ಬೆಂಗಳೂರು: ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಪದವೀಧರ ಯುವಕ-ಯುವತಿಯರಿಗೆ ಭರ್ಜರಿ ಸಿಹಿಸುದ್ದಿ. ಕರ್ನಾಟಕ ಉಚ್ಛ ನ್ಯಾಯಾಲಯವು (ಹೈಕೋರ್ಟ್) ಖಾಲಿ ಇರುವ ‘ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ’ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತರು ಆನ್ಲೈನ್ ಮೂಲಕ ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ನೇಮಕಾತಿ ಕುರಿತಾದ ಪ್ರಮುಖ ವಿವರಗಳು, ಶೈಕ್ಷಣಿಕ ಅರ್ಹತೆ, ವಯೋಮಿತಿ ಮತ್ತು ಆಯ್ಕೆ ಪ್ರಕ್ರಿಯೆಯ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ:
- ಹುದ್ದೆಯ ಹೆಸರು: ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ (Assistant Court Secretary)
- ಒಟ್ಟು ಹುದ್ದೆಗಳು: 70 (ಈ ಪೈಕಿ 11 ಹುದ್ದೆಗಳನ್ನು ಕಲ್ಯಾಣ ಕರ್ನಾಟಕ ಭಾಗದ ಅಭ್ಯರ್ಥಿಗಳಿಗೆ ಮೀಸಲಿಡಲಾಗಿದೆ)
ಶೈಕ್ಷಣಿಕ ಅರ್ಹತೆಗಳು:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ (ಡಿಗ್ರಿ) ಮುಗಿಸಿರಬೇಕು. ಇದರ ಜೊತೆಗೆ ಈ ಕೆಳಗಿನ ಯಾವುದಾದರೂ ವೃತ್ತಿಪರ ಕೌಶಲ್ಯ ಹೊಂದಿರಬೇಕು:
- ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (KSEEB) ಅಥವಾ ಇತರ ಮಾನ್ಯತೆ ಪಡೆದ ಮಂಡಳಿ ನಡೆಸುವ ಆಂಗ್ಲ ಶೀಘ್ರಲಿಪಿ (English Shorthand) ಹಿರಿಯ ದರ್ಜೆ ಪರೀಕ್ಷೆ ಅಥವಾ ಆಂಗ್ಲ ಶೀಘ್ರಲಿಪಿ ಹಾಗೂ ಬೆರಳಚ್ಚು (Typewriting) ಹಿರಿಯ ದರ್ಜೆ ಪರೀಕ್ಷೆ ಪಾಸ್ ಮಾಡಿರಬೇಕು.
- ಅಥವಾ ತಾಂತ್ರಿಕ ಶಿಕ್ಷಣ ಮಂಡಳಿಯಿಂದ ಆಂಗ್ಲ ಕಮರ್ಷಿಯಲ್ ಪ್ರಾಕ್ಟೀಸ್ (Commercial Practice) ಅಥವಾ ಸೆಕ್ರೆಟೇರಿಯಲ್ ಪ್ರಾಕ್ಟೀಸ್ (Secretarial Practice) ವಿಷಯದಲ್ಲಿ ಡಿಪ್ಲೊಮಾ ಪೂರ್ಣಗೊಳಿಸಿರಬೇಕು.
- ಇದರೊಂದಿಗೆ ಕಂಪ್ಯೂಟರ್ ನಿರ್ವಹಣೆಯ ಕನಿಷ್ಠ ಸಾಮಾನ್ಯ ಜ್ಞಾನ ಕಡ್ಡಾಯವಾಗಿದೆ.


ವಯೋಮಿತಿ ಅರ್ಹತೆ:
ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ವಯಸ್ಸಾಗಿರಬೇಕು. ವರ್ಗವಾರು ಗರಿಷ್ಠ ವಯೋಮಿತಿ ಸಡಿಲಿಕೆ ಈ ಕೆಳಗಿನಂತಿದೆ:
- ಸಾಮಾನ್ಯ ವರ್ಗದ (GM) ಅಭ್ಯರ್ಥಿಗಳಿಗೆ: ಗರಿಷ್ಠ 40 ವರ್ಷ.
- ಹಿಂದುಳಿದ ಪ್ರವರ್ಗ 2A, 2B, 3A, 3B ಅಭ್ಯರ್ಥಿಗಳಿಗೆ: ಗರಿಷ್ಠ 43 ವರ್ಷ.
- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ (SC/ST) ಹಾಗೂ ಪ್ರವರ್ಗ-1ರ ಅಭ್ಯರ್ಥಿಗಳಿಗೆ: ಗರಿಷ್ಠ 45 ವರ್ಷ.
ಅರ್ಜಿ ಶುಲ್ಕದ ವಿವರ:
ಈ ಹುದ್ದೆಗಳಿಗೆ ಅರ್ಜಿಯನ್ನು ಕಡ್ಡಾಯವಾಗಿ ಆನ್ಲೈನ್ ಮುಖಾಂತರವೇ ಸಲ್ಲಿಸಬೇಕು.
- ಸಾಮಾನ್ಯ ವರ್ಗ (GM) ಮತ್ತು ಇತರ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ: ₹500
- ಪ.ಜಾ, ಪ.ಪಂ, ಪ್ರವರ್ಗ-1 ಮತ್ತು ವಿಕಲಚೇತನ ಅಭ್ಯರ್ಥಿಗಳಿಗೆ: ₹250
ಆಯ್ಕೆ ಪ್ರಕ್ರಿಯೆ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶೀಘ್ರಲಿಪಿ ಪರೀಕ್ಷೆ (Shorthand Test) ಮತ್ತು ವೈಯಕ್ತಿಕ ಸಂದರ್ಶನದ (Interview) ಮೂಲಕ ಆಯ್ಕೆ ಮಾಡಲಾಗುವುದು.
ಪ್ರಮುಖ ದಿನಾಂಕಗಳು ಹಾಗೂ ಲಿಂಕ್:
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಏಪ್ರಿಲ್ 15
- ಅಧಿಕೃತ ವೆಬ್ಸೈಟ್: ಅಧಿಸೂಚನೆಯ ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿ ಸಲ್ಲಿಸಲು ಹೈಕೋರ್ಟ್ನ ಅಧಿಕೃತ ಜಾಲತಾಣ judiciary.karnataka.gov.in/index.php ಗೆ ಭೇಟಿ ನೀಡಿ.