ಚಿತ್ರದುರ್ಗ ಏಕನಾಥೇಶ್ವರಿ ಅಮ್ಮನವರ ಜಾತ್ರಾ ಪೂರ್ವಭಾವಿ ಸಭೆ.

ಪೋಟೋ ಮತ್ತು ವರದಿ ಸುರೇಶ್ ಪಟ್ಟಣ್

ಚಿತ್ರದುರ್ಗ: ಮಾ. 10 

ಕೋಟೆನಾಡು ಜನರ ಆರಾಧ್ಯ ದೇವತೆ ಏಕನಾಥೇಶ್ವರಿ ಅಮ್ಮನವರ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆಯನ್ನು ಫಿಲ್ಟರ್ ಹೌಸ್ ಸಮೀಪದ ಏಕನಾಥೇಶ್ವರಿ ಪಾದಗುಡಿಯಲ್ಲಿ ಮಾ.11ರ ಬೆಳಗ್ಗೆ 11 ಗಂಟೆಗೆ ತಹಸೀಲ್ದಾರ್ ಗೋವಿಂದರಾಜು ಅಧ್ಯಕ್ಷತೆಯಲ್ಲಿ ಕರೆಯಲಾಗಿದೆ. ಕಂದಾಯ ನಿರೀಕ್ಷಕರು, ಗ್ರಾಮಲೆಕ್ಕಾಧಿಕಾರಿಗಳು, ದೇವಸ್ಥಾನ ಸಮಿತಿಯವರು, ಭಕ್ತರು ಉಪಸ್ಥಿತರಲಿದ್ದು, ಹಾಲಿ-ಮಾಜಿ ಜನಪ್ರತಿನಿಧಿಗಳು, ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸಲಹೆ ಸೂಚನೆ ನೀಡುವಂತೆ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *