“ವಸತಿ ಶಾಲಾ ಪ್ರವೇಶ ಪರೀಕ್ಷೆ:ಕೀ ಉತ್ತರ ಪ್ರಕಟ,ಆಕ್ಷೇಪಣೆಗಳಿಗೆ ಮಾರ್ಚ್ 7 ಕೊನೆ ದಿನ.

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಎಲ್ಲಾ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ನಡೆಸಿದ ಲಿಖಿತ ಪರೀಕ್ಷೆಯ ಕೀ ಉತ್ತರಗಳನ್ನು ಪ್ರಕಟಿಸಿದೆ.

ಮಾರ್ಚ್ 1 ರಂದು, ಭಾನುವಾರ ಈ ಲಿಖಿತ ಪರೀಕ್ಷೆಯು ರಾಜ್ಯದಾದ್ಯಂತ ಯಶಸ್ವಿಯಾಗಿ ನಡೆಯಿತು. ಪರೀಕ್ಷೆಯ ನಂತರ, ಅಭ್ಯರ್ಥಿಗಳ ಮಾಹಿತಿಗಾಗಿ ಕೆಇಎ ಮಂಗಳವಾರದಂದು ತಾತ್ಕಾಲಿಕ ಕೀ ಉತ್ತರಗಳನ್ನು ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಿದೆ.

ಪರೀಕ್ಷೆಗೆ 98% ಹಾಜರಾತಿ: ಈ ಪ್ರವೇಶ ಪರೀಕ್ಷೆಗೆ ಒಟ್ಟು 2.31 ಲಕ್ಷ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದರು. ಅದರಲ್ಲಿ ಶೇಕಡಾ 98 ರಷ್ಟು ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ ಅವರು ತಿಳಿಸಿದ್ದಾರೆ.

ಆಕ್ಷೇಪಣೆ ಸಲ್ಲಿಸಲು ಅವಕಾಶ: ಪ್ರಕಟವಾಗಿರುವ ಕೀ ಉತ್ತರಗಳ ಬಗ್ಗೆ ಅಭ್ಯರ್ಥಿಗಳು ಅಥವಾ ಪೋಷಕರಿಗೆ ಯಾವುದೇ ಆಕ್ಷೇಪಣೆಗಳಿದ್ದರೆ, ಅವುಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಆಕ್ಷೇಪಣೆಗಳನ್ನು ಸಲ್ಲಿಸಲು ಮಾರ್ಚ್ 7, ಮಧ್ಯಾಹ್ನ 12 ಗಂಟೆಯವರೆಗೆ ಕಾಲಾವಕಾಶ ನೀಡಲಾಗಿದೆ.

ಆಕ್ಷೇಪಣೆಗಳನ್ನು ಕಡ್ಡಾಯವಾಗಿ ಕೆಇಎ ನೀಡಿದ ಆನ್‌ಲೈನ್ ಲಿಂಕ್ ಮೂಲಕವೇ ಸಲ್ಲಿಸಬೇಕು. ಆಕ್ಷೇಪಣೆ ಸಲ್ಲಿಸುವ ಲಿಂಕ್: https://cetonline.karnataka.gov.in/kea/

ಆಸಕ್ತರು ವೆಬ್‌ಸೈಟ್‌ಗೆ ಭೇಟಿ ನೀಡಿ ಕೀ ಉತ್ತರಗಳನ್ನು ಪರಿಶೀಲಿಸಬಹುದು ಮತ್ತು ಅಗತ್ಯವಿದ್ದರೆ ನಿಗದಿತ ಸಮಯದೊಳಗೆ ತಮ್ಮ ಆಕ್ಷೇಪಣೆಗಳನ್ನು ದಾಖಲಿಸಬಹುದು..

Leave a Reply

Your email address will not be published. Required fields are marked *