ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ಚಿತ್ರದುರ್ಗ ಏ. 21
ಶ್ರೀ ಗಾನಯೋಗಿ ಸಂಗೀತ ಬಳಗ, ಚಿತ್ರದುರ್ಗ ಶಿವಶರಣೆ ಅಕ್ಕಮಹಾದೇವಿ ಜಯಂತ್ಯೋತ್ಸವ ಸಾಧಕರಿಗೆ ಸನ್ಮಾನ ಕಾರ್ಯಕ್ರಮವೂ ಏ. 24ರ ಶುಕ್ರವಾರ ಬೆಳಿಗ್ಗೆ 10.30ಕ್ಕೆ ನಗರದ ಹೊಳಲ್ಕೆರೆ ರಸ್ತೆಯ ಶ್ರೀಮತಿ. ಶಾರದಮ್ಮ ಶ್ರೀ ರುದ್ರಪ್ಪ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ಗಾನಯೋಗಿ ಸಂಗೀತ ಬಳಗದ ಗೌರವಾಧ್ಯಕ್ಷರಾದ ಬಸವರಾಜ ಕತ್ತಿ, ಅಧ್ಯಕ್ಷರಾದ ತೋಟಪ್ಪ ಉತ್ತಂಗಿ ಕಾರ್ಯದರ್ಶಿ ಎಸ್.ಸಿ. ವರದ ಶಂಕರ್ ತಿಳಿಸಿದ್ದಾರೆ. ಕಾರ್ಯಕ್ರಮದ ಸಾನಿಧ್ಯವನ್ನು ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲ್ಲೂಕಿನ ಕವಲೆತ್ತು ಬಸವಕೇಂದ್ರದ ಶರಣೆ ಮುಕ್ತಾಯಕ್ಕ ಮಾತಾಜಿ ವಹಿಸಲಿದ್ದಾರೆ.
ಅಧ್ಯಕ್ಷತೆಯನ್ನು ಶ್ರೀ ಗಾನಯೋಗಿ ಸಂಗೀತ ಬಳಗದ ಖಜಾಂಚಿ, ಎಸ್.ಜೆ.ಎಂ. ಕ್ರೆಡಿಟ್ ಕೋ- ಆಪರೇಟಿವ್ ಬ್ಯಾಂಕ್‍ನ ಸಹ ಲೆಕ್ಕಪಾಲಕರಾದ ಶ್ರೀಮತಿ ಸುಮಾ ರಾಜಶೇಖರ್ ವಹಿಸಲಿದ್ದಾರೆ. ನಿವೃತ್ತ ಉಪನ್ಯಾಸಕರಾದ ಶ್ರೀಮತಿ. ನೀಲಮ್ಮ ಬಸಯ್ಯರವರು ಅಕ್ಕಮಹಾದೇವಿ ಜೀವನ ದರ್ಶನದ ಬಗ್ಗೆ ಉಪನ್ಯಾಸವನ್ನು ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಚಿತ್ರದುರ್ಗ ನಗರಸಭೆಯ ಮಾಜಿ ಅಧ್ಯಕ್ಷರಾದ ಶ್ರೀಮತಿ ಸುನಿತಾ ಮಲ್ಲಿಕಾರ್ಜುನ್ ಬಾಪೂಜಿ ವಿದ್ಯಾ ಸಂಸ್ಥೆಯ ಸಂಸ್ಥಾಪಕರು, ಜಿಲ್ಲಾ ಶರಣ ಸಾಹಿತ್ಯ ಪರಿಷತ್‍ನ ಅಧ್ಯಕ್ಷರಾದ ಕೆ.ಎಂ. ವೀರೇಶ್ ಭಾಗವಹಿಸಲಿದ್ದಾರೆ.
ಚಿತ್ರದುರ್ಗ ಗಣನೀಯ ಸೇವೆಯನ್ನು ಮಾಡಿದ ಸಾಧಕರಾದ ಅಂಜನಾ ನೃತ್ಯ ಕಲಾ ಕೇಂದ್ರದ ವಿದ್ವಾನ್ ಶ್ರೀ ಸಿ.ಆರ್. ಶಿವಪ್ರಕಾಶ್, ಚಿನ್ಮೂಲಾದ್ರಿ ಸಾಹಿತ್ಯ ಸಾಂಸ್ಕೃತಿಕ ವೇದಿಕೆಯ ಸಂಸ್ಥಾಪಕರು ಹಾಗೂ ಸಾಹಿತಿಗಳಾದ ಶ್ರೀಮತಿ ದಯಾ ಪುತ್ತೂರ್ಕರ್, ಶ್ರೀ ಬಸವೇಶ್ವರ ಮೆಡಿಕಲ್ ಕಾಲೇಜ್ ಹಾಸ್ಪಿಟಲ್‍ನ ಸ್ತ್ರೀ ಮತ್ತು ಪ್ರಸೂತಿ ತಜ್ಞರಾದ ಶ್ರೀಮತಿ ಡಾ ಲತಾ ರಮೇಶ್, ಸಂಗೀತ ಶಿಕ್ಷಕರಾದ ಶ್ರೀಮತಿ ಕೋಕಿಲ ರುದ್ರಮೂರ್ತಿ ಹಾಗೂ ಗಾಯಕರಾದ ಶ್ರೀಮತಿ ಶಶಿಕಲಾ ಬಸವರಾಜ್‍ರವರನ್ನು ಸನ್ಮಾನಿಸಲಾಗುವುದು.
ಇದೇ ಸಂದರ್ಭದಲ್ಲಿ ಬಾಪೂಜಿ ಸಮೂಹ ಸಂಸ್ಥೆಗಳು ಕೆ.ಎಂ. ವೀರೇಶ್, ಯೋಗ ಗುರುಗಳಾದ ಚಿನ್ಮಯಾನಂದ, ಶಾರದಾ ಬ್ರಾಸ್ ಬ್ಯಾಂಡ್‍ನ ಎಸ್.ವಿ. ಗುರುಮೂರ್ತಿ, ಶಿಕ್ಷಕರಾದ ಶ್ರೀಮತಿ ಶೋಭ ಮಲ್ಲಿಕಾರ್ಜುನ್ ಹಾಗೂ ಸಮಾಜ ಸೇವಕರಾದ ಶ್ರೀಮತಿ ಅನ್ನಪೂರ್ಣ ಸಜ್ಜನ್‍ರವರಿಗೆ ಅಭಿನಂದನಾ ಸಲ್ಲಿಸಲಾಗುವುದು.
ಬೆಳಿಗ್ಗೆ 10 ರಿಂದ 10-30 ರವರೆಗೆ ಶ್ರೀ ಗಾನಯೋಗಿ ಸಂಗೀತ ಬಳಗದ ಸದಸ್ಯರಿಂದ ಸಾಮೂಹಿಕ ಗೀತ ಗಾಯನ ಕಾರ್ಯಕ್ರಮ ನಡೆಯಲಿದೆ.

