ರೆಡ್ಡಿ ಜನ ಸಂಘದಿಂದ ಎಸ್‌ಎಸ್‌ಎಲ್‌ಸಿ-ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ: ಅರ್ಜಿ ಆಹ್ವಾನ.

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817

ಚಿತ್ರದುರ್ಗ ಫೆ. 21

ಚಿತ್ರದುರ್ಗ ಜಿಲ್ಲಾ ರೆಡ್ಡಿ ಜನ ಸಂಘ(ರಿ)ದ ಚಿತ್ರದುರ್ಗ, ದಾವಣಗೆರೆ ಮತ್ತು ಶಿವಮೊಗ್ಗ ಜಿಲ್ಲೆಗಳ ವ್ಯಾಪ್ತಿಯಲ್ಲಿ ನಡೆಯುತ್ತಿದ್ದು, 2024- 25ನೇ ಸಾಲಿನ ಎಸ್.ಎಸ್.ಎಲ್.ಸಿ.ಯಲ್ಲಿ ಶೇ,90 ಮತ್ತು ದ್ವಿತೀಯ ಪಿಯುಸಿಯಲ್ಲಿ ಶೇ, 85 ರಷ್ಟು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಈಗಾಗಲೇ ಪ್ರತಿಭಾ ಪುರಸ್ಕಾರ ಮಾಡಲಾಗಿದೆ.

ಈಗ ಪಿಯುಸಿಯಲ್ಲಿ ಶೇ. 80 ರಷ್ಟು ಹಾಗೂ ಎಸ್.ಎಸ್.ಎಲ್.ಸಿ.ಯಲ್ಲಿ ಶೇ. 85ರಷ್ಟು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡಬೇಕೆಂದು ಸಮುದಾಯದ ಸದಸ್ಯರು ಅಧ್ಯಕ್ಷರಲ್ಲಿ ಮನವಿ ಮಾಡಿದ್ದರಿಂದ ಅಧ್ಯಕ್ಷರು, ಪಿಯುಸಿಯಲ್ಲಿ ಶೇ. 80 ರಷ್ಟು ಹಾಗೂ ಎಸ್.ಎಸ್.ಎಲ್.ಸಿ.ಯಲ್ಲಿ ಶೇ. 85ರಷ್ಟು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲು ಸೂಚಿಸಿರುವ ಮೇರೆಗೆ ಅರ್ಹ ವಿದ್ಯಾರ್ಥಿಗಳು ದಿನಾಂಕ 10.3.2026ರ ಒಳಗೆ ಚಿತ್ರದುರ್ಗ ಜಿಲ್ಲಾರೆಡ್ಡಿಜನಸಂಘದ ಕಚೇರಿಗೆ ಸಲ್ಲಿಸಲು ಕಾರ್ಯದರ್ಶಿಗಳಾದ ಜೆ.ಪರಶುರಾಮ, ಡಿ.ಕೆ.ಶೀಲಾ ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *