ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ಚಿತ್ರದುರ್ಗ ಮಾ. 10
ಜನ ಸಾಮಾನ್ಯರು ಪ್ರತಿನಿತ್ಯ ಬಳಕೆ ಮಾಡುವ ಅಡುಗೆ ಅನಿಲ ದರವನ್ನು ಕೇಂದ್ರದ ಬಿಜೆಪಿ ಸರ್ಕಾರವು ಮತ್ತೋಮ್ಮೆ ಬೆಲೆ ಏರಿಕೆ ಮಾಡಿರುವುದನ್ನು ಖಂಡಿಸಿ ಎಐಸಿಸಿ & ಕೆಪಿಸಿಸಿ ಆದೇಶದ ಮೇರೆಗೆ ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ವತಿಯಿಂದ ಮಾ.11ರ ಬುಧವಾರ ಬೆಳಿಗ್ಗೆ 11ಕ್ಕೆ ಜಿಲ್ಲಾ ಮಟ್ಟದ ಪ್ರತಿಭಟನೆಯನ್ನು ನಗರದ ಒನಕೆ ಓಬವ್ವ ವೃತ್ತದಲ್ಲಿ ಹಮ್ಮಿಕೊಳ್ಳಲಾಗಿದೆ.
ಈ ಪ್ರತಿಭಟನೆಯಲ್ಲಿ ಕಾಂಗ್ರೆಸ್ನ ಮುಖಂಡರು, ಹಿತೈಷಿಗಳು, ಅಭಿಮಾನಿಗಳು, ಕಾರ್ಯಕರ್ತರು, ಭಾಗವಹಿಸುವಂತೆ ಜಿಲ್ಲಾಧ್ಯಕ್ಷರಾದ ಎಂ.ಕೆ. ತಾಜ್ಪೀರ್ ಕೋರಿದ್ದಾರೆ.
