ.

ಪ್ರಸ್ತುತ ಬ್ಯಾಂಕ್ ಉದ್ಯೋಗಿಗಳು ಅತೀ ಒತ್ತಡದಲ್ಲಿ ಕೆಲಸ ಮಾಡುತ್ತಿದ್ದಾರೆ. ಹೆಚ್ಚುತ್ತಿರುವ ವ್ಯವಹಾರಕ್ಕೆ ತಕ್ಕನಾಗಿ ನೇಮಕಾತಿ ಉದ್ಯೋಗಿಗಳ ಆಗುತ್ತಿಲ್ಲ. ವಾರದ ದಿನಗಳಲ್ಲಿ ನೌಕರರು ರಾತ್ರಿ ಹತ್ತಾದರೂ ಮನೆಗೆ ಹಿಂತಿರುಗಲು ಸಾಧ್ಯವಾಗುತ್ತಿಲ್ಲ. ಇಂತಹ ಸನ್ನಿವೇಶದಲ್ಲಿ ದಿನಗಳ ಬ್ಯಾಂಕಿಂಗ್ ವ್ಯವಸ್ಥೆ ಜಾರಿಗೆ ಬಂದರೆ ನೌಕರರ ಕಾರ್ಯಕ್ಷಮತೆ ಹೆಚ್ಚಾಗುವುದರಲ್ಲಿ ಸಂಶಯವಿಲ್ಲ. ಇದಲ್ಲದೇ ಕೇಂದ್ರ ಸರಕಾರದ ಅಧೀನದಲ್ಲಿ ಇರುವ ಹಲವಾರು ಇಲಾಖೆಗಳು, ಜೀವ ವಿಮೆ, ಸಾಮಾನ್ಯ ವಿಮೆ, ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ, ಸೆಬಿ, ನಬಾರ್ಡ್ ಮೊದಲಾದ ಇಲಾಖೆಗಳು ವಾರಕ್ಕೆ ಐದು ದಿನ ಮಾತ್ರವೇ ಕೆಲಸ ಮಾಡುತ್ತಿವೆ. ಜಾಗತಿಕ ಮಟ್ಟದಲ್ಲೂ ಬ್ಯಾಂಕುಗಳು 5 ದಿನ ಕೆಲಸ ಮಾಡುವ ವ್ಯವಸ್ಥೆ ಇದೆ. ಹೀಗಿದ್ದರೂ ಸಹ ಕೇಂದ್ರ ಹಣಕಾಸು ಇಲಾಖೆ ಅನಗತ್ಯವಾಗಿ ಕಾಲಹರಣ ಮಾಡಿ ಬ್ಯಾಂಕ್ ಉದ್ಯೋಗಿಗಳ ನ್ಯಾಯಯುತವಾದ ಬೇಡಿಕೆಗಳನ್ನು ಈಡೇರಿಸುವಲ್ಲಿ ಸೋತಿದೆ. ಆದ್ದರಿಂದ ಅನಿವಾರ್ಯವಾಗಿ ಇಂದು ದೇಶದಾದ್ಯಂತ ಬ್ಯಾಂಕ್ ಮುಷ್ಕರ ನಡೆಸಲಾಗುತ್ತಿದೆ ಎಂದಿದ್ದಾರೆ.

ಬ್ಯಾಂಕ್ ನೌಕರರು ಮತ್ತು ಅಧಿಕಾರಿಗಳು ಮುಷ್ಕರದಲ್ಲಿ ಪಾಲ್ಗೊಂಡು, ಬೀದಿಗಿಳಿದು ಸರಕಾರದ ವಿಳಂಬ ಧೋರಣೆಯ ವಿರುದ್ಧ ಪ್ರತಿಭಟಿಸಲಿದ್ದಾರೆ. ಜ27ರ ಬ್ಯಾಂಕ್ ಮುಷ್ಕರವು ಸಾರ್ವಜನಿಕರಿಗೆ ಬ್ಯಾಂಕ್ ಸೇವೆಯಲ್ಲಿ ವ್ಯತ್ಯಯ ಉಂಟಾಗುತ್ತದೆ. ಆದರೆ ಈ ಸಮಸ್ಯೆಗೆ ಕೇಂದ್ರ ಸರಕಾರ. ಕೇಂದ್ರ ಹಣಕಾಸು ಸಚಿವಾಲಯ, ಕೇಂದ್ರ ಹಣಕಾಸು ಸೇವೆಗಳ ಇಲಾಖೆಯೇ ನೇರವಾಗಿ ಹೊಣೆಯನ್ನು ಹೊತ್ತುಕೊಳ್ಳಬೇಕು ಎಂದು ಬ್ಯಾಂಕ್‍ನ ಯುಎಫ್‍ಬಿಯು ಕಾರ್ಮಿಕ ಮುಖಂಡ ಟಿಸಿಪಿ ವೀರೇಶ್ ಹೇಳಿದರು.

ಮುಷ್ಕರದ ಅಂಗವಾಗಿ ದಿನದ 27 ಜನವರಿ 2026ರ ಎಸ್,ಬಿ.ಎಂ. ವೃತ್ತದಲ್ಲಿನ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಆವರಣದಲ್ಲಿ ಪ್ರತಿಭಟನಾ ಮತಪ್ರದರ್ಶನವನ್ನು ನಡೆಸಿ ಕೇಂದ್ರ ಸರ್ಕಾರದ ವಿರುದ್ದ ಘೋಷಣೆಗಳನ್ನು ಕೂಗುತ್ತಾ, ಭಿತ್ತಿ ಪತ್ರಗಳನ್ನ ಪ್ರದರ್ಶಿಸುತ್ತಾ ಮೆರವಣಿಗೆ ಮುಖಾಂತರ ಸುಮಾರು ನೂರೈವತ್ತು ಬ್ಯಾಂಕ್ ನೌಕರರು ಭಾಗಹಿಸಿದ್ದರು.

ಪ್ರತಿಭಟನೆಯ ನೇತೃತ್ವವನ್ನು UಈಃU ಸಂಚಾಲಕರಾದ ಟಿಸಿಪಿ ವೀರೇಶ್, ಶ್ರೀಧರ್ ನಾಯಕ ಪಿಓ, ದಾದ ಪೀರ್, ಮತ್ತು ಪ್ರಶಾಂತ್ ಮಹೇಶ್ವರಪ್ಪ, ಶಶಿಧರ್,ಅರುಣ್ ಕುಮಾರ್,ಶ್ರೀನಿವಾಸ್,ಕೋಕಿಲ ಸುಧಾ ಸೇರಿದಂತೆ ಇತರರು ಭಾಘವಹಿಸಿದ್ದರು.

Views: 49

Leave a Reply

Your email address will not be published. Required fields are marked *