ಪೋಟೋ ಮತ್ತು ವರದಿ ಸುರೇಶ್ ಪಟ್ಟಣ್
ಚಿತ್ರದುರ್ಗ ಮಾ. 07
ವಿದ್ಯಾರ್ಥಿಗಳು ಸಮಯವನ್ನು ವ್ಯರ್ಥ ಮಾಡದೆ ಮುಂದಿನ ಭವಿಷ್ಯಕ್ಕಾಗಿ ಈಗಲೇ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಯೋಜನಾಧಿಕಾರಿ ರವಿಚಂದ್ರ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಚಿತ್ರದುರ್ಗ ತಾಲ್ಲೂಕಿನ ಸಿರಿಗೆರೆ ತಾಲೂಕ್ ಯೋಜನಾ ಕಚೇರಿಯ ವ್ಯಾಪ್ತಿಗೆ ಬರುವ ಚಿಕ್ಕಬೆನ್ನೂರು ವಲಯದ ಕರಿಯಮ್ಮನ ಹಟ್ಟಿಯ ಕರಿಯಂಬಿಕ ಹಿರಿಯ ಪ್ರೌಢಶಾಲೆಯಲ್ಲಿ ಎಸ್.ಎಸ್.ಎಲ್.ಸಿ. ತರಗತಿ ಮಕ್ಕಳಿಗೆ ಟ್ಯೂಷನ್ ಕ್ಲಾಸ್ ಸಮರೋಪ ಕಾರ್ಯಕ್ರಮದಲ್ಲಿ ಭಾಗವಹಿಸಿ ವಿದ್ಯಾರ್ಥಿಗಳನ್ನು ಹಾಗೂ ಸಂಘದ ಸದಸ್ಯರನ್ನು ಉದ್ದೇಶಿಸಿ ಮಾತನಾಡಿದ ಅವರು, ಯೋಜನೆಯು ಕೇವಲ ಸಾಲ ಸೌಲಭ್ಯವನ್ನು ಮಾತ್ರ ಮಾಡದೆ ಗ್ರಾಮೀಣ ಮಟ್ಟದ ಸದಸ್ಯರು ಹಾಗೂ ಮಹಿಳೆಯಾರಿಗೆ ಸರಿಯಾದ ಮಾಹಿತಿ ಮಾರ್ಗದರ್ಶನ ನೀಡಿ ಅವರು ಅಭಿವೃದ್ಧಿ ಹೊಂದಬೇಕು ಎಂಬ ಉದ್ದೇಶದಿಂದ ಯೋಜನೆಯನ್ನು ಸ್ಥಾಪಿಸಲಾಗಿದೆ ಹಾಗೂ ಮಕ್ಕಳಿಗೆ 45000 ವಿದ್ಯಾರ್ಥಿಗಳಿಗೆ ಸುಜ್ಞಾನ ನಿಧಿ ಶಿಷ್ಯವೇತನ ನೀಡಲಾಗುತ್ತದೆ ನಿರ್ಗತಿಕರಿಗೆ ಪ್ರತಿ ತಿಂಗಳು ಮಾಶಾಸನ ವಿತರಣೆ ಮಾಡಲಾಗುತ್ತದೆ ಮನೆ ಇಲ್ಲದವರಿಗೆ ಮನೆ ಕೂಡ ಕಟ್ಟಿಸಿಕೊಡಲಾಗುವುದು ಇಲ್ಲಿಯವರೆಗೆ ಸುಮಾರು 1000 ಮನೆಗಳ ನಿರ್ಮಾಣ ಮಾಡಲಾಗಿದೆ ಯೋಜನೆಯಿಂದ ಸುಮಾರು 36 ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡಲಾಗಿದೆ ಎಂದು ಯೋಜನಾಧಿಕಾರಿ ರವಿಚಂದ್ರ ಮಾಹಿತಿ ತಿಳಿಸಿದರು,
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲೆಯ ಮುಖ್ಯ ಶಿಕ್ಷಕರಾದ ನಾಗಪ್ಪ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು ಹಾಗೂ ಕ್ಷೇತ್ರದ ಯೋಜನೆಯ ಬಗ್ಗೆ ಶ್ಲಾಘಿಸಿದರು ಈ ಸಭೆಯಲ್ಲಿ ತಾಲೂಕಿನ ಜ್ಞಾನವಿಕಾಸ ಸಮನ್ವಯಾಧಿಕಾರಿ ಶ್ರೀಮತಿ ಸಾಕಮ್ಮ ಕಾರ್ಯಕ್ರಮವನ್ನು ನಿರೂಪಿಸಿದರು ಈ ಸಭೆಯಲ್ಲಿ ಮೇಲ್ವಿಚಾರಕರು ಹಾಗೂ ಸೇವಾ ಪ್ರತಿನಿಧಿ ಅವರು ಕೇಂದ್ರದ ಸದಸ್ಯರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
