ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ಚಿತ್ರದುರ್ಗ ಫೆ. 21
ಜಿಲ್ಲಾ ನ್ಯಾಯಾಲಯ ಸ್ಥಾಪಿಸಿ ಶತಮಾನವಾಗುತ್ತಿದ್ದು ವಕೀಲರ ಸಂಘದ ಮನವಿಯಂತೆಜಿಲ್ಲಾ ನೂತನ ನ್ಯಾಯಾಲಯ ಸಂಕೀರ್ಣಕ್ಕೆ ಅಗತ್ಯವಾದ ಸೂಕ್ತ ಅನುದಾನವನ್ನು ಕೊಡಿಸುವೆ ಎಂದು ಚಿತ್ರದುರ್ಗ ಸಂಸದ ಗೋವಿಂದ ಎಂ.ಕಾರಜೋಳ ಹೇಳಿದರು.
ನ್ಯಾಯಾಂಗ ಇಲಾಖೆ ಚಿತ್ರದುರ್ಗ, ಜಿಲ್ಲಾ ವಕೀಲರ ಸಂಘ ಚಿತ್ರದುರ್ಗ, ಲೋಕೋಪಯೋಗಿ ಇಲಾಖೆ ಚಿತ್ರದುರ್ಗ ಇವರ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ವಕೀಲರ ಸಂಘದ ನೂತನ ಕಂಪ್ಯೂಟರ್ ಕೊಠಡಿಯನ್ನು ಉದ್ಘಾಟಿಸಿ ಮಾತನಾಡಿ, ನಿಮ್ಮ ಮತದಾರರೇ ನಮಗೆ ಕಕ್ಷಿದಾರರು ಅವರ ಹಿತಕಾಯುವುದು ಸಂಸದರ ಮತ್ತು ವಕೀಲರ ಕರ್ತವ್ಯ ಈ ಹಿನ್ನೆಲೆಯಲ್ಲಿ ನಿಮ್ಮೊಂದಿಗೆ ಸದಾ ಇರುವೆ ಎಂದರು.
ಚಿತ್ರದುರ್ಗ ಜಿಲ್ಲೆಯಲ್ಲಿ ಮೇಲೆ ಸೂರ್ಯನ ಶಾಖ ಮತ್ತು ಕೆಳಗಡೆ ಭೂಮಿಯ ಕಾವು ಎರಡೂ ಇದ್ದು ವಕೀಲರ ಸುರಕ್ಷಿತೆ ಹಿನ್ನೆಲೆಯಲ್ಲಿ ಕೊಠಡಿಯನ್ನು ಇನ್ನಷ್ಟು ಉತ್ತಮವಾಗಿ ತಂಪಾಗಿರುವಂತೆ ಮಾಡಿ ಎಂದು ಲೋಕೋಪಯೋಗಿ ಇಲಾಖೆ ಇಂಜಿನಿಯರ್ ನಾಗರಾಜ್ ಗೆ ಸೂಚಿಸಿದರು.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರೋಣ ವಾಸುದೇವ ಮಾತನಾಡಿ, ಚಿತ್ರದುರ್ಗ ಜಿಲ್ಲೆ ತಂತ್ರಜ್ಞಾನ ಬಳಕೆಯಲ್ಲಿ ಹಿಂದುಳಿದಿದೆ. ನ್ಯಾಯಾಲಯದಲ್ಲಿ ಮುಂದಿನ ದಿನಗಳಲ್ಲಿ ನಿರೀಕ್ಷಣಾ ಜಾಮೀನು ಮತ್ತು ಬೇಲ್ ( ಜಾಮೀನು) ಎರಡನ್ನೂ ಆನ್ ಲೈನ್ ನಲ್ಲೇ ಮಾಡುವ ಹಿನ್ನೆಲೆಯಲ್ಲಿ ಎಲ್ಲರೂ ಕಂಪ್ಯೂಟರ್ ಕೊಠಡಿಯನ್ನು ಸದ್ಬಳಕೆ ಮಾಡಿಕೊಳ್ಳಿ ಎಂದರು.
ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಹೆಚ್.ಎಸ್.ಮಹೇಶ್ವರಪ್ಪ ಮಾತನಾಡಿ, ಸಂಸದರು ವಕೀಲರ ಪರವಾಗಿ ಧ್ವನಿ ಎತ್ತ ಬೇಕು. ಅರವತ್ತು ವಯಸ್ಸಿನ ನಂತರ ಪಿಂಚಣಿ ಕೊಡವಂತೆ ಮನವಿ, ಜಿಲ್ಲೆಯಲ್ಲಿ ವಕೀಲರಿಗೆ ಸಮುದಾಯ ಭವನ ಅಗತ್ಯ ಅದನ್ನು ಕೂಡಲೇ ವ್ಯವಸ್ಥೆ ಮಾಡಿ ಎಂದು ಮನವಿ ಮಾಡಿದರು.

ಒಂದನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ವೀರಣ್ಣ ಸೋಮಶೇಖರ್. ಎರಡನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಗಂಗಾಧರ ಚನ್ನಬಸಪ್ಪ ಹಡಪದ್. ಜಿಲ್ಲಾ ವಕೀಲರ ಸಂಘದ ಉಪಾಧ್ಯಕ್ಷರಾದ ಕೆ.ಎಸ್ ಸಾವಿತ್ರಮ್ಮ. ಪ್ರಧಾನ ಕಾರ್ಯದರ್ಶಿ ಹೆಚ್.ಓ ಜಗದೀಶ ಗುಂಡೇರಿ, ಖಜಾಂಚಿ ಹೆಚ್. ಸೋಮಶೇಖರ್ ರೆಡ್ಡಿ. ಸಹ ಕಾರ್ಯದರ್ಶಿ ಹೆಚ್.ಟಿ ಕಾಂತರಾಜ್ , ಕಾರ್ಯಕಾರಿ ಸಮಿತಿ ಸದಸ್ಯರು ಮತ್ತು ಸರ್ವ ಸದಸ್ಯರು ಜಿಲ್ಲಾ ವಕೀಲರ ಸಂಘ ಹಾಗೂ ನ್ಯಾಯಾಂಗ ಇಲಾಖೆ ಸಿಬ್ಬಂದಿಗಳು ಭಾಗವಹಿಸಿದ್ದರು.ಇದೇ ಸಂದರ್ಭದಲ್ಲಿ ಸಂಘದ ವತಿಯಿಂದ ಸನ್ಮಾನಿಸಲಾಯಿತು.