ದಾವಣಗೆರೆ ವಿಭಾಗಕ್ಕೆ ಬಿಜೆಪಿ ಸಹ ಪ್ರಭಾರಿಯಾಗಿ ಎ. ಮುರಳಿ ನೇಮಕ

ಪೋಟೋ ಮತ್ತು ವರದಿ ಸುರೇಶ್ ಪಟ್ಟಣ್

ಚಿತ್ರದುರ್ಗ ಮಾ. 04 

ಚಿತ್ರದುರ್ಗ ಜಿಲ್ಲೆಯ ಬಾರತೀಯ ಜನತಾ ಪಾರ್ಟಿಯ ಮಾಜಿ ಅಧ್ಯಕ್ಷರಾದ ಎ. ಮುರಳಿಯವರನ್ನು ಬಿಜೆಪಿಯ ರಾಜ್ಯಾಧ್ಯಕ್ಷರಾದ ಬಿ.ವೈ ವಿಜಯೇಂದ್ರರವರು ದಾವಣಗೆರೆ ಜಿಲ್ಲೆಗೆ ಸಹ ಪ್ರಭಾರಿಗಳನ್ನಾಗಿ ನೇಮಕ ಮಾಡಿ ಆದೇಶವನ್ನು ಹೊರಡಿಸಿದ್ದಾರೆ.

ದಾವಣಗೆರೆ ವಿಭಾಗಕ್ಕೆ ಚಿತ್ರದುರ್ಗ, ದಾವಣಗೆರೆ ಮತ್ತು ತುಮಕೂರು ಜಿಲ್ಲೆ ಒಳಗೊಂಡಿದ್ದು ಇಲ್ಲಿ ಪಕ್ಷವನ್ನು ಸಂಘಟಿಸುವ ಜವಾಬ್ದಾರಿಯನ್ನು ಜೊತೆಗೆ ಮುಂಬರುವ ವಿವಿಧ ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲಿಸುವ ಹೊಣೆಯನ್ನು ಸಹಾ ಹೊರಿಸಲಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ ಜಿಲ್ಲಾಧ್ಯಕ್ಷರಾಗಿ ಅನುಭವನ್ನು ಹೊಂದಿದ್ದು, ಅವರನ್ನು ದಾವಣಗೆರೆ ಜಿಲ್ಲೆಯ ಸಹಾ ಪ್ರಬಾರಿಗಳನ್ನಾಗಿ ನೇಮಕ ಮಾಡಲಾಗಿದೆ.

Leave a Reply

Your email address will not be published. Required fields are marked *