ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ಚಿತ್ರದುರ್ಗ: ಏ.13
ಅಲ್ಪಸಂಖ್ಯಾತ ಘಟಕ ಅಧ್ಯಕ್ಷ ಸ್ಥಾನಕ್ಕೆ ಜಬ್ಬಾರ್ ರಾಜೀನಾಮೆ ವಿಚಾರ ಅವರ ವಿವೇಚನೆಗೆ ಬಿಟ್ಟಿದ್ದಾಗಿದೆ ರಾಜೀನಾಮೆ ಬಳಿಕ ಅಲ್ಪಸಂಖ್ಯಾತ ಘಟಕದ ಹೊಸ ಅಧ್ಯಕ್ಷ ನೇಮಕ ಹೊಸ ಅಧ್ಯಕ್ಷರ ಆಯ್ಕೆ ವೇಳೆ ಸಹಜ ಹೊಸ ಸಮಿತಿ ರಚನೆಯಾಗಲಿದೆ ಎಂದು ಸಚಿವ ಹೆಚ್ ಕೆ ಪಾಟೀಲ್ ಹೇಳಿದರು.
ಚಿತ್ರದುರ್ಗದಲ್ಲಿ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲ ಶಾಸಕರು ದೆಹಲಿಗೆ ಹೋಗಿದ್ದು ಮಾಧ್ಯಮಗಳ ಮೂಲಕ ತಿಳಿದಿದೆ ಮಂತ್ರಿ ಸ್ಥಾನ ನೀಡುವ ಬಗ್ಗೆ ಮನವರಿಕೆ ಮಾಡಲು ಹೋಗಿದ್ದಾರೆ ಹೈಕಮಾಂಡ್ ಬಳಿ ಹೋಗಿದ್ದರಲ್ಲಿ ಏನೂ ತಪ್ಪಿಲ್ಲ ಎಂದ ಸಚಿವರು, ದಾವಣಗೆರೆ, ಬಾಗಲಕೋಟೆಗಳಲ್ಲಿ ಕಾಂಗ್ರೆಸ್ ಗೆಲ್ಲಲಿದೆ ಹೆಚ್ಚು ಮತಗಳ ಅಂತರದಿಂದ ಕಾಂಗ್ರೆಸ್ ಗೆಲ್ಲಲಿದೆ ಈಗ ಪ್ರಚಾರದಲ್ಲಿರುವ ಸುದ್ದಿಗಳಿಗೆ ಪೂರ್ಣ ವಿರಾಮ ಬೀಳಲಿದೆ ಎಂದರು.


