ಚಿತ್ರದುರ್ಗ|ಒನಕೆ ಓಬವ್ವ ವೃತ್ತದಲ್ಲಿ ಕಾಂಗ್ರೆಸ್ ಪ್ರತಿಭಟನೆ – ಗ್ಯಾಸ್ ಬೆಲೆ ಏರಿಕೆ ಹಿಂಪಡೆಯಲು ಒತ್ತಾಯ.

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817

ಚಿತ್ರದುರ್ಗ ಮಾ. 11

ಕೇಂದ್ರದಲ್ಲಿ ಬಿಜೆಪಿ.ಅಧಿಕಾರಕ್ಕೆ ಬಂದಾಗಿನಿಂದಲೂ ಜನಸಾಮಾನ್ಯರು ಬಳಸುವ ಅಗತ್ಯ ವಸ್ತುಗಳ ಬೆಲೆ ಏರಿಸುತ್ತಲೆ ಬರುತ್ತಿದೆ ಎಂದು ಚಿತ್ರದುರ್ಗ ನಗರಾಭಿವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಆರ್.ಕೆ.ಸರ್ದಾರ್ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.

ಅಡುಗೆ ಅನಿಲ ಬೆಲೆ ಏರಿಸಿರುವ ಕೇಂದ್ರ ಬಿಜೆಪಿ. ಸರ್ಕಾರದ ಜನ ವಿರೋಧಿ ನೀತಿ ಖಂಡಿಸಿ ಜಿಲ್ಲಾ ಕಾಂಗ್ರೆಸ್‍ನಿಂದ ಒನಕೆ ಓಬವ್ವ ವೃತ್ತದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಾಂಗ್ರೆಸ್ ಹಿಂದಿನಿಂದಲೂ ಬಡವರು, ರೈತರು, ಜನಸಾಮಾನ್ಯರ ಪರವಾಗಿದೆ. ದೇಶದ ಸ್ವಾತಂತ್ರ್ಯಕ್ಕಾಗಿ ಬ್ರಿಟೀಷರ ವಿರುದ್ದ ನಡೆದ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಕಾಂಗ್ರೆಸ್‍ಗೆ ದೇಶದ ಹಿತ ಮುಖ್ಯ. ಕೇಂದ್ರದಲ್ಲಿ ಬಿಜೆಪಿ.ಅಧಿಕಾರಕ್ಕೆ ಬಂದಾಗಿನಿಂದಲೂ ಜನಸಾಮಾನ್ಯರು ಬಳಸುವ ಅಗತ್ಯ ವಸ್ತುಗಳ ಬೆಲೆ ಏರಿಸುತ್ತಲೆ ಬರುತ್ತಿದೆ. ಪ್ರತಿನಿತ್ಯವೂ ಅಡುಗೆ ಮನೆಯಲ್ಲಿ ಮಹಿಳೆಯರಿಗೆ ಬೇಕಾಗಿರುವ ಅಡುಗೆ ಅನಿಲ ಏರಿಕೆಯಿಂದ ಬಡವರು, ಮಧ್ಯಮ ವರ್ಗದವರು ತತ್ತರಿಸಿದ್ದಾರೆ. ಕೂಡಲೆ ಬೆಲೆ ಏರಿಕೆಯನ್ನು ಹಿಂದಕ್ಕೆ ಪಡೆಯಬೇಕೆಂದು ಒತ್ತಾಯಿಸಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್ ಮಾತನಾಡಿ 2014 ರಲ್ಲಿ ಅಧಿಕಾರಕ್ಕೆ ಬಂದ ಎನ್‍ಡಿಎ. ಅಚ್ಚಾದಿನ್ ತರುತ್ತೇವೆಂದು ಹೇಳಿಕೊಳ್ಳುತ್ತ ನಾಲ್ಕು ನೂರು ರೂ.ಗಳಿದ್ದ ಗ್ಯಾಸ್ ಸಿಲಿಂಡರ್ ಬೆಲೆಯನ್ನು ಪ್ರತಿ ವರ್ಷವೂ ಹೆಚ್ಚಿಸುತ್ತಲೆ ಬರುತ್ತಿರುವುದರಿಂದ ಈಗ ಒಂದು ಸಾವಿರ ರೂ.ಗೆ ಮುಟ್ಟಿದೆ. ರಂಜಾನ್ ಮಾಸದಲ್ಲಿ ಅಮೇರಿಕಾ ಇಸ್ರೇಲ್ ಕೂಡಿಕೊಂಡು ಇರಾನ್ ಮೇಲೆ ದಾಳಿ ನಡೆಸುತ್ತಿರುವುದರಿಂದ ಅಪಾರ ಪ್ರಮಾಣದ ಹಾನಿಯಾಗಿದ್ದು, ಅಮಾಯಕರು ಬಲಿಯಾಗುತ್ತಿದ್ದಾರೆ ಎಂದು ಹೇಳಿದ ಅವರು. ರಾಜ್ಯಾದ್ಯಂತ ಅಡುಗೆ ಅನಿಲ ಬೆಲೆ ಏರಿಕೆ ವಿರುದ್ದ ಪ್ರತಿಭಟನೆ ನಡೆಸಲಾಗುತ್ತಿದೆ ಅಗತ್ಯ ವಸ್ತುಗಳ ಬೆಲೆ ಏರಿಸಿ ಶ್ರೀಮಂತರಿಗೆ ಅನುಕೂಲ ಮಾಡುತ್ತಿದ್ದಾರೆ. ತಕ್ಷಣವೆ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯನ್ನು ಹಿಂದಕ್ಕೆ ಪಡೆಯಬೇಕೆಂದು ಆಗ್ರಹಿಸಿದರು.

ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಕೆ.ಎಂ.ಹಾಲಸ್ವಾಮಿ ಮಾತನಾಡುತ್ತ ಕೇಂದ್ರದಲ್ಲಿ ಬಿಜೆಪಿ. ಅಧಿಕಾರಕ್ಕೆ ಬಂದಾಗಿನಿಂದಲೂ ಸುಳ್ಳು ಹೇಳಿರುವುದೆ ದೊಡ್ಡ ಸಾಧನೆ. ಕಾಂಗ್ರೆಸ್ ಪಕ್ಷ ಜನರಿಗೆ ನೀಡಿರುವ ಸಬ್ಸಡಿಯನ್ನೆಲ್ಲಾ ಕೇಂದ್ರ ಬಿಜೆಪಿ. ರದ್ದುಪಡಿಸಿ ಬಡವರ ತಲೆ ಮೇಲೆ ಚಪ್ಪಡಿ ಹಾಕುತ್ತಿದೆ. ಪೆಟ್ರೋಲ್, ಡೀಸೆಲೆ ಬೆಲೆ ಹೆಚ್ಚಿಸಿದ್ದು, ಸಾಕಾಗದೆ ಅಡುಗೆ ಅನಿಲ ಬೆಲೆಯನ್ನು ಏರಿಸಿ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕಿದೆ ಎಂದು ಪ್ರಧಾನಿ ಮೋದಿರವರ ನಡೆಯನ್ನು ಟೀಕಿಸಿದರು.

ಗ್ಯಾರೆಂಟಿ ಅನುಷ್ಟಾನಗಳ ಸಮಿತಿ ಅಧ್ಯಕ್ಷ ಆರ್.ಶಿವಣ್ಣ ಮಾತನಾಡಿ ಉಜ್ವಲ ಯೋಜನೆಯನ್ನು ಜಾರಿಗೆ ತರುವ ನೆಪದಲ್ಲಿ ಬಿಜೆಪಿ. ಈಗ ಅಡುಗೆ ಅನಿಲ ಬೆಲೆಯನ್ನು ಅರವತ್ತು ರೂ.ಗಳಿಗೆ ಹೆಚ್ಚಿಸಿದೆ. ಮೊದಲೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಬಡವರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಕೇಂದ್ರದಲ್ಲಿ ಬಿಜೆಪಿ.ಅಧಿಕಾರಕ್ಕೆ ಬಂದಾಗಿನಿಂದಲೂ ಬೆಲೆ ಏರಿಕೆ ಬಿಸಿಯಿಂದ ಬಡವರು ತತ್ತರಿಸಿದ್ದಾರೆ ಎಂದರು.

ಅಡುಗೆ ಅನಿಲ ಬೆಲೆ ಏರಿಕೆಯನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್‍ನಿಂದ ಒನಕೆ ಓಬವ್ವ ವೃತ್ತದಲ್ಲಿ ಬುಧವಾರ ಸೌದೆ ಒಲೆಯಲ್ಲಿ ಅಡುಗಡೆ ಮಾಡುವ ಮೂಲಕ ಮಹಿಳೆಯರು ಪ್ರತಿಭಟನೆ ನಡೆಸಿ ಕೇಂಧ್ರ ಸರ್ಕಾರ ಹಾಗೂ ಪ್ರಧಾನಿ ಮೋದಿ ವಿರುದ್ದ ಧಿಕ್ಕಾರಗಳನ್ನು ಕೂಗಿದರು.

ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರುಗಳಾದ ನಜ್ಮತಾಜ್, ಎಸ್.ಎನ್.ರವಿಕುಮಾರ್, ಪ್ರಧಾನ ಕಾರ್ಯದರ್ಶಿಗಳಾದ ಕೆ.ಪಿ.ಸಂಪತ್‍ಕುಮಾರ್, ಡಿ.ಎನ್.ಮೈಲಾರಪ್ಪ, ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಎನ್.ಡಿ.ಕುಮಾರ್, ಜೆ.ಜೆ.ಹಟ್ಟಿ ತಿಪ್ಪೇಸ್ವಾಮಿ, ಮುದಸಿರ್‍ನವಾಜ್, ಸೈಯದ್ ಸೈಫುಲ್ಲಾ, ಚೋಟು, ಸೈಯದ್ ವಲಿಖಾದ್ರಿ, ಸೈಯದ್ ಖುದ್ದೂಸ್, ಡಾ.ರಹಮತ್‍ವುಲ್ಲಾ, ಮಂಜುನಾಥ್, ಉಸ್ಮಾನ್, ಲಕ್ಷ್ಮಿಕಾಂತ್, ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಮುನಿರಾ ಎ.ಮಕಾಂದಾರ್, ಮೋಕ್ಷರುದ್ರಸ್ವಾಮಿ, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಗೀತಾನಂದಿನಿಗೌಡ, ಉಪಾಧ್ಯಕ್ಷೆ ಪವಿತ್ರ, ಇಂದಿರಾ, ನೇತ್ರ, ಬಸಮ್ಮ ಸೇರಿದಂತೆ ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು

Leave a Reply

Your email address will not be published. Required fields are marked *